ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ,ಸತತ ಪರಿಶ್ರಮದಿಂದ ಭಾರತ ಪೋಲಿಯೋ ಮುಕ್ತ,ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ:ಶಾಸಕ ಸೋಮಶೇಖರ್ ರೆಡ್ಡಿ

0
92

ಬಳ್ಳಾರಿ,ಜ.31 : ಸತತ ಪರಿಶ್ರಮದಿಂದಾಗಿ ಇಂದು ನಮ್ಮ ದೇಶ ಪೋಲಿಯೋ ಮುಕ್ತವಾಗಿದೆ. ಇದನ್ನು ಹೀಗೆಯೇ ಮುಂದುವರಿಸಿಕೊಂಡು ಹೋಗುವ ನಿಟ್ಟಿನಲ್ಲಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸೋಣ ಎಂದು ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ ಹೇಳಿದರು.

ನಗರದ ರಾಮಯ್ಯ ಕಾಲೋನಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
2011ರಿಂದ ನಮ್ಮ ದೇಶದಲ್ಲಿ ಯಾವುದೇ ಪೋಲಿಯೋ ಪ್ರಕರಣಗಳು ಕಂಡು ಬಂದಿಲ್ಲ. ಭಾರತೀಯ ದೇಶ ಪೋಲಿಯೋ ರೋಗದಿಂದ ಸಂಪೂರ್ಣವಾಗಿ ಹೊರಬಂದಿದೆ. ಇದು ಮುಂದಿನ ಮಕ್ಕಳಿಗೆ ಕಾಣಿಸಿಕೊಳ್ಳದಂತೆ ನೋಡಿಕೊಂಡು ಹೋಗುವ ಕಾರ್ಯ ಮಾಡಬೇಕು ಎಂದರು.
ಹುಟ್ಟಿದ ಎಲ್ಲಾ ಮಕ್ಕಳಿಗೆ ಲಸಿಕೆ ಹಾಕಿಸಿ ಮಕ್ಕಳ ಬೆಳವಣಿಗೆಗೆ ಸಹಕಾರಿ ಆಗುತ್ತದೆ. ಮಕ್ಕಳಲ್ಲಿ ಆರೋಗ್ಯ ಉತ್ತಮವಾಗಿರಲು ಇದೊಂದು ಒಳ್ಳೆಯ ಪ್ರಯತ್ನ; ಕೋವಿಡ್ ಸಂಬಂಧಿಸಿದ ಲಸಿಕೆಗಳನ್ನು ನಮ್ಮ ದೇಶವು ಇತರೇ ದೇಶಗಳಿಗೆ ಪೂರೈಸುವುದರ ಮೂಲಕ ಇತರೇ ದೇಶಗಳಿಗೆ ಮಾದರಿಯಾಗಿದೆ.ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿವೆ. ಆದರೂ ಯಾರೂ ನಿರ್ಲಕ್ಷ್ಯವಹಿಸದೆ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಆಗಾಗ್ಗೆ ಕೈಗಳನ್ನು ಸ್ಯಾನಿಟೈಸರ್‍ನಿಂದ ಸ್ವಚ್ಛಗೊಳಿಸಿಕೊಳ್ಳಿ ಎಂದರು.

ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರು ಮಾತನಾಡಿ, ನಮ್ಮ ದೇಶದಲ್ಲಿ ಕಳೆದ ಹತ್ತು ವರ್ಷದಿಂದ ಯಾವುದೇ ಪೋಲಿಯೋ ಪ್ರಕರಣ ಕಂಡು ಬಂದಿಲ್ಲ,ಮುಂದೆ ಬರಬಾರದು ಎನ್ನುವ ಉದ್ದೇಶದಿಂದ ಈ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಕೈಗೆತ್ತಿಕೊಳ್ಳಲಾಗಿದೆ. ನಮ್ಮ ಪಕ್ಕದ ರಾಷ್ರವಾದ ಬಾಂಗ್ಲಾ,ಪಾಕಿಸ್ತಾನ,ಅಫ್ಘಾನಿಸ್ತಾನ ರಾಷ್ಟ್ರಗಳಲ್ಲಿ ಇವತ್ತಿಗೂ ಜನರನ್ನು ಪೋಲಿಯೋ ರೋಗ ಕಾಡುತ್ತಿದೆ.ಎಲ್ಲ ಮಕ್ಕಳಿಗೂ ಪೋಲಿಯೋ ಲಸಿಕೆ ಹಾಕಿಸಿ,ಮಕ್ಕಳ ಬೆಳವಣಿಗೆಗೆ ಲಸಿಕೆಯಿಂದಲೇ ನಾಂದಿ ಹಾಡಿ ಎಂದರು.
ಪೋಲಿಯೋ ಲಸಿಕೆ ಮಾತ್ರವಲ್ಲದೆ ಮಗು ಹುಟ್ಟಿದ ಕ್ಷಣದಿಂದ ಆಸ್ಪತ್ರೆಯಲ್ಲಿ ವೈದ್ಯರು ಶಿಫಾರಸ್ಸು ಮಾಡುವ ಎಲ್ಲಾ ಲಸಿಕೆಗಳನ್ನು ನಿಮ್ಮ ಮಕ್ಕಳಿಗೆ ಹಾಕಿಸಿ ಇದು ನಿಮ್ಮ ಮಗುವಿನ ಬೆಳವಣಿಗೆಗೆ ಸಹಾಯಕಾರಿಯಾಗುತ್ತದೆ. 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಿ ಎಂದು ತಿಳಿಸಿದರು.

