ಹೊಸಪೇಟೆ:ಅಂಬಿಗರ ಚೌಡಯ್ಯ ಜಯಂತಿ ಆಚರಣೆ

0
98

ಬಳ್ಳಾರಿ/ಹೊಸಪೇಟೆ : ಹೊಸಪೇಟೆಯ ತಾಲೂಕು ಕಚೇರಿಯ ಆವರಣದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿಯನ್ನು ಸರಳವಾಗಿ ಅರ್ಥಪೂರ್ಣವಾಗಿ ಗುರುವಾರ ಆಚರಿಸಲಾಯಿತು.
ತಹಸೀಲ್ದಾರ್ ಹೆಚ್.ವಿಶ್ವನಾಥ್ ಅವರು ನಿಜಶರಣ ಅಂಬಿಗರ ಚೌಡಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಕೋವಿಡ್-19 ಹಿನ್ನಲೆಯಲ್ಲಿ ಸರ್ಕಾರದ ಮಾರ್ಗಸೂಚಿಯ ಅನ್ವಯ ಅಧಿಕಾರಿಗಳು ಹಾಗೂ ಮುಖಂಡರು ಮಾಸ್ಕ್ ಧರಿಸುವಿಕೆ ಮತ್ತು ಸಾಮಾಜಿಕ ಅಂತರದಿಂದ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಕಚೇರಿಯ ಶಿರಸ್ತೇದಾರರಾದ ಶ್ರೀಧರ್, ರಮೇಶ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ್, ಆಹಾರ ಇಲಾಖೆಯ ಪ್ರ.ದ.ಸ. ಮಂಜುನಾಥ್, ಗಂಗಾಮತ ಸಮಾಜದ ಮುಖ್ಯಸ್ಥರರಾದ ಯಮುನೇಶ್, ಅಂಬಿಗರ ಚೌಡಯ್ಯ ಸೇವಾ ಟ್ರಸ್ಟ್‍ನ ಅಧ್ಯಕ್ಷರಾದ ಸುಭಾಷ ಹಾಗೂ ಇತರರು ಇದ್ದರು.

LEAVE A REPLY

Please enter your comment!
Please enter your name here