ವೇಣಿವೀರಾಪುರ ಬಳಿ 12.96 ರೂ.ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ, ಘನತ್ಯಾಜ್ಯ ವಸ್ತುಗಳ ನಿರ್ವಹಣೆಗಾಗಿ ವೈಜ್ಞಾನಿಕ ವಿಲೇವಾರಿ ಘಟಕಕ್ಕೆ ಶಾಸಕ ಸೋಮಶೇಖರ ರೆಡ್ಡಿ ಶಂಕುಸ್ಥಾಪನೆ

0
135

ಬಳ್ಳಾರಿ,ಜ.25 : ಬಳ್ಳಾರಿ ಮಹಾನಗರ ಪಾಲಿಕೆ ವತಿಯಿಂದ ಸ್ವಚ್ಛ ಭಾರತ ಮಿಶನ್ ಅಡಿ ಘನತ್ಯಾಜ್ಯ ವಸ್ತುಗಳ ನಿರ್ವಹಣೆಗಾಗಿ 12.96 ಕೋಟಿ ರೂ.ವೆಚ್ಚದಲ್ಲಿ ವೈಜ್ಞಾನಿಕ ವಿಲೇವಾರಿ ಘಟಕದ ನಿರ್ಮಾಣಕ್ಕೆ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಸೋಮವಾರ ಭೂಮಿಪೂಜೆ ನೆರವೇರಿಸಿದರು.
ನಗರದ ಹೊರವಲಯದ ವೇಣಿವೀರಾಪುರ ಬಳಿ 84 ಎಕರೆ ವಿಶಾಲ ಜಾಗದಲ್ಲಿ ಘನತ್ಯಾಜ್ಯ ವಸ್ತುಗಳ ನಿರ್ವಹಣೆಯ ವೈಜ್ಞಾನಿಕ ವಿಲೇವಾರಿ ಘಟಕ ನಿರ್ಮಿಸಲು ಉದ್ದೇಶಿಸಲಾಗಿದೆ.
ಬಳ್ಳಾರಿ ನಗರದಲ್ಲಿ ಮಹಾನಗರ ಪಾಲಿಕೆ ವಾಹನಗಳ ಮೂಲಕ ಸಂಗ್ರಹಿಸಲಾಗುವ ಘನತ್ಯಾಜ್ಯವನ್ನು ಈ ಘಟಕಕ್ಕೆ ತಂದು ಹಸಿಕಸ ಮತ್ತು ಒಣಕಸವನ್ನಾಗಿ ವಿಂಗಡಿಸಿ ಅದನ್ನು ವೈಜ್ಞಾನಿಕವಾಗಿ ಕಂಪೋಸ್ಟ್ ಅಂದರೇ ಗೊಬ್ಬರ ಮಾಡಲಾಗುತ್ತದೆ. ನಂತರ ಅದನ್ನು ರೈತರಿಗೆ ತಮ್ಮ ಜಮೀನುಗಳಿಗಾಗಿ ಕಡಿಮೆ ಬೆಲೆಯಲ್ಲಿ ನೀಡಲು ಉದ್ದೇಶಿಸಲಾಗಿದೆ ಎಂದು ಶಂಕುಸ್ಥಾಪನೆ ನೇರವೇರಿಸಿದ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ತಿಳಿಸಿದರು.
ಬಳ್ಳಾರಿ ನಗರದ 24*7 ಕುಡಿಯುವ ನೀರು ಸರಬರಾಜು ವಿಷಯಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರ ಅಧ್ಯಕ್ಷತೆಯಲ್ಲಿ ಚರ್ಚೆ ನಡೆಸಲಾಗಿದೆ.
