ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

0
121

ಬಳ್ಳಾರಿ, ಜ.04 : ಉದ್ಯೋಗ ಮತ್ತು ತರಬೇತಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಬಳ್ಳಾರಿಯ ರೇಡಿಯೋ ಪಾರ್ಕ್ ಹತ್ತಿರವಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ಸೀಟುಗಳ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಪಾ, ಸೀವಿಂಗ್ ಟೆಕ್ನಾಲಜಿ, ಮೆಕ್ಯಾನಿಕ್ ಡೀಸೆಲ್, ವೆಲ್ಡರ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಮಷಿನಿಸ್ಟ್, ಎಂ.ವಿ.ವಿ, ಟರ್ನರ್‍ನಲ್ಲಿ ವೃತ್ತಿಗಳ ಪ್ರವೇಶದಲ್ಲಿ ಖಾಲಿ ಇರುತ್ತದೆ.
ಆಸಕ್ತ ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಟಿ.ಸಿ, ಹಾಗೂ ಇತರೆ ದಾಖಲಾತಿಗಳೊಂದಿಗೆ ಇದೇ ಜ.16 ರೊಳಗಾಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ರೇಡಿಯೋ ಪಾರ್ಕ್, ಬಳ್ಳಾರಿ ಕಚೇರಿಗೆ ಸಲ್ಲಿಸಬೇಕು. ಅಭ್ಯರ್ಥಿಗಳನ್ನು ಮೆರಿಟ್ ಕಂ ರಿಸರ್ವೇಶನ್ ಆಧಾರದ ಮೇಲೆ ಪ್ರವೇಶಾತಿ ನಡೆಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here