ಗ್ರಂಥಾಲಯದ ಮಹತ್ವದ ಬಗ್ಗೆ ಹೆಚ್ಚಿನ ಅರಿವು ಮೂಡಿಸಿಲು ಜಿಲ್ಲಾಧಿಕಾರಿ ಕರೆ

0
103

ಹಾಸನ ಫೆ.10 :-ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಂಥಾಲಯಗಳಲ್ಲಿ ಪುಸ್ತಕದ ಮಹತ್ವದ ಬಗ್ಗೆ ಅರಿವು ಮೂಡಿಸಲು ಗ್ರಂಥಾಲಯ ಮೇಲ್ವಿಚಾರಕರಿಗೆ ಜಿಲ್ಲಾಧಿಕಾರಿ ಆರ್ ಗಿರೀಶ್ ನೀಡಿದರು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯದ ವತಿಯಿಂದ ಏರ್ಪಡಿಸಿದ್ದ ಗ್ರಂಥಾಲಯ ಮೇಲ್ವಿಚಾರಕರು ಹಾಗೂ ಸಿಬ್ಬಂದಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮೊಬೈಲ್‍ನಲ್ಲಿ ಯುವಪೀಳಿಗೆ ತಲ್ಲಿನವಾಗಿದೆ ಅವರನ್ನು ಗ್ರಂಥಾಲಯದ ಪುಸ್ತಕಗಳತ್ವ ಸೆಳೆಯುವ ನಿಟ್ಟಿನಲ್ಲಿ ಮೇಲ್ವಿಚಾರಕರು ಹಾಗೂ ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕು ಎಂದರು.

ಗ್ರಂಥಾಲಯ ಬಳಕೆ ಬಗ್ಗೆ ಪ್ರೇರಣೆ ಹೆಚ್ಚಾಗಬೇಕು ಯುವಕರಲ್ಲಿ ಜ್ಞಾನದ ಮಟ್ಟ ಹೆಚ್ಚಿಸುವ ಕಾರ್ಯ ಮಾಡಬೇಕು ಗ್ರಂಥಾಲಯಗಳಿಗೆ ಓದುಗರು ಹೆಚ್ಚು ಆಸಕ್ತಿಯಿಂದ ಆಗಮಿಸುವಂತೆ ಗ್ರಂಥಾಲಯದ ವ್ಯವಸ್ಥೆಯನ್ನು ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು, ಜನಸಾಮಾನ್ಯರು ಗ್ರಂಥಾಲಯದ ಕಡೆ ಗಮನ ಸೆಳೆಯುವುದರಿಂದ ವಿದ್ಯಾರ್ಥಿಗಳ ಜ್ಞಾನದ ಮಟ್ಟ ಬೌದ್ಧಿಕ ವಾಗುವುದು ಎಂದರು. ಗ್ರಂಥಾಲಯದ ಕಡೆ ಯುವಜನತೆಯನ್ನು ಸೆಳೆಯಲು ಆಕರ್ಷಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್ ಗಿರೀಶ್ ಸಲಹೆ ನೀಡಿದರು.

ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯರಾದ ನಂಜುಂಡಪ್ಪನವರು ಮಾತನಾಡಿ ಗ್ರಂಥಪಾಲಕ ರೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಂಥಾಲಯಗಳಿಗೆ ಕಟ್ಟಡದ ಅವಶ್ಯಕತೆ ಹೆಚ್ಚು ಇದೆ. ಓದುಗರನ್ನು ಗ್ರಂಥಾಲಯಗಳಿಗೆ ಆಗಮಿಸುವಂತೆ ಆಕರ್ಷಣೆಯನ್ನು ಗ್ರಂಥಾಲಯ ಮೇಲ್ವಿಚಾರಕರು ಹಾಗೂ ಸಿಬ್ಬಂದಿಗಳು ಮಾಡಬೇಕು ಎಂದರು.

ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಾದ ಡಾ. ಸತೀಶ್ ಕುಮಾರ್ ಹೊಸಮನಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಮಂಜುನಾಥ್, ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರಾದ ವೆಂಕಟೇಶ್ ಹಾಗೂ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರು ಮತ್ತು ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here