20 ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಂಡ ಶಿಕ್ಷಣ ಇಲಾಖೆ ಬಳ್ಳಾರಿಯಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ ಅ.4ರಂದು

0
89

ಬಳ್ಳಾರಿ,ಸೆ.28 ಶಿಕ್ಷಕರ ಅರ್ಹತಾ ಪರೀಕ್ಷೆ-2019ರ (ಟಿಇಟಿ) ಪರೀಕ್ಷೆಯ ನಗರದ 20 ಪರೀಕ್ಷಾ ಕೇಂದ್ರಗಳಲ್ಲಿ ಅ.4 ರಂದು ನಡೆಯಲಿದ್ದು, ಪರೀಕ್ಷೆಗೆ ಸಕಲ ಸಿದ್ಧತೆಗಳನ್ನು ಶಿಕ್ಷಣ ಇಲಾಖೆ ಮಾಡಿಕೊಂಡಿದೆ. ಅಚಿದು ನಡೆಯುವ ಮೊದಲ ಅಧಿವೇಶನದಲ್ಲಿ 2956 ಮತ್ತು ಎರಡನೇ ಅಧಿವೇಶನದಲ್ಲಿ 6713 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ, ಉಪನಿರ್ದೇಶಕರಾದ ಸಿ.ರಾಮಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಗರದ 20 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಪರೀಕ್ಷೆಗೆ ಸಕಲ ಪೂರ್ವ ಸಿದ್ದತೆ ಮಾಡಿಕೊಳ್ಳಲಾಗಿದೆ. ಅ.04ರಂದು ಮೊದಲ ಅಧಿವೇಶನವು ಬೆಳಗ್ಗೆ 9.30 ರಿಂದ 12 ಗಂಟೆಯವರೆಗೆ ಮತ್ತು ಎರಡನೇ ಅಧಿವೇಶನವು ಮಧ್ಯಾಹ್ನ 2.00 ರಿಂದ 4.30 ರವರೆಗೆ ನಡೆಯಲಿದೆ. ಪರೀಕ್ಷೆಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳು sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನಲ್ಲಿ ತಮ್ಮ ಪ್ರವೇಶ ಪತ್ರಗಳನ್ನು ಅರ್ಜಿ ಸಂಖ್ಯೆ ಮತ್ತು ಜನ್ಮದಿನಾಂಕ ನಮೂದಿಸುವುದರ ಮೂಲಕ ಪ್ರವೇಶ ಪತ್ರಗಳ ಡೌನ್‍ಲೋಡ್ ಮಾಡಿಕೊಳ್ಳಬಹುದು. ಕೋವಿಡ್-19 ಎಸ್.ಒ.ಪಿ ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸಲು ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಿಗೆ ನಿರ್ದೇಶನ ನೀಡಲಾಗಿದೆ.
ಎಲ್ಲಾ ಪರೀಕ್ಷಾ ಕೇಂದ್ರದ ಸಿಬ್ಬಂದಿಯು ಸಮಯಕ್ಕೆ ಸರಿಯಾಗಿ ಕಡ್ಡಾಯವಾಗಿ ಹಾಜರಾಗಬೇಕು. ಆರೋಗ್ಯದ ಸುರಕ್ಷತೆ ದೃಷ್ಠಿಯಿಂದ ಸಾಮಾಜಿಕ ಅಂತರ ಕಾಪಾಡಿಕೊಂಡು ಮುಂಜಾಗೃತ ಕ್ರಮಗಳನ್ನು ಅನುಸರಿಸಲು ಸಲಹೆ ನೀಡಲಾಗಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಮತ್ತು ಸಿಬ್ಬಂದಿಗಳ ಉಷ್ಣಾಂಶ ಪರೀಕ್ಷೆಗಾಗಿ ಥರ್ಮೋಮೀಟರ್‍ಗಳನ್ನು ಬಳಕೆ ಮಾಡಿಕೊಂಡು ಆರೋಗ್ಯ ಸುರಕ್ಷತೆ ಕಾಪಾಡಿಕೊಳ್ಳಲು ಕ್ರಮ ವಹಿಸಿದೆ. ಪ್ರತಿ ಕೊಠಡಿಯಲ್ಲಿ 20 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಅದರಲ್ಲಿ ಪ್ರತಿ ಬೆಂಚಗೆ ಒಂದು ಮೀಟರ್ ದೈಹಿಕ ಅಂತರ ಕಾಪಾಡಿಕೊಂಡು ಇಬ್ಬರು ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಆಸನ ವ್ಯವಸ್ಥೆ ಸಜ್ಜುಗೊಳಿಸಲಾಗಿದೆ. ಪ್ರತಿ ಅಭ್ಯರ್ಥಿ ಮುಖಗವಸನ್ನು ಧರಿಸಿ ಪರೀಕ್ಷೆಗೆ ಹಾಜರಾಗಬೇಕು ಮತ್ತು ತಮ್ಮದೇ ಆದ ನೀರಿನ ಬಾಟಲ್ ತರಲು ಅವಕಾಶ ನೀಡಿದೆ. ಅಭ್ಯರ್ಥಿ ಕೋವಿಡ್-19 ಪಾಸಿಟಿವ್ ಎಂದು ಗುರುತಿಸಲ್ಪಟ್ಟು, ಅಂತಹ ಅಭ್ಯರ್ಥಿಯು ಪರೀಕ್ಷೆ ಬರೆಯಲು ಇಚ್ಚಿಸಿದಲ್ಲಿ ಅಂತಹ ಅಭ್ಯರ್ಥಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿ ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೋವಿಡ್-19 ಪಾಸಿಟಿವ್ ಬಂದ ಅಭ್ಯರ್ಥಿಗಳು ಪರೀಕ್ಷಾ ಅವಧಿಗೆ ಎರಡು ದಿನಗಳ ಮುಂಚಿತವಾಗಿ ಕೋವಿಡ್-19 ಪಾಸಿಟಿವ್ ಇರುವ ಬಗ್ಗೆ ಜಿಲ್ಲಾ ನೋಡಲ್ ಅಧಿಕಾರಿಗಳಾದ, ಎ.ಕೆ.ಸತ್ಯನಾರಾಯಣ ಮೊ.ನಂ: 9740738762 ಕರೆ ಮಾಡಿ ಗಮನಕ್ಕೆ ತರಬೇಕು ಎಂದು ಅವರು ತಿಳಿಸಿದ್ದಾರೆ.
ಎಲೆಕ್ಟ್ರಾನಿಕ್ ಉಪಕರಣಗಳು ತರುವುದು ನಿಷೇಧ : ಅಭ್ಯರ್ಥಿಗಳು ಮೊಬೈಲ್ ಫೋನ್, ಬ್ಲೂಟೂತ್ ಡಿವೈಸ್, ಪೇಜರ್, ವೈರ್‍ಲೆಸ್, ಕ್ಯಾಲ್ಕುಲೇಟರ್, ಇತರೆ ಮೊದಲಾದ ಎಲೆಕ್ಟ್ರಾನಿಕ್ ಉಪಕರಣಗಳು, ಸ್ಲೈಡ್ ರೂಲುಗಳು, ಮಾರ್ಕರ್‍ಗಳು, ಲಾಗ್ ಟೇಬಲ್‍ಗಳು, ವೈಟ್‍ಫ್ಲೂಯಿಡ್‍ಗಳು, ಬ್ಲೇಡು, ಎರೇಸರ್ ಇವುಗಳನ್ನು ಪರೀಕ್ಷಾ ಕೇಂದ್ರದ ಆವರಣದೊಳಗೆ ತರುವುದನ್ನು ನಿಷೇಧಿಸಲಾಗಿದೆ.
ಪರೀಕ್ಷಾ ಕೇಂದ್ರ ಸುತ್ತಲೂ 200 ಮೀಟರ್ 144 ಸೆಕ್ಷನ್ : ಪರೀಕ್ಷಾ ಕೇಂದ್ರದ ಸುತ್ತಮುತ್ತ ಪ್ರದೇಶವನ್ನು ಸೆಕ್ಷನ್ 144 ಜಾರಿ ಮತ್ತು ಜೆರಾಕ್ಸ್, ಸೈಬರ್‍ಕೆಫೆ, ಕಂಪ್ಯೂಟರ್ ಸೆಂಟರ್‍ಗಳನ್ನು ಮುಚ್ಚಿಸಲು ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ. ಪೋಲಿಸ್ ಇಲಾಖೆಯ ವತಿಯಿಂದ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋ ಬಸ್ತು ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಹೆಲ್ತ್ ಕೌಂಟರ್‍ಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಯವರು ಮತ್ತು ಆಶಾ ಕಾರ್ಯಕರ್ತರು ಪರೀಕ್ಷಾ ಪ್ರಾರಂಭದ ಮುನ್ನ ಆರೋಗ್ಯ ತಪಾಸಣೆ ಕೈಗೊಂಡು ಪ್ರತಿ ಅಭ್ಯರ್ಥಿಯು ಕೈಗಳನ್ನು ಸ್ಯಾನಿಟೈಸ್ ಮಾಡಿಕೊಳ್ಳಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here