ಮಂತ್ರಾಲಯದ ವಿದ್ವಾನ್ ರಾಜಾ ಎಸ್.ಗಿರಿ ಆಚಾರ್ಯಗೆ ಗೌಡಾ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ 8ನೇ ಘಟಿಕೋತ್ಸವ ಡಿ.29ರಂದು

0
130

ಬಳ್ಳಾರಿ,ಡಿ.26: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಎಂಟನೇ ಘಟಿಕೋತ್ಸವವು ಡಿ.29 ರಂದು ಬೆಳಗ್ಗೆ 11ಕ್ಕೆ ವಿಶ್ವವಿದ್ಯಾಲಯದ ಬಯಲು ಮಂದಿರದಲ್ಲಿ ನಡೆಯಲಿದೆ.ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ, ವಿಶ್ವವಿದ್ಯಾಲಯ ಅನುದಾನನ ಆಯೋಗದ ಕಾರ್ಯದರ್ಶಿಗಳು ಮತ್ತು ಸಿ.ವಿ.ಓ ಪ್ರೊ.ರಂಜನೀಶ್ ಜೈನ್ ಅವರು ಆನ್‍ಲೈನ್ ಮೂಲಕ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಕುಲಪತಿ ಪ್ರೊ.ಸಿದ್ದು ಆಲಗೂರು ಉಪಸ್ಥಿತರಿರಲಿದ್ದಾರೆ ಎಂದು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಸಿದ್ದು ಪಿ.ಆಲಗೂರು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವಿಜಯನಗರ ವಿಶ್ವವಿದ್ಯಾಲಯದ ಅಂಬೇಡ್ಕರ್ ಸಭಾಂಗಣದಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಘಟಿಕೋತ್ಸವದಲ್ಲಿ ವಿವಿಧ ವಿಭಾಗಗಳ ಒಟ್ಟು 52 ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಗುವುದು. 43 ಸಂಶೋಧನಾರ್ಥಿಗಳು ಗೌರವ ಡಾಕ್ಟರೇಟ್, ಎಲ್ಲಾ ವಿಭಾಗಗಳ 40 ವಿದ್ಯಾರ್ಥಿಗಳು ರ್ಯಾಂಕ್ ಪ್ರಮಾಣ ಪತ್ರಗಳನ್ನು ಪಡೆದುಕೊಳ್ಳಲಿದ್ದಾರೆ ಎಂದರು. ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮಂತ್ರಾಲಯದ ವಿದ್ವಾನ್ ರಾಜಾ ಎಸ್.ಗಿರಿ ಆಚಾರ್ಯ ಅವರಿಗೆ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪುರಸ್ಕಾರವನ್ನು ನೀಡಿ ಗೌರವಿಸಲಿದೆ ಎಂದರು.


ಈ ಘಟಿಕೋತ್ಸವ ಕಾರ್ಯಕ್ರಮವು ಕೋವಿಡ್-19 ಮುಂಜಾಗ್ರತೆಗಾಗಿ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಿ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.
ಈ ಸುದ್ದಿಗೊಷ್ಠಿಯಲ್ಲಿ ಕುಲಸಚಿವರಾದ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವರಾದ (ಮೌಲ್ಯಮಾಪನ) ಪ್ರೊ. ಶಶಿಕಾಂತ ಎಸ್.ಉಡಿಕೇರಿ ಇನ್ನೀತರರು ಇದ್ದರು.

LEAVE A REPLY

Please enter your comment!
Please enter your name here