253 ಕೋಟಿ ರೂ.ವೆಚ್ಚದಲ್ಲಿ ಬಳ್ಳಾರಿ ನಗರದಲ್ಲಿ ಸಮರ್ಪಕವಾಗಿ ಒಳಚರಂಡಿ ವ್ಯವಸ್ಥೆ ಮಾಡುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಹಾಗೂ ಜಿಲ್ಲಾ ಖನಿಜ ನಿಧಿ ಅನುದಾನ ಬಳಸಿಕೊಂಡು ನಿರ್ಮಿಸಲು ತೀರ್ಮಾನಿಸಲಾಗಿದೆ. ಕೆಪಿಟಿಸಿಎಲ್ ಜಲಸಂಗ್ರಹಣಾ ಕೆರೆಯಿಂದ ಅಲ್ಲಿಪುರ ಕೆರೆಗೆ ನೀರು ತರಲು ಅಂದಾಜುಪಟ್ಟಿ ಸಿದ್ದಪಡಿಸಲಾಗುತ್ತಿದೆ;ಇಲ್ಲಿಂದ ನೀರು ತರುವುದರಿಂದ ಬಳ್ಳಾರಿ ನಗರಕ್ಕೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ನೀಗಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ಬಳ್ಳಾರಿ ಕರ್ನಾಟಕದ ಅವಿಭಾಜ್ಯ ಅಂಗವೆಂಬುದನ್ನು ಸ್ಪಷ್ಟಪಡಿಸಿದ ಶಾಸಕ ಸೋಮಶೇಖರರೆಡ್ಡಿ ಅವರು 1863ರ ಇತಿಹಾಸ ತೆಗೆದುನೋಡಿದರೇ ಈ ಹಿಂದೆ ಕಡಪ,ಕರ್ನೂಲು ಜಿಲ್ಲೆಗಳಲ್ಲಿರುವ ಬಹುತೇಕ ತಾಲೂಕುಗಳು ಬಳ್ಳಾರಿ ಜಿಲ್ಲೆಯಲ್ಲಿವೆ ಇದ್ದುದನ್ನು ಮರೆಯಬಾರದು ಎಂದರು. ಜಿಲ್ಲೆ ವಿಭಜನೆಯಾದರೇ ಈ ರೀತಿಯ ಕೂಗುಬರುತ್ತದೆ;ಆದ ಕಾರಣ ಬಳ್ಳಾರಿ ಜಿಲ್ಲೆ ವಿಭಜಿಸಬೇಡಿ ಅಂತ ಮುಖ್ಯಮಂತ್ರಿಗಳಿಗೆ ಹೇಳಿದ್ದೇವು;ಆದರೇ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರ ಮಾತಿಗೆ ಮನ್ನಣೆ ನೀಡಿ ವಿಜಯನಗರ ಜಿಲ್ಲೆ ರಚನೆ ಮುಂದಾಗಿದ್ದಾರೆ ಎಂದರು.
ಮಹಾನಗರ ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್ ಅವರು ಮಾತನಾಡಿ, ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡುವುದಕ್ಕೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆ ವತಿಯಿಂದ 28 ಕೋಟಿ ರೂ. ವಿಸ್ತøತ ಯೋಜನಾ ವರದಿ ಸಿದ್ದಪಡಿಸಿ ಸರಕಾರಕ್ಕೆ ಕಳುಹಿಸಲಾಗಿತ್ತು;ಮೊದಲ ಹಂತದಲ್ಲಿ 13 ಕೋಟಿ ರೂ.ವೆಚ್ಚದಲ್ಲಿ ಸಿವಿಲ್ ಕಾಮಗಾರಿ ಕೈಗೆತ್ತಿಕೊಳ್ಳಲು ಅನುಮತಿ ಬಂದಿದ್ದು,ಅದರನ್ವಯ ಆಡಳಿತಾತ್ಮಕ ಅನುಮೋದನೆ ನೀಡಿ ಕಾಮಗಾರಿ ಶುರು ಮಾಡಲಾಗಿದೆ ಎಂದರು.
ಉಳಿದ 15 ಕೋಟಿ ರೂ.ಅನುದಾನದಲ್ಲಿ ಕಸವಿಲೇವಾರಿ ಮತ್ತು ವೈಜ್ಞಾನಿಕ ಸಂಸ್ಕರಣೆ ಹಾಗೂ ಇನ್ನೀತರ ಕಸ ಸಂಬಂಧಿತ ಕಾರ್ಯಗಳಿಗಾಗಿ ಮಶೀನ್‍ಗಳನ್ನು ಖರೀದಿಸಲಾಗುವುದು ಎಂದರು.
ನಗರದಲ್ಲಿ ಪ್ರತಿನಿತ್ಯ 160 ಟನ್ ಕಸ ಉತ್ಪಾದನೆಯಾಗುತ್ತಿದ್ದು,ಕಸವನ್ನು ಈ ಘÀಟಕದಲ್ಲಿ ವಿಂಗಡಿಸಿ ಗೊಬ್ಬರವನ್ನಾಗಿ ತಯಾರಿಸಿ ರೈತರಿಗೆ ವಿತರಿಸಲಾಗುತ್ತದೆ ಮತ್ತು ಪಾರ್ಕ್‍ಗೆ ಬಳಕೆ ಮಾಡಲು ತೀರ್ಮಾನಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ರಾಬಕೋ ಹಾಲು ಒಕ್ಕೂಟದ ನಿರ್ದೇಶಕ ವೀರಶೇಖರರೆಡ್ಡಿ, ಮುಖಂಡರಾದ ಶ್ರೀನಿವಾಸ ಮೋತ್ಕರ್, ಆರೋಗ್ಯ ಅಧಿಕಾರಿ ಡಾ.ಹನುಮಂತಪ್ಪ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here