ಆಯುಷ್ಮಾನ್ ಭಾರತ–ಆರೋಗ್ಯ ಕರ್ನಾಟಕ ಉತ್ತಮ ಸಾಧನೆ ಮಾಡಿದ ಆಸ್ಪತ್ರೆಗಳಿಗೆ ಪ್ರಶಂಸಾ ಪತ್ರ

0
90

ಧಾರವಾಡ ಜ.28: ಆಯುಷ್ಮಾನ್ ಭಾರತ–ಆರೋಗ್ಯ ಕರ್ನಾಟಕ ಯೋಜನೆಯು ಜಿಲ್ಲೆಯಾದ್ಯಂತ ಅಕ್ಟೋಬರ್-2018 ರಿಂದ ಅನುಷ್ಠಾನಗೊಂಡಿದ್ದು, ಎಲ್ಲ ಸರಕಾರಿ ಹಾಗೂ ನೋಂದಾಯಿತ ಖಾಸಗಿ ಆಸ್ಪತ್ರೆಗಳು ಅವಶ್ಯಕ ರೋಗಿಗಳಿಗೆ ಉತ್ತಮ ಚಿಕಿತ್ಸಾ ಸೇವೆಯನ್ನು ನೀಡುತ್ತಿವೆ. ಕೋವಿಡ್-19 ತುರ್ತು ಪರಿಸ್ಥಿತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅವಶ್ಯಕ ಫಲಾನುಭವಿಗಳಿಗೆ ಉತ್ತಮ ಸೇವೆಯನ್ನು ನೀಡಿರುವ ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲರವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಸನ್ಮಾನಿಸಿ ಗೌರವಿಸಿದರು.

ಈ ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ ಸರಕಾರಿ ಸಂಸ್ಥೆಗಳಾದ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಮೆಡಿಕಲ್ ಕಾಲೇಜು (ಕಿಮ್ಸ್), ಧಾರವಾಡದ ಜಿಲ್ಲಾ ಆಸ್ಪತ್ರೆ, ಕಲಘಟಗಿ ತಾಲೂಕ ಆಸ್ಪತ್ರೆ, ಖಾಸಗಿ ಆಸ್ಪತ್ರೆಗಳಾದ ಹುಬ್ಬಳ್ಳಿಯ ಶಕುಂತಲಾ ಮೆಮೋರಿಯಲ್ ಆಸ್ಪತ್ರೆ, ಹೆಚ್.ಸಿ.ಜಿ. ಆಸ್ಪತ್ರೆ, ಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳು ಪ್ರಮಾಣ ಪತ್ರಗಳನ್ನು ವಿತರಿಸಿದರು. ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರಠಾಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ, ಎಬಿಎಆರ್‍ಕೆ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಶಶಿ ಪಾಟೀಲ, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಎಸ್.ಎಂ. ಹೊನಕೇರಿ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ಸುಜಾತಾ ಹಸವಿಮಠ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ: ಎಸ್.ಬಿ.ನಿಂಬಣ್ಣವರ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಅಯ್ಯನಗೌಡ ಪಾಟೀಲ, ತಾಲೂಕಾ ಆರೋಗ್ಯಾಧಿಕಾರಿಗಳಾದ ಡಾ.ತನುಜಾ ಕೆ.ಎನ್., ಡಾ.ಬಸವರಾಜ ಬಾಸೂರ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟಿನ ಸಹಾಯಕ ವಿಭಾಗೀಯ ಸಲಹೆಗಾರ ಡಾ.ಮುಸದ್ದೀಖಾ ಖಾನಂ ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here