ಕ್ರೀಡಾಪಟುಗಳಿಗೆ ಪ್ರೊತ್ಸಾಹಧನ :ಅರ್ಜಿ ಆಹ್ವಾನ

0
239

ಬಳ್ಳಾರಿ,ಜು 30. 2020-21ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಅಡಿಯಲ್ಲಿ 2019ನೇ ಕ್ಯಾಲೆಂಡರ್ ವರ್ಷದಲ್ಲಿ ರಾಷ್ಟಿçÃಯ, ಅಂತರ್ ರಾಷ್ಟ್ರೀಯ, ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾ ಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾಪಟುಗಳಿಗೆ ಪ್ರೊತ್ಸಾಹಧನಕ್ಕೆ ಅರ್ಹರಿಂದ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆರ್ಹ ಅರ್ಜಿದಾರರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಲಗತ್ತಿಸಿರಬೇಕು, ರಾಷ್ಟç/ರಾಜ್ಯ/ಜಿಲ್ಲಾ ಮಟ್ಟದ ತಂಡಗಳನ್ನು ಪ್ರತಿನಿಧಿಸಿ ಸರ್ಕಾರದಿಂದ ಅಂಗೀಕೃತವಾದAತಹ ಕ್ರೀಡಾ ಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾಗಿರಬೇಕು, ರಾಷ್ಟç/ರಾಜ್ಯ/ಜಿಲ್ಲಾ ಮಟ್ಟದ ತಂಡಗಳನ್ನು ಪ್ರತಿನಿಧಿಸಿ ಸರ್ಕಾರದಿಂದ ಅಂಗೀಕೃತವಾದ0ತಹ ಕ್ರೀಡಾ ಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾಗಿರಬೇಕು, ಒಲಂಪಿಕ್ಸ್/ಏಷಿಯನ್/ಕಾಮನ್ ವೆಲ್ತ್ ಕ್ರೀಡೆಗಳಲ್ಲಿ ಅಂತರಾಷ್ಟ್ರೀಯ ಸಂಸ್ಥೆ ಮತ್ತು ಇತರೆ ಮಾನ್ಯತೆ ಪಡೆದ ಕ್ರೀಡಾ ಸಂಸ್ಥೆಗಳು ನಡೆಸುವ ಅಧಿಕೃತ ಚಾಂಪಿಯನ್ ಶಿಪ್‌ಗಳಿಗೆ ಮಾತ್ರ ಪ್ರೊತ್ಸಾಹ ಧನ ನೀಡಲಾಗುವುದು. (ಮಾನ್ಯತೆ ಪಡೆಯದೇ ಇರುವ ಯಾವುದೇ ಫೆಡರೇಷನ್ ನಡೆಸುವ ಕ್ರೀಡೆಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಪ್ರೊತ್ಸಾಹ ಧನಕ್ಕೆ ಅರ್ಹರಾಗಿರುವುದಿಲ್ಲ), ಅಂತರಾಷ್ಟಿçÃಯ ಮತ್ತು ರಾಷ್ಟ್ರೀಯ ಹಿರಿಯರ ಕ್ರೀಡಾ ಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಪ್ರೊತ್ಸಾಹ ಧನಕ್ಕೆ ಅರ್ಹರಾಗಿರುವುದಿಲ್ಲ, ಒಂದಕ್ಕಿAತ ಹೆಚ್ಚು ಪದಕಗಳನ್ನು ಪಡೆದಿದ್ದರೂ ಸಹ ಕ್ರೀಡಾಪಟುವಿನ ಒಂದು ಗರಿಷ್ಟ ಮಟ್ಟದ ಸಾಧನೆಯನ್ನು ಮಾತ್ರ ಪರಿಗಣಿಸಲಾಗುವುದು
ಅರ್ಜಿದಾರರು ಬ್ಯಾಂಕ್ ಖಾತೆ ಕಡ್ಡಾಯವಾಗಿ ಕ್ರೀಡಾಪಟುವಿನ ಹೆಸರಿನಲ್ಲಿರಬೇಕು. ಬ್ಯಾಂಕ್ ಪಾಸ್ ಪುಸ್ತಕದ ಮುಖ ಪುಟವನ್ನು ಲಗತ್ತಿಸಬೇಕು.
ಅರ್ಜಿಗಳನ್ನು ಕಚೇರಿಯ ವೆಬ್‌ಸೈಟ್ hಣಣಠಿ://ಞಚಿಡಿuಟಿಚಿಜu.ಞಚಿಡಿಚಿಟಿಣಚಿಞಚಿ.gov.iಟಿ/ಜಥಿes ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಆ.30ರೊಳಗೆ ಸಲ್ಲಿಸಬೇಕು ಹಾಗೂ ಮೂಲ ಪ್ರಮಾಣಗಳನ್ನು ಸಹ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಬೇಕು. ಕೇಂದ್ರ ಕಚೇರಿಗಳಲ್ಲಿ ಅರ್ಜಿಗಳನ್ನು ಸ್ವೀಕರಿಸಲಾಗವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಮೊ.ಸಂ. 7899935141ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here