ಆರೋಗ್ಯ ಇಲಾಖೆ ಕಾರ್ಯಕ್ರಮಗಳ ಅರಿವು: ಕಲಾತಂಡಗಳ ಆಯ್ಕೆ

0
77

ಬಳ್ಳಾರಿ,ಡಿ.08 : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ 2020-21ನೇ ಸಾಲಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಲು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಜಿಲ್ಲೆಯದಾದ್ಯಂತ 80 ಜಾನಪದ ಕಲಾ ಪ್ರರ್ದಶನದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಲಾತಂಡಗಳ ಆಯ್ಕೆ ಪ್ರಕ್ರಿಯೆ ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆಯಿತು.
ಅರ್ಜಿ ಸಲ್ಲಿಸಿದ ಕಲಾತಂಡಗಳು ಕೊರೊನಾ,ಕ್ಷಯರೋಗ,ಶುಚಿತ್ವ,ತಾಯಿ-ಶಿಶು ಆರೋಗ್ಯ ಸೇರಿದಂತೆ ವಿವಿಧ ಆರೋಗ್ಯ ಸಂಬಂಧಿತ ವಿಷಯಗಳ ಕುರಿತು ತಮ್ಮ ಕಲಾಪ್ರತಿಭೆಯನ್ನು ಪ್ರದರ್ಶಿಸಿದರು. ಕಲಾತಂಡಗಳ ಪ್ರದರ್ಶನ ಒಂದಕ್ಕಿಂತ ಒಂದು ಅದ್ಭುತವಾಗಿತ್ತು.
ಅಂತಿಮವಾಗಿ ಹೆಚ್ಚು ಅಂಕಗಳಿಸಿದ 6 ತಂಡಗಳನ್ನು ಸಮಿತಿ ಸಭೆಯ ಸದಸ್ಯರು ಆಯ್ಕೆ ಮಾಡಿದರು. ಇಲ್ಲಿ ಆಯ್ಕೆಯಾದ ತಂಡಗಳು ಕಲಬುರಗಿಯಲ್ಲಿ ನಡೆಯಲಿರುವ ವಿಭಾಗಮಟ್ಟದ ಕಾರ್ಯಾಗಾರದಲ್ಲಿ ಭಾಗಿಯಾಗಿ,ನಂತರ ಜಿಲ್ಲೆಯಲ್ಲಿ ಕಾರ್ಯಕ್ರಮಗಳು ನೀಡಲಿವೆ.
ಆಯ್ಕೆ ಸಮಿತಿ ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ವಿಜಯಲಕ್ಷ್ಮೀ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ್, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಗೌರಮ್ಮ, ಮಾನಿಟರಿಂಗ್ ಮತ್ತು ಮೌಲ್ಯಮಾಪನ ವ್ಯವಸ್ಥಾಪಕ ಮಹೇಂದ್ರಕುಮಾರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಪ್ರತಿನಿಧಿ ನೀಲಮ್ಮ ಸೇರಿದಂತೆ ಇನ್ನೀತರರು ಇದ್ದರು.

LEAVE A REPLY

Please enter your comment!
Please enter your name here