ಸಂತ ಸೇವಾಲಾಲ್ ಜಯಂತಿ ಆಚರಣೆ

0
113

ಧಾರವಾಡ ಫೆ.15: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ಸಂತ ಶ್ರೀ ಸೇವಾಲಾಲರ ಜಯಂತಿಯನ್ನು ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.

ರಾಜ್ಯ ರೇಷ್ಮೆ ಅಭಿವೃದ್ದಿ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಅವರು ಸಂತ ಶ್ರೀ ಸೇವಾಲಾಲ ಅವರ ಭಾವಚಿತ್ರಕೆ ಪೂಜೆ, ಪುಸ್ಪಾರ್ಪಣೆ ಮಾಡಿ ನಮಿಸಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಮಾಜದ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here