190 ಲಕ್ಷ ವೆಚ್ಚದ ರಸ್ತೆ ಮರುಡಾಂಬರೀಕರಣಕ್ಕೆ ಭೂಮಿ ಪೂಜೆ ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣವಾಗಲಿ: ನಾಗವೇಣಿ

0
280

ಬಳ್ಳಾರಿ/ಹೊಸಪೇಟೆ,ಜು.30: ಶಾಸಕರ ಅನುದಾನದಲ್ಲಿ ಬಿಡುಗಡೆಯಾಗಿರುವ ಕಾಮಗಾರಿಯು ಉತ್ತಮ ಗುಣಮಟ್ಟದ ರಸ್ತೆಯಾಗಿ ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗಲಿದೆ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷರಾದ ನಾಗವೇಣಿ ಬಸವರಾಜ ಅವರು ಅಭಿಪ್ರಾಯಪಟ್ಟರು.
ನಗರದ ಹುಡಾ ಕಚೇರಿಯ ಬಳಿ ಗುರುವಾರ ಜರುಗಿದ ರಾಜ್ಯ ಹೆದ್ದಾರಿ 49ರ ಹಂಪಿ ರಸ್ತೆಯಿಂದ ಹುಡಾ ಕಚೇರಿವರೆಗಿನ ಚತುಷ್ಪತ ಬೈಪಾಸ್ ರಸ್ತೆಯ ಮರುಡಾಂಬರೀಕರಣ ಕಾಮಗಾರಿ ಭೂಮಿಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದರು.

ಲೋಕೋಪಯೋಗಿ ಇಲಾಖೆಯ 2019-20ನೇ ಸಾಲಿನ ಅಪೆಂಡಿಕ್ಸ್-ಇ ಯೋಜನೆಯ ಅಡಿಯಲ್ಲಿ ಮಂಜೂರದ 1 ಕೋಟಿ 90 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮರುಡಾಂಬರೀಕರಣ ಕಾಮಗಾರಿಗೆ ಚಾಲನೆ ದೊರೆತಿದ್ದು; ಪ್ರವಾಸಿಗರಿಗೆ, ಸಾರ್ವಜನಿಕರ ಸಂಚಾರಕ್ಕೆ ಅನುವಾಗಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರ ಅಭಿವೃದ್ಧಿ ಕಾರ್ಯಗಳಲ್ಲಿ ಕಾಮಗಾರಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಅವರು ಮಾತನಾಡಿದರು.ಈ ಸಂದರ್ಭದಲ್ಲಿ ಮಾಜಿ ಹುಡಾ ಅಧ್ಯಕ್ಷ ಐಯಾಳಿ ತಿಮ್ಮಪ್ಪ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕ ಧರ್ಮೇಂದ್ರ ಸಿಂಗ್, ಎಡಬ್ಲೂಇ ಕಿಶೋರ್ ಕುಮಾರ್, ಸಂದೀಪ್ ಸಿಂಗ್ ಸೇರಿದಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here