ಸ್ಥಾಯಿಸಮಿತಿ ಅಧ್ಯಕ್ಷರ ಆಯ್ಕೆ ಜಿ.ಪಂ. ಅಧ್ಯಕ್ಷರ ವಿವೇಚನೆಗೆ : ಸಭೆ ನಿರ್ಣಯ :

0
115

ಶಿವಮೊಗ್ಗ, ಆಗಸ್ಟ್ 10 : ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿಗಳ ಎರಡನೇ ಅವಧಿಯು ಸದಸ್ಯದಲ್ಲಿಯೆ ಮುಕ್ತಾಯಗೊಳ್ಳಲಿರುವ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆಯ ಸಂಪೂರ್ಣ ಜವಾಬ್ದಾರಿಯನ್ನು ಪಕ್ಷಾತೀತವಾಗಿ ಅಧ್ಯಕ್ಷರ ವಿವೇಚನೆ ನೀಡಿ ನಿರ್ಣಯ ಕೈಗೊಳ್ಳಲಾಯಿತು.

ಇಂದು ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‍ಸಾಬ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿಗಳ ಎರಡನೇ ಅವಧಿಯು ಸದಸ್ಯದಲ್ಲಿಯೆ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಎಸ್.ಕುಮಾರ್ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಾಮಾನ್ಯ ಸಭೆಯಲ್ಲಿ ಏರ್ಪಡಿಸಲಾಗಿತ್ತು.ಈ ಸಭೆಯಲ್ಲಿ ಭಾಗವಹಿಸಿದ್ದ ಗ್ರಾಮೀಣಾಭಿವೃದ್ಧಿ, ಪಂಚಾಯತ್‍ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿನ ವಿದ್ಯುತ್ ಸಮಸ್ಯೆಯನ್ನು ಇತ್ಯರ್ಥಪಡಿಸಲು ಅರಣ್ಯ ಮತ್ತು ಮೆಸ್ಕಾಂನ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವಿಷಯ ಅರಿತು ಸಮಸ್ಯೆಗಳ ಇತ್ಯರ್ಥಕ್ಕೆ ಅಗತ್ಯ ಕ್ರಮ ವಹಿಸಲಾಗುವುದು ಎಂದ ಅವರು ಗ್ರಾಮೀಣ ಪ್ರದೇಶದಲ್ಲಿ ಅನುಮತಿ ಇಲ್ಲದೇ ಎಲ್ಲೆಂದರಲ್ಲಿ ಕೊಳವೆಬಾವಿಗಳನ್ನು ಕೊರೆಸಿದ್ದು, ಹಣ ಬಿಡುಗಡೆಗೊಳ್ಳಲಿದಿರುವ ಬಗ್ಗೆ ಚುನಾಯಿತ ಪ್ರತಿನಿಧಿಗಳಿಂದ ದೂರುಗಳು ಬರುತ್ತಲೇ ಇವೆ. ನಿಯಮಾನುಸಾರ ಕ್ರಮ ವಹಿಸಿದ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯಾಗಲಿದೆ. ಉಳಿದಂತೆ ಇರುವ ಸಮಸ್ಯೆಗಳಿಗೆ ಆದ್ಯತೆಯ ಮೇರೆಗೆ ಅನುದಾನ ಬಿಡುಗಡೆಗೊಳಿಸಲಾಗುವುದು ಎಂದರು.ಮಳೆಯಿಂದ ಹಾನಿಗೊಳಗಾಗಿ ಮನೆ ನಾಶವಾಗಿರುವ ಸಂತ್ರಸ್ಥರಿಗೆ ಆರ್ಥಿಕ ನೆರವು ನೀಡಲು ಸರ್ಕಾರ ಬದ್ಧವಾಗಿದೆ. ತಕ್ಷಣದ ಕ್ರಮವಾಗಿ 10,000/-ರೂ.ಗಳನ್ನು ನೀಡುವಂತೆ ಹಾಗೂ ನೂತನವಾಗಿ ಮನೆ ನಿರ್ಮಿಸಿಕೊಳ್ಳಲಿರುವ ಸಂತ್ರಸ್ಥರಿಗೆ 5ಲಕ್ಷ ರೂ.ಗಳನ್ನು ಬಿಡುಗಡೆಗೊಳಿಸಲಾಗುವುದು ಆ ಪೈಕಿ 1ಲಕ್ಷ ರೂ.ಗಳನ್ನು ತಕ್ಷಣ ಬಿಡುಗಡೆಗೊಳಿಸುವಂತೆಯೂ ಸೂಚಿಸಲಾಗಿದೆ ಎಂದ ಅವರು ಖಾತೆ ಹೊಂದಿರದ ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿರುವ ಸಂತ್ರಸ್ಥರಿಗೆ ಪರಿಹಾರ ವಿಳಂಬವಾಗುತ್ತಿರುವುದನ್ನು ಗಮನಿಸಲಾಗಿದೆ. ಈ ಸಮಸ್ಯೆಯ ಇತ್ಯರ್ಥಕ್ಕೆ ಸದನದ ಉಪಸಮಿತಿಯಲ್ಲಿ ಚರ್ಚಿಸಿ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದವರು ನುಡಿದರು.