ಜಿಲ್ಲಾ ಆರ್.ಸಿ ಹೆಚ್ ಅಧಿಕಾರಿ ಡಾ.ಆರ್.ಅನಿಲಕುಮಾರ್ ಅವರು ಮಾತನಾಡಿ, ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ದಿನದ ಪ್ರಯುಕ್ತ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಮಕ್ಕಳಿಗೆ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದು 1995 ರಲ್ಲಿ ಆರಂಭವಾಗಿದ್ದು ಸತತ ಪರಿಶ್ರಮದ ಮೂಲಕ ಇಂದು ನಮ್ಮ ರಾಷ್ಟ್ರ ಪೆÇೀಲಿಯೋ ಮುಕ್ತವಾಗಿದೆ ಎಂದರು.
ಜಿಲ್ಲೆಯಲ್ಲಿ ನಾಲ್ಕು ದಿನಗಳ ಕಾಲ ಲಸಿಕಾ ಕಾರ್ಯಕ್ರಮ ನಡೆಯುತ್ತದೆ.ಮೊದಲ ದಿನ ಬೂತ್‍ಗಳ ಮಟ್ಟದಲ್ಲಿ ಲಸಿಕಾ ಹಾಕಲಾಗುತ್ತದೆ, ಉಳಿದ ಮೂರು ದಿನಗಳಲ್ಲಿ ನಮ್ಮ ಸಿಬ್ಬಂದಿಯು ಮನೆ ಮನೆಗೆ ಭೇಟಿ ನೀಡಿ ಎಲ್ಲಾ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ. ಜಿಲ್ಲೆಯಲ್ಲಿ 5 ವರ್ಷದೊಳಗಿನ 324818 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ನಗರ ಪ್ರದೇಶದಲ್ಲಿ 549 ಮತ್ತು ಗ್ರಾಮೀಣ ಪ್ರದೇಶದಲ್ಲಿ 1357 ಲಸಿಕಾ ಬೂತ್‍ಗಳು ಸೇರಿದಂತೆ ಜಿಲ್ಲೆಯಲ್ಲಿ 1906 ಲಸಿಕಾ ಬೂತ್‍ಗಳಲ್ಲಿ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಇದಕ್ಕಾಗಿ 1720 ಮನೆ ಭೇಟಿ ತಂಡಗಳು, 103 ಟ್ರಾನ್ಸಿಟ್ ತಂಡಗಳು, 22 ಮೊಬೈಲ್ ತಂಡಗಳು, ಮೈಗ್ರಟರಿ ಮತ್ತು ಹೈ ರಿಸ್ಕ್ ಏರಿಯಾದಲ್ಲಿ 602 ತಂಡಗಳು, ಹೈರಿಸ್ಕ್ ಏರಿಯಾದಲ್ಲಿ ಮನೆ ಮನೆ ಭೇಟಿ ಮಾಡಲು 166 ತಂಡಗಳು ಸೇರಿದಂತೆ ಒಟ್ಟು 1845 ತಂಡಗಳನ್ನು ಈ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದರು.

3812 ಜನ ಲಸಿಕೆ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಒಟ್ಟು 602 ಕ್ಲಿಷ್ಟಕರ ಸ್ಥಳಗಳನ್ನು ಗುರುತಿಸಲಾಗಿದ್ದು ಅದಕ್ಕಾಗಿ 151 ಕ್ಲಿಷ್ಟಕರ ಸ್ಥಳಗಳಿಗೆ ಮನೆ ಭೆÉೀಟಿ ನೀಡುವ ತಂಡಗಳಿವೆ. ಇದಕ್ಕಾಗಿ 363 ಮೇಲುಸ್ತುವಾರಿ ತಂಡಗಳು ಮತ್ತು 8 ತಾಲ್ಲೂಕು ಉಸ್ತುವಾರಿ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು. 396278 ಡೋಸ್ ಲಸಿಕೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜನಾರ್ಧನ ಹೆಚ್.ಎಲ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಎಸ್‍ಎಂಒ ಡಾ.ಆರ್.ಎಸ್.ಶ್ರೀಧರ್, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ಗುರುನಾಥ ಚವ್ಹಾಣ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ, ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನಕುಮಾರಿ, ರಾಮಯ್ಯ ಕಾಲೋನಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಜಶೇಖರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ್, ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೌರಮ್ಮ, ಪ್ಲೋರೊಸಿಸ್ ಕನ್ಸಲ್ಟಂಟ್ ಡಾ.ಆನಂದ, ವಿಹೆಚಎಸ್‍ಎನ್‍ಸಿ ಕನ್ಸಲ್ಟಂಟ್ ರಾಘವೇಂದ್ರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಮ್ಮ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here