ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

0
81

ಬಳ್ಳಾರಿ,ಅ.16: ಜಿಲ್ಲಾ ಇ-ಸಂಜೀವಿನಿ ಕಾರ್ಯಕ್ರಮದ ಅಡಿಯಲ್ಲಿ ವೈದ್ಯಾಧಿಕಾರಿ ಹುದ್ದೆಗೆ ಎಂ.ಬಿ.ಬಿ.ಎಸ್ ವಿದ್ಯಾಭ್ಯಾಸ ಮಾಡಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಇ-ಆಸ್ಪತ್ರೆಯ ಕಾರ್ಯಕ್ರಮದ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಂಬಿಬಿಎಸ್ ವಿದ್ಯಾಭ್ಯಾಸ ಮಾಡಿರಬೇಕು. ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಆಯ್ಕೆಮಾಡಲಾಗುವುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಅ.27ರೊಳಗೆ ಈ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅ.28ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಸಂದರ್ಶನ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ದೂ.ಸಂ.08392-270710 ಅಥವಾ ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here