ಕಳೆದ ಸಾಲಿನಲ್ಲಿ ಮಳೆಯಿಂದ ಹಾನಿಗೊಳಗಾದ ರಸ್ತೆ, ಸೇತುವ ದುರಸ್ತಿಗೆ 120ಕೋಟಿ ರೂ.ಗಳನ್ನು ಮಂಜೂರಾಗಿದ್ದು, ಈವರಗೆ ಶೇ.80ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಉಳಿದ ಶೇ.20ರಷ್ಟು ಕಾವiಗಾರಿಯನ್ನು ಮಳೆಗಾಲ ಮುಗಿದ ನಂತರ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದ ಅವರು, ತೋಟ ಕಳೆದುಕೊಂಡ ಕೃಷಿಕರಿಗೆ ಪರಿಹಾರಧನ ನೀಡಲಾಗುವುದು. ವಿಶೇಷವಾಗಿ ವಾಸ್ತವವಾಗಿ ಆಗಿರುವ ನಷ್ಟವನ್ನು ಭರಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಅಲ್ಲದೇ ಹಾನಿಗೊಳಗಾದ ಕೆರೆ, ಕಟ್ಟೆ-ಕಾಲುವೆಗಳನ್ನು ದುರಸ್ತಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅದಕ್ಕಾಗಿ ಮಳೆಗಾಲ ಮುಗಿಯುತ್ತಿದ್ದಂತೆಯೇ ದುರಸ್ತಿಕಾರ್ಯ ಆರಂಭಿಸಲಾಗುವುದು ಎಂದವರು ನುಡಿದರು.

ಪ್ರತಿ ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿನ ಸಮಸ್ಯೆಗಳ ಕುರಿತು ಆಗಸ್ಟ್ 20ರೊಳಗಾಗಿ ಲಿಖಿತವಾಗಿ ಅರ್ಜಿ ನೀಡುವಂತೆ ಸೂಚಿಸಿದ ಅವರು, ಸೆಪ್ಟಂಬರ್ ಮೊದಲ ವಾರದಲ್ಲಿ 2ದಿನಗಳ ಜಿ.ಪಂ. ಸರ್ವ ಸದಸ್ಯರ ಸಭೆ ಕರೆದು ಸಮಸ್ಯೆಗಳನ್ನು ಇತ್ಯರ್ಥಪಡಿಸಲಾಗುವುದು ಎಂದವರು ನುಡಿದರು.ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯಿತಿ ಸದಸ್ಯರು ಆಯಾ ಕ್ಷೇತ್ರಗಳಲ್ಲಿ ಆಗಬೇಕಾದ ಕಾಮಗಾರಿಗಳು, ಜ್ವಲಂತ ಸಮಸ್ಯೆಗಳ ಕುರಿತು ಸಚಿವರ ಗಮನಕ್ಕೆ ತಂದರು.
ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಎಸ್.ಕುಮಾರ್, ಉಪಾಧ್ಯಕ್ಷೆ ಶ್ರೀಮತಿ ವೇದಾವಿಜಯಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಎಂ.ಎಲ್.ವೈಶಾಲಿ, ಶಾಸಕರಾದ ಆರಗ ಜ್ಞಾನೇಂದ್ರ, ಅಶೋಕನಾಯ್ಕ, ಶ್ರೀಮತಿ ಭಾರತಿಶೆಟ್ಟಿ ಸೇರಿದಂತೆ ಜಿಲ್ಲಾ ಪಂಚಾಯತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here