ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ವಸ್ತು ಪ್ರದರ್ಶನ, ಈ ಸಂಜೀವಿನಿ ಆಪ್ ಮೂಲಕ ಉಚಿತ ವೈದ್ಯಕೀಯ ಸೌಲಭ್ಯ ಪಡೆಯರಿ

0
71

ಬಳ್ಳಾರಿ,ಫೆ.16 ; ಈ ಸಂಜೀವಿನಿ ಯೋಜನೆಯನ್ನು ಎಲ್ಲರು ಸದುಪಯೋಗಪಡಿಸಿಕೊಳ್ಳುವ ಮೂಲಕ ಪ್ರತಿ ಗ್ರಾಮವನ್ನು ಆರೋಗ್