ರಾಷ್ಟ್ರೀಯ ಪಲ್ಸ್ ಪೊಲೀಯೊ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ; ಜಿಲ್ಲೆಯ 211740 ಮಕ್ಕಳಿಗೆ ಲಸಿಕೆ ನೀಡುವ ಗುರಿ: ಜಿಲ್ಲಾಧಿಕಾರಿ ನಿತೇಶ ಪಾಟೀಲ

0
126

ಧಾರವಾಡ .ಜ.30: ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುಶೀಲಾ.ಬಿ. ಅವರು ಇಂದು (ಜ.31) ಬೆಳಿಗ್ಗೆ ನಗರದ ಹಳೆ ಬಸ್‍ನಿಲ್ದಾಣದ ಹತ್ತಿರವಿರುವ ಪಾಲಿಕೆಯ ಆಸ್ಪತ್ರೆಯಲ್ಲಿ ನವಜಾತ ಶಿಶುಗಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ನಂತರ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಮಾತನಾಡಿ, ಇಂದು (ಜ.31) ಜಿಲ್ಲೆಯಲ್ಲಿ 900 ಬೂತ್(ಕೇಂದ್ರ)ಗಳಲ್ಲಿ ನವಜಾತ ಶಿಶುಗಳು ಸೇರಿದಂತೆ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೆÇೀಲಿಯೋ ಲಸಿಕೆ ಹಾಕಲಾಗುವುದು. ಫೆಬ್ರವರಿ 1 ರಿಂದ 3 ರ ವರೆಗೆ ಮನೆ ಮನೆಗೆ ತೆರಳಿ ಲಸಿಕೆ ನೀಡಲಾಗುವುದು.
ಜಿಲ್ಲೆಯ ನಗರ ಪ್ರದೇಶದಲ್ಲಿನ 132319, ಗ್ರಾಮೀಣ ಪ್ರದೇಶದಲ್ಲಿನ 79421 ಸೇರಿ ಐದು ವರ್ಷದೊಳಗಿನ ಒಟ್ಟು 211740 ಮಕ್ಕಳಿಗೆ ಲಸಿಕೆ ಹಾಕಲು ಗುರುತಿಸಲಾಗಿದೆ. ಫೆಬ್ರವರಿ 1 ರಿಂದ 3 ರವರೆಗೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಜಿಲ್ಲೆಯ 415675 ಮನೆಗಳಿಗೆ ತೆರಳಿ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ. ಮನೆ ಮನೆಗೆ ತೆರಳಿ ಲಸಿಕೆ ಹಾಕಲು 1785 ತಂಡಗಳನ್ನು ರಚಿಸಲಾಗಿದೆ. ಈ ರಾಷ್ಟ್ರೀಯ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯೊಂದಿಗೆ ಜಿಲ್ಲೆಯ ಸಂಘ ಸಂಸ್ಥೆಗಳು ಕೈಜೋಡಿಸಿ ಸಹಕಾರ ನೀಡಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಯಶವಂತ ಮದೀನಕರ, ಜಿಲ್ಲಾ ಆರ್.ಸಿ.ಎಚ್. ಡಾ.ಎಸ್.ಎಮ್. ಹೋನಕೇರಿ, ಜಿಲ್ಲಾ ಸರ್ವೆಕ್ಷಣಾ ಅಧಿಕಾರಿ ಡಾ.ಸುಜಾತಾ ಹಸವಿಮಠ, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ಅಯ್ಯನಗೌಡರ, ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿ ಡಾ.ಶಶಿ ಪಾಟೀಲ, ಪಾಲಿಕೆ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಶೋಭಾ ಮೂಲಿಮನಿ, ಪೆÇಲೀಸ್ ಹೆಡ್ ಕ್ವಾರ್ಟರ್ಸ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕಳಸೂರಮಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಭಾರತಿ ಶೆಟ್ಟರ, ಧಾರವಾಡ ರೋಟರಿ ಕಬ್ಲ್‍ಗಳ ಪದಾಧಿಕಾರಿಗಳಾದ ಕರಣ ದೊಡವಾಡ, ಡಾ.ಕವನ ದೇಶಪಾಂಡೆ, ಶಿವರಡ್ಡಿ ಸೋಮಾಪೂರ, ಎ.ಸಿ.ತಹಶೀಲ್ದಾರ, ಡಾ. ಪ್ರಕಾಶ ರಾಮನಗೌಡರ, ಹರ್ಷಾ ತುರಮರಿ, ಶ್ರೀಧರ ಕಲ್ಲೂರ, ಡಾ. ಸಿ.ಎಮ್. ನವಲಗಡ್ಡಿ, ಡಾ. ಎಮ್.ಎ.ಮುಮ್ಮಿಗಟ್ಟಿ, ವೀಣಾ ಪಂಚಾಕ್ಷರಯ್ಯ ಹಿರೇಮಠ ಸೇರಿದಂತೆ ಇತರ ಇಲಾಖೆಗಳ ಅಧಿಕಾರಿಗಳು, ಆರೋಗ್ಯ ಹಾಗೂ ವೈದ್ಯಕೀಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here