ಕೋವಿಡ್-೧೯ ಸೋಂಕು ನಿಯಂತ್ರಣ ವಿಶೇಷ ಜಾಗೃತಿ ಪ್ರಚಾರ

0
85

ಗದಗ ನವೆಂಬರ್ ೧೭ : ಗದಗ ತಾಲ್ಲೂಕಿನ ಚಿಕ್ಕೊಪ್ಪ ಗ್ರಾಮದಲ್ಲಿ ಕೋವಿಡ್-೧೯ ಸೋಂಕು ಹರಡುವಿಕೆ ತಡೆಗಟ್ಟುವ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಏರ್ಪಡಿಸಲಾದ ವಿಶೇಷ ಜಾಗೃತಿ ಪ್ರಚಾರ ಕಾರ್ಯಕ್ರಮದ ಅಂಗವಾಗಿ ಬೃಹತ್ ಎಲ್.ಇ.ಡಿ. ಪರದೆ ಹೊಂದಿರುವ ಪ್ರಚಾರ ವಾಹನ ಮೂಲಕ ಸೋಮವಾರ ಅರಿವು ಮೂಡಿಸಲಾಯಿತು.

ಕೋವಿಡ್-೧೯ ಸೋಂಕು ನಿಯಂತ್ರಣ ಕುರಿತು ಗ್ರಾಮೀಣ ಹೆಚ್ಚು ಅರಿವು ಮೂಡಿಸುವ ಉದ್ದೇಶದೊಂದಿಗೆ ಜಾಗೃತಿ ಹಮ್ಮಿಕೊಳ್ಳಲಾಗಿದ್ದು, ಕೋವಿಡ್-೧೯ ಕ್ಕೆ ಔಷಧಿ ಬರುವವರೆಗೆ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ ಧಾರಣೆ ಹಾಗೂ ಸಾಮಾಜಿಕ ಅಂತರ ಕಾಪಾಡುವದರ ಜೊತೆಗೆ ವೈಯಕ್ತಿಕ ಶುಚಿತ್ವಕ್ಕೆ ಹೆಚ್ಚಿನ ಮಹತ್ವ ನೀಡುವಂತೆ ಬೃಹತ್ ಎಲ್‌ಇಡಿ ಪರದೆಯಲ್ಲಿ ಪ್ರಸಾರವಾದ ವಿಡಿಯೋ ಮೂಲಕ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಚಿಕ್ಕೊಪ್ಪ ಗ್ರಾಮಸ್ಥರು ಸಾಮಾಜಿಕ ಅಂತರ ಕಾಯ್ದುಕೊಂಡು ಕೋವಿಡ್-೧೯ ಅರಿವು ಕಾರ್ಯಕ್ರಮವನ್ನು ವಿಕ್ಷೀಸಿದರು.

LEAVE A REPLY

Please enter your comment!
Please enter your name here