ತೆಲಗಿ ಸಮುದಾಯ ಆರೋಗ್ಯಕೇಂದ್ರದಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮ ಆರಂಭ

0
80

ಬಳ್ಳಾರಿ,ಜ.20 : ಜಿಲ್ಲೆಯ ಹರಪನಹಳ್ಳಿ ತಾಲೂಕು ತೆಲಗಿ ಗ್ರಾಮದ ಸಮುದಾಯ ಆರೋಗ್ಯಕೇಂದ್ರದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ವಿನುತಾ ಅವರು ಬುಧವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ.ವಿನುತಾ ಅವರು ಈ ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮಗಳು ಆಗುವುದಿಲ್ಲ ಹಾಗೂ ಗಾಬರಿ ಪಡುವ ಅಗತ್ಯವಿಲ್ಲ ಹಾಗೂ ಅತ್ಯಂತ ಸುರಕ್ಷಿತವಾಗಿದೆ ಎಂದರು.
ಎಲ್ಲ ಆರೋಗ್ಯಸೇವಾ ಸಿಬ್ಬಂದಿಗಳು ಈ ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳುವುದರ ಮೂಲಕ ಈ ಅಭಿಯಾನ ಯಶಸ್ವಿಗೊಳಿಸಬೇಕು ಎಂದರು. ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಈ ಸಂದರ್ಭದಲ್ಲಿದ್ದರು.

LEAVE A REPLY

Please enter your comment!
Please enter your name here