ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟುವುದು ಅತ್ಯಾವಶ್ಯಕ: ಡಾ|| ಸತೀಶ್

0
94

ಹಾಸನ.ನ.13- ಹೆಣ್ಣು-ಗಂಡು ಲಿಂಗಾನುಪಾತದಲ್ಲಿ ಆಗುವ ವ್ಯತ್ಯಾಸದಿಂದ ಸಮಾಜದ ಮೇಲೆ ಉಂಟಾಗುವ ದುಷ್ಪರಿಣಾಮವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಣ್ಣು ಭ್ರೂಣ ಹತ್ಯೆಯಾಗದಂತೆ ಎಚ್ಚರ ವಹಿಸಬೇಕಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ತಿಳಿಸಿದ್ದಾರೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ (ಪಿ.ಸಿ.& ಪಿ.ಎನ್.ಡಿ.ಟಿ) ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ ಕುರಿತು ಅರಿವು ಮೂಡಿಸಲು ನ.18 ರಂದು ಚನ್ನರಾಯಪಟ್ಟಣದಲ್ಲಿ ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಸ್ಕ್ಯಾನಿಂಗ್ ಮಿಷನ್ ಖರೀದಿಸಲು ಅನುಮತಿ ಕೋರಿ ಬಂದಂತಹ ಅರ್ಜಿಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಆರ್. ಸಿ .ಎಚ್ .ಅಧಿಕಾರಿ ಡಾ|| ಕಾಂತರಾಜ್, ಡಾ|| ಶೈಲೇಶ್, ಡಾ|| ಸಾವಿತ್ರಿ, ಕೆ.ಟಿ. ಜಯಶ್ರೀ, ರಿಹಾನ, ಮಧುರ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here