ಎಐಡಿಎಸ್‍ಓ ವಿದ್ಯಾರ್ಥಿ ಸಂಘಟನೆ ವತಿಯಿಂದ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಪ್ರತಿಭಟನಾ ದಿನವನ್ನು ವಿವಿದ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿ ಮುಖ್ಯಮಂತ್ರಿಗಳಿಗೆ ತಹಶಿಲ್ದಾರರ ಮುಖಾಂತರ ಮನವಿ

0
92

ಸಂಡೂರು.ಬಳ್ಳಾರಿ : ಪ್ರಸಕ್ತ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ಅನೇಕ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಪ್ರತಿಭಟನೆ ಇಂದು ಎಐಡಿಎಸ್‍ಓ ವಿದ್ಯಾರ್ಥಿ ಸಂಘಟನೆ ವತಿಯಿಂದ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಪ್ರತಿಭಟನಾ ದಿನವನ್ನು ವಿವಿದ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿ ಮಾನ್ಯ ಮುಖ್ಯಮಂತ್ರಿಗಳಿಗೆ ಮಾನ್ಯ ತಹಶಿಲ್ದಾರರು ಮುಖಂತರ ಮನವಿ ಪತ್ರ ಸಲ್ಲಿಸಲಾಯಿತು.

ಈ ಪ್ರತಿಭಟನೆ ಉದ್ದೇಶಿಸಿ ಎಐಡಿಎಸ್‍ಓ ಜಿಲ್ಲಾ ಜಿಲ್ಲಾ ಸೆಕ್ರೇಟಿರಿಯಟ್ ಸದಸ್ಯರಾದ ಕಂಬಳಿ ಮಂಜುನಾಥ ಅವರು ಮಾತನಾಡುತ್ತಾ ಕರ್ನಾಟಕ ರಾಜ್ಯ ಸರ್ಕಾರವು ಈ ಶೈಕ್ಷಣ ಕ ವರ್ಷದಲ್ಲಿ ಇನ್ನೂ ಹಾಸ್ಟೆಲ್ ಹಾಗೂ ವಿದ್ಯಾರ್ಥಿವೇತನಗಳಿಗೆ ಅರ್ಜಿಯನ್ನು ಆಹ್ವಾನಿಸದಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯದ ಹಲವು ಕಡೆ ನಗರ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಬಸ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅಲ್ಲದೇ ಜನೆವರಿ 31 ರ ವರೆಗೆ ಸಾರಿಗೆ ಇಲಾಖೆಯು ಉಚಿತ ಪ್ರಯಾಣ ಮಾಡುವ ವ್ಯವಸ್ಥೆ ಮಾಡಿಕೊಟ್ಟಿತ್ತು. ಈಗ ಬಸ್ ಪಾಸ್ ವಿತರಿಸಲಾಗುತ್ತಿರುವ ಸಂದರ್ಭದಲ್ಲಿ ನವೆಂಬರ್ 2020 ನಿಂದ ಬಸ್ ಪಾಸ್ ನೀಡಲಾಗಿದೆ ಎಂದು 10 ತಿಂಗಳಿಗೆ ಪಡೆಯಬೇಕಾದ ಶುಲ್ಕದಲ್ಲಿ ಕೇವಲ 5 ರಿಂದ 7 ತಿಂಗಳಿಗಾಗುವಷ್ಟು ಮಾತ್ರ ಬಸ್ ಪಾಸ್ ನೀಡಿರುವುದು ಕೊರೋನಾ ಸಂದರ್ಭದ ಆರ್ಥಿಕ ಸಂಕಷ್ಟದ ನಡುವೆ ಗಾಯದ ಮೇಲೆ ಬರೆ ಎಳೆದಂತಿದೆ. ಹಾಗೂ ಈ ನಿಟ್ಟಿನಲ್ಲಿ ಬಸ್ ಪಾಸ್ ಸಂಬಂಧಿತ ಗೊಂದಲಗಳನ್ನು ನಿವಾರಿಸುವುದು ಅತ್ಯವಶ್ಯಕವಾಗಿದೆ. ಕಾಲೇಜುಗಳು ಪ್ರಾರಂಭವಾಗಿ ವಿದ್ಯಾರ್ಥಿಗಳು ಕಾಲೇಜುಗಳಿಗೆ ಮರಳುತ್ತಿದ್ದು, ಕಾಲೇಜುಗಳಲ್ಲಿ ಪಾಠಗಳು ಇನ್ನೂ ಪ್ರಾರಂಭವಾಗುತ್ತಿಲ್ಲ. ಅವಶ್ಯಕ ಬೋಧಕರಿಲ್ಲದೇ ವಿದ್ಯಾರ್ಥಿಗಳು ಪಾಠಗಳಿಂದ ವಂಚಿತರಾಗುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ಈಗಾಗಲೇ ಈ ವರ್ಷದ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಸರ್ಕಾರ ಘೋಷಿಸಿದೆ. ರಾಜ್ಯದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಪದವಿ ಪರೀಕ್ಷೆಗಳು ಕೂಡ ನಿಗದಿಯಾಗಿವೆ. ಇದು ವಿದ್ಯಾರ್ಥಿಗಳ ಆಕ್ರೋಶವನ್ನು ಹೆಚ್ಚಿಸಿದೆ.

ಸರ್ಕಾರವು ಎಲ್ಲ ಸರ್ಕಾರಿ ಹಾಸ್ಟೇಲುಗಳಿಗೆ ಕೂಡಲೇ ಅರ್ಜಿ ಆಹ್ವಾನಿಸಿ ಪ್ರವೇಶಾತಿ ನೀಡಿ ಮತ್ತು ಹಾಸ್ಟೇಲುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಹಾಗೂ ಎಲ್ಲಾ ಇಲಾಖೆಗಳ ಶಿಷ್ಯವೇತನವನ್ನು ಈ ಕೂಡಲೇ ಅರ್ಜಿ ಕರೆದು ತುರ್ತಾಗಿ ಬಿಡುಗಡೆಗೊಳಿಸಬೇಕೆಂದು ಎಐಡಿಎಸ್‍ಓ ಆಗ್ರಹಿಸುತ್ತದೆ. ಬಸ್ ಪಾಸ್ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸಬೇಕು ಹಾಗೂ ಅಗತ್ಯ ಸಂಖ್ಯೆಯಲ್ಲಿ ಬೋಧಕರನ್ನು ತುರ್ತಾಗಿ ನೇಮಕ ಮಾಡಿಕೊಳ್ಳಬೇಕು ಎಂದು ರಾಜ್ಯದ ಸಹಸ್ರಾರು ವಿದ್ಯಾರ್ಥಿಗಳು ಎಐಡಿಎಸ್‍ಓ ಸರ್ಕಾರವನ್ನು ಒತ್ತಾಯಿಸುತ್ತದೆ.
ಕೊರೋನಾದಿಂದಾಗಿ ಹೇರಲ್ಪಟ್ಟ ಲಾಕ್ಡೌನ್ ಪ್ರಭಾವದಿಂದ ವಿದ್ಯಾರ್ಥಿಗಳ ಕುಟುಂಬಗಳು ಈಗಾಗಲೇ ಸಾಕಷ್ಟು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಕುಟುಂಬಗಳಿಗೆ ಸಹಾಯಮಾಡಲು ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳು ದುಡಿಮೆಯಲ್ಲಿ ತೊಡಗಿದ್ದಾರೆ. ಪರಿಸ್ಥಿತಿಯು ಹೀಗಿರುವಾಗ, ಸರ್ಕಾರವು ಈ ಕೂಡಲೇ ವಿದ್ಯಾರ್ಥಿಗಳ ಧ್ವನಿಗೆ ಓಗೊಟ್ಟು ಈ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಆಗ್ರಹಿಸಿ ಎಐಡಿಎಸ್‍ಓ ಕರ್ನಾಟಕ ರಾಜ್ಯ ಸಮಿತಿಯು ಜನವರಿ 22ರಂದು ಅಖಿಲ ಕರ್ನಾಟಕ ಪ್ರತಿಭಟನಾ ದಿನಕ್ಕೆ ಕರೆ ನೀಡಿತ್ತು. ಪ್ರತಿಭಟನಾ ದಿನದ ಅಂಗವಾಗಿ ರಾಜ್ಯದ ಎಲ್ಲೆಡೆ ಹೋರಾಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ತಮ್ಮೆಡೆಗೆ ಸರ್ಕಾರವು ತೋರುತ್ತಿರುವ ನಿರ್ಲಕ್ಷ್ಯವನ್ನು ಖಂಡಿಸುತ್ತ ಬೇಡಿಕೆಗಳ ಘೋಷಣೆ ಕೂಗಿದರು. ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸುತ್ತೆವೆ ಎಂದು ಹೇಳಿದರು.
ಈ ಪ್ರತಿಭಟನೆಯಲ್ಲಿ ಎಐಡಿಎಸ್‍ಓ ಸದಸ್ಯರಾದ ಅಭಿಷೇಕ್, ಕೋಟ್ರೇಶ್, ಕಾರ್ತಿಕ್ ನಾಯಕ್, ಸಂತೋಷ್ ನಾಯಕ್ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಬೇಡಿಕೆಗಳು
ಎಲ್ಲಾ ವಿದ್ಯಾರ್ಥಿ ವೇತನಗಳನ್ನು ಕೂಡಲೇ ಬಿಡುಗಡೆ ಮಾಡಿ
ಎಲ್ಲಾ ಸರ್ಕಾರಿ ಹಾಸ್ಟೇಲುಗಳಿಗೆ ಕೂಡಲೇ ಅರ್ಜಿ ಆಹ್ವಾನಿಸಿ ಪ್ರವೇಶಾತಿ ನೀಡಿ ಮತ್ತು ಹಾಸ್ಟೇಲುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ
ನಗರ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಒದಗಿಸಿ ಹಾಗೂ ಹೆಚ್ಚುವರಿ ಶುಲ್ಕ ಪಡೆಯುವುದನ್ನು ನಿಲ್ಲಿಸಿ
ಕಾಲೇಜುಗಳಲ್ಲಿ ಅವಶ್ಯಕ ಬೋಧಕರನ್ನು ನೇಮಕಾತಿ ಮಾಡಿ

LEAVE A REPLY

Please enter your comment!
Please enter your name here