ತಿಮ್ಮಲಾಪುರದಲ್ಲಿ ಬಳ್ಳಾರಿ ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯ ಫೆ.20ರಂದು

0
53

ಬಳ್ಳಾರಿ/ಹೊಸಪೇಟೆ,ಫೆ.15: ಇದೇ ಫೆ.20ರಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿ ಹೋಬಳಿಯ ಚಿಲಕನಹಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತಿಮ್ಮಲಾಪುರದಲ್ಲಿ ಗ್ರಾಮವಾಸ್ತವ್ಯ ಮಾಡಲಿದ್ದಾರೆ.
ಜಿಲ್ಲಾಧಿಕಾರಿಗಳು ಫೆ.20ರಂದು ಸಾರ್ವಜನಿಕರ ಮನವಿಗಳನ್ನು ಸ್ವೀಕರಿಸಿ ಸ್ಥಳದಲ್ಲಿಯೇ ಬಗೆಹರಿಯುವುದಿದ್ದರೇ ಅಲ್ಲಿಯೇ ಬಗೆಹರಿಸಲಿದ್ದಾರೆ. ಸೂಕ್ತ ಸಲಹೆಗಳನ್ನು ನೀಡಲಿದ್ದಾರೆ. ಸಾರ್ವಜನಿಕರ ಇದರ ಸದುಪಯೋಗವನ್ನು ಪಡಿಸಿಕೊಳ್ಳಬೇಕು ಎಂದು ಹೊಸಪೇಟೆ ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಗ್ರಾಮ ವ್ಯಾಸ್ತವ್ಯಕ್ಕೆ ಸಂಬಂಧಿಸಿದಂತೆ ಹೊಸಪೇಟೆಯ ಪತ್ರಿಕಾ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದಂತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾಧಿಕಾರಿಗಳು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುತ್ತಾರೆ. ಫೆ.19ರಂದು ಗ್ರಾಮಗಳಲ್ಲಿನ ಸಾರ್ವಜನಿಕರರಿಂದ ಮನವಿಗಳನ್ನು ಸಂಗ್ರಹಿಸಿ ಮನವಿಗಳನ್ನು ಸಂಬಂಧಪಟ್ಟ ಆಯಾ ಇಲಾಖೆಗಳಿಗೆ ರವಾನಿಸಿ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮಗಳಲ್ಲಿನ 65ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ಅಂಗವಿಕಲರು, ನಿರ್ಗತಿಕರು, ವಿಧವೆಯರನ್ನು ಗುರುತಿಸಿ ಪಿಂಚಣಿ ಸೌಲಭ್ಯ ಪಡೆಯದೇ ಇರುವವರ ವಿವರಗಳನ್ನು ಪಡೆದು ದಾಖಲೆಗಳನ್ನು ಸಂಗ್ರಹಿಸಿ, ಅರ್ಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಜಿಲ್ಲಾಧಿಕಾರಿಗಳು ಆದೇಶ ನೀಡಲಿದ್ದಾರೆ ಎಂದರು.
ಗ್ರಾಮದಲ್ಲಿ ಸರ್ಕಾರಿ ಜಮೀನು ಹಾಗೂ ಸಾರ್ವಜನಿಕ ಉದ್ದೇಶಗಳಿಗೆ ಕಾಯ್ದಿರಿಸಲಾಗಿರುವ ಜಮೀನಿಗಳು ಆಕ್ರಮವಾಗಿ ಒತ್ತುವರಿಯಾಗಿದ್ದಲ್ಲಿ ಅಂತಹ ಜಮೀನಿಗಳನ್ನು ಗುರುತಿಸಿ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ದಿನನಿತ್ಯದ ನೀರಿನ ತೊಂದರೆ ಬಗ್ಗೆ ಪರಿಸ್ಥಿತಿಯನ್ನು ಅವಲೋಕಿಸಿ ಸಮಸ್ಯೆ ಇದ್ದಲ್ಲಿ ಟ್ಯಾಂಕರ್ ಮೂಲಕ ಅಥವಾ ಖಾಸಗಿ ಬೋರವೆಲ್‍ಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುವುದು ಹಾಗೂ ಇತರೆ ಸಾರ್ವಜನಿಕರ ಸಮಸ್ಯೆಗಳು ಇದ್ದಲ್ಲಿ ಮನವಿಗಳನ್ನು ಪಡೆದು ಸಂಬಂಧಿಸಿದ ಅಧಿಕಾರಿಗಳಿಗೆ ಕ್ರಮಕೈಗೊಳ್ಳುವಂತೆ ತಿಳಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಹೊಸಪೇಟೆಯ ತಹಶಿಲ್ದಾರರಾದ ಹೆಚ್.ವಿಶ್ವನಾಥ್, ತಾಲೂಕು ಪಂಚಾಯತ್‍ಯ ಕಾರ್ಯನಿರ್ವಾಹಕ ಅಧಿಕಾರಿಯಾದ ವಿಶ್ವನಾಥ್, ಮರಿಯಮ್ಮನಹಳ್ಳಿಯ ಕಂದಾಯ ನಿರೀಕ್ಷಕರಾದ ಅಂದಾನಗೌಡ, ತಿಮ್ಮಲಾಪುರ ಗ್ರಾಮಲೆಕ್ಕಿಗ ರಾಕೇಶ್, ಚಿಲಕನಹಟ್ಟಿ ಪಿಡಿಒ ಮಂಜುಳಾ ಬಾಯಿ ಹಾಗೂ ಇತರರು ಸಭೆಯಲ್ಲಿ ಇದ್ದರು.

LEAVE A REPLY

Please enter your comment!
Please enter your name here