ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ 2020-21 ದಿನನಿತ್ಯದ ಒತ್ತಡದಿಂದ ಪುನಶ್ಚೇತನಗೊಳ್ಳಲು ಕ್ರೀಡಾಕೂಟ ಸಹಕಾರಿ : ಡಿಸಿ

0
149

ದಾವಣಗೆರೆ, ಫೆ.05: ದಿನನಿತ್ಯದ ಕರ್ತವ್ಯಗಳು ಮತ್ತು ಒತ್ತಡದಿಂದ ಬಿಡುವು ಮಾಡಿಕೊಂಡು ಎಲ್ಲರೂ ಕೂಡಿ ಆಟ ಆಡಿ, ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮನ್ನು ತಾವು ಪುನಶ್ಚೇತನಗೊಳಿಸಿಕೊಳ್ಳಲು ಈ ಕ್ರೀಡಾಕೂಟ ಒಂದು ಒಳ್ಳೆಯ ಅವಕಾಶವಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ನುಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ದಾವಣಗೆರೆ ಇವರ ಸಹಯೋಗದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಮತ್ತು ಶನಿವಾರ ಏರ್ಪಡಿಸಲಾಗಿರುವ 2020-21ನೇ ಸಾಲಿನ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿ ಸ್ಪರ್ಧೆಯ ಉದ್ಘಾಟನಾ ಸಮಾರಂಭಕ್ಕೆ ಗುಂಡು ಎಸೆಯುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ವರ್ಷಪೂರ್ತಿ ಒತ್ತಡದಿಂದ ಕೆಲಸ ಮಾಡುವ ನೌಕರರಿಗೆ ಕ್ರೀಡಾಕೂಟ ಒಂದು ಪುನಶ್ಚೇತನ ಕಾರ್ಯಕ್ರದಂತಿದ್ದು ಎಲ್ಲರೂ ಕ್ರೀಡಾ ಮನೋಭಾವದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕು. ಕ್ರೀಡೆಗಳಲ್ಲಿ ಗೆಲ್ಲುವುದು ಮುಖ್ಯವಲ್ಲ. ಭಾಗವಹಿಸಿ ಖುಷಿಯಿಂದ ಆಟವಾಡುವುದು ಮುಖ್ಯ. ಹಾಗೆಯೇ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿಯೂ ಹುರುಪಿನಿಂದ ಪಾಲ್ಗೊಂಡು ತಮ್ಮ ತಮ್ಮ ಇಲಾಖೆಗಳಿಗೆ ಹೆಸರು ತರುವಂತೆ ಹಾರೈಸಿದ ಅವರು ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಿ ಆಟ ಆಡುವಂತೆ ತಿಳಿಸಿದರು.
ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿದ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಕೆ.ವಿ.ಶಾಂತಕುಮಾರಿ ಮಾತನಾಡಿ, ವಯಸ್ಸಿನ ತಾರತಮ್ಯವಿಲ್ಲದೇ ವಿವಿಧ ಇಲಾಖೆಗಳ ನೌಕರರು ಉತ್ಸಾಹದಿಂದ ಪಾಲ್ಗೊಳ್ಳುತ್ತಿರುವುದು ಸಂತಸದ ವಿಚಾರವಾಗಿದೆ. ಈಗಿನ ಮಕ್ಕಳಲ್ಲಿ ಕ್ರೀಡೆಗಳ ಬಗ್ಗೆ ಜ್ಞಾನದ ಕೊರತೆ ಇದೆ ಮತ್ತು ಅವರು ಆಟ ಆಡುವುದೂ ಕಡಿಮೆ ಆಗಿದೆ. ಸದಾ ಓದು, ಕಂಪ್ಯೂಟರ್, ಮೊಬೈಲ್ ಮುಂದೆ ಯಾಂತ್ರೀಕೃತವಾಗಿರುತ್ತಾರೆ. ಅವರಿಗೂ ಕೂಡ ಪೋಷಕರು ಕ್ರೀಡೆಯಲ್ಲಿ ತೊಡಗುವಂತೆ ಪ್ರೇರೇಪಿಸಿ ತಾವೂ ಆಡಬೇಕು ಎಂದ ಅವರು ನೌಕರರು ಇಲ್ಲಿ ಉತ್ತಮವಾಗಿ ಆಟ ಆಡಿ ರಾಜ್ಯ ಮತ್ತು ರಾಷ್ಟ್ರ ಮಟ್ಟವನ್ನು ಪ್ರತಿನಿಧಿಸುವಂತೆ ಆಗಲಿ ಎಂದು ಆಶಿಸಿದರು.

ಮಹಾನಗರಪಾಲಿಕೆ ಮಹಾಪೌರರಾದ ಬಿ.ಜಿ.ಅಜಯಕುಮಾರ್ ಮಾತನಾಡಿ, ಇಂದಿನ ಕ್ರೀಡಾ ಕೂಟದಲ್ಲಿ ಸಾವಿರಕ್ಕೂ ಮೀರಿ ನೌಕರರು ಕ್ರೀಡೆಯಲ್ಲಿ ಭಾಗವಹಿಸಲು ನೋಂದಾಯಿಸಿರುವುದು ಉತ್ತಮ ಬೆಳವಣಿಗೆ ಮತ್ತು ಸಂತಸದ ವಿಚಾರ. ಕಾರ್ಯಾಂಗ ಉತ್ತಮವಾಗಿದ್ದರೆ ಆಡಳಿತ ಸುಗಮವಾಗಿ ನಡೆಯುತ್ತದೆ. ಕಾರ್ಯಾಂಗವನ್ನು ಪ್ರತಿನಿಧಿಸುವ ಸರ್ಕಾರಿ ನೌಕರರು ಚಟುವಟಿಕೆಯಿಂದ ಇದ್ದರೆ ಒಂದೆರಡು ತಾಸು ಹೆಚ್ಚು ಕೆಲಸ ಮಾಡುತ್ತಾರೆ. ಈ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಅವಶ್ಯಕವಾಗಿದ್ದು ಎಲ್ಲರೂ ಹೀಗೆಯೇ ಉತ್ಸಾಹದಿಂದ ಪಾಲ್ಗೊಂಡು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಳ್ಳುವಂತೆ ಶುಭ ಕೋರಿದರು.
ದಾವಣಗೆರೆ ತಹಶೀಲ್ದಾರ್ ಬಿ.ಎನ್.ಗಿರೀಶ್ ಮಾತನಾಡಿ, ಕ್ರೀಡಾಂಗಣದಲ್ಲಿ ಇಂದು ಹಬ್ಬದ ವಾತಾವರಣ ಏರ್ಪಟ್ಟಿದೆ. ಜಿಲ್ಲೆಯ ಎಲ್ಲ ತಾಲ್ಲೂಕುಗಳಿಂದ ನೌಕರರು ಇಲ್ಲಿ ಸೇರಿ ಹಬ್ಬದಂತೆ ಸಂಭ್ರಮಿಸುತ್ತಿದ್ದಾರೆ. ಹೀಗೆ ಒಟ್ಟಿಗೆ ಸೇರುವುದೇ ಹಬ್ಬವಾಗಿದ್ದು ಎಲ್ಲರೂ ಕ್ರೀಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಇಂದು ಸಂಜೆ ಏರ್ಪಡಿಸಲಾಗಿರುವ ಸಂಗೀತ ಸಂಜೆ ಕಾರ್ಯಕ್ರಮಕ್ಕೂ ಹಾಜರಾಗಬೇಕು. ರಾಜ್ಯದ ಉತ್ತಮ ಯುವ ಗಾಯಕರು ಹಾಗೂ ಸಿನೆಯಾ ನಾಯಕ ನಟ ಮತ್ತು ತಂಡದವರನ್ನು ಕರೆಯಿಸಿ ಸಂಗೀತ ಮತ್ತು ನೃತ್ಯ ಕಾರ್ಯಕ್ರಮವನ್ನು ಇದೇ ವೇದಿಕೆಯಲ್ಲಿ ಏರ್ಪಡಿಸಿದ್ದು ಎಲ್ಲರೂ ಕುಟುಂಬದೊಂದಿಗೆ ಬಂದು ಈ ರಸದೌತಣವನ್ನು ಸವಿಯಬೇಕೆಂದು ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಬಿ.ಪಾಲಾಕ್ಷಿ ಪ್ರಾಸ್ತಾವಿಕವಾಗಿ ಮಾತನಾಡಿ, ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಸ್ವಾಸ್ಥ್ಯಕ್ಕೆ ಕ್ರೀಡೆ ಬಹಳ ಸಹಕಾರಿಯಾಗಿದೆ. ಕೊರೊನಾ ಸಂದರ್ಭದಲ್ಲೂ ಒತ್ತಡದಿಂದ ಕರ್ತವ್ಯ ನಿರ್ವಹಿಸಿದ್ದ ಸರ್ಕಾರಿ ನೌಕರರಿಗೆ ಈ ಕ್ರೀಡಾಕೂಟ ಶಕ್ತಿವರ್ಧಕವಿದ್ದಂತೆ. ಕ್ರೀಡೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಹಾಗೂ ಸಂಜೆ ಝೀ ಕನ್ನಡ ಸರಿಗಮಪ ಖ್ಯಾತಿಯ ಕಂಬದ ರಂಗಯ್ಯ, ನೇಹ ಶಾಸ್ತ್ರಿ ಮತ್ತು ಅಶ್ವಿನ್ ಶರ್ಮ ಬೆಂಗಳೂರು ಮತ್ತು ನೃತ್ಯ ಕಾರ್ಯಕ್ರಮವನ್ನು ಕು|| ಗೀತಾ, ಶ್ರೀಗುರು ವಾದ್ಯ ವೃಂದ ದಾವಣಗೆರೆ ಇವರ ವತಿಯಿಂದ ಸಂಗೀತ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಜೊತೆಗೆ ವಿಶೇಷ ಆಹ್ವಾನಿತರಾಗಿ ಗುಡುಗುಡಿಯ ಸೇದಿ ನೋಡೊ ಚಿತ್ರತಂಡದ ನಾಯಕ ನಟರಾದ ನಿರಂಜನ್ ಹರೀಶ್ ಮತ್ತು ಸುಚಿತ್ ಸುಪ್ರಭಾತ್ ಮತ್ತು ನಾಯಕಿ ನಟಿಯರಾದ ಐಶ್ವರ್ಯ ದಿನೇಶ್, ರಷ್ಮಿತಾ ಗೌಡ ಹಾಗೂ ನಿರ್ದೇಶಕ ಜಂಟಿ ಹೂಗಾರ್, ನಿರ್ಮಾಪಕ ಕೃಷ್ಣಕಾಂತ್, ಕಾರ್ಯಕಾರಿ ನಿರ್ಮಾಪಕ ರವಿ ಸಿಂಧನೂರ್ ಆಗಮಿಸಲಿದ್ದು ಎಲ್ಲ ಸರ್ಕಾರಿ ನೌಕರರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.
ಕ್ರೀಡೆಗಳ ವಿವರ: ಇದುವರೆಗೆ 1035 ನೌಕರರು ವಿವಿಧ ಕ್ರೀಡೆಗಳಿಗೆ ನೋಂದಾಯಿಸಿಕೊಂಡಿದ್ದಾರೆ. ಇಂದು ಕೂಡ ನೌಕರರು ಸ್ಥಳದಲ್ಲಿ ನೋಂದಾಯಿಸಿಕೊಂಡು ಕ್ರೀಡಗಳಲ್ಲಿ ಪಾಲ್ಗೊಳ್ಳಬಹುದು. ಜ.5 ರಂದು ಅಥ್ಲೆಟಿಕ್ಸ್, ಕಬಡ್ಡಿ, ವಾಲಿಬಾಲ್, ಬಾಲ್ ಬ್ಯಾಡ್ಮಿಂಟನ್, ಥ್ರೋಬಾಲ್ ಮತ್ತು ಟೆನ್ನಿಕಾಯ್ಟ್ ಕ್ರೀಡೆಗಳು ನಡೆಯಲಿವೆ. ಜ.6 ರಂದು ವೇಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್ ಮತ್ತು ಬಾಡಿ ಬಿಲ್ಡಿಂಗ್ ಮತ್ತು ಆಂಜನೇಯ ಬಡಾವಣೆಯ ಕುಸ್ತಿ ಒಳಾಂಗಣ ಕ್ರೀಡಾಂಗಣದಲ್ಲಿ ಕುಸ್ತಿ ಕ್ರೀಡೆಗಳು ನಡೆಯಲಿವೆ. 40 ವರ್ಷದೊಳಗಿನ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆಂದು ಅವರು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ, ತಾಲ್ಲೂಕುಗಳ ಸಂಘಗಳ ಅಧ್ಯಕ್ಷರು, ಗೌರವಾಧ್ಯಕ್ಷರು, ವೃಂದ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್ ಸ್ವಾಗತಿಸಿದರು.

LEAVE A REPLY

Please enter your comment!
Please enter your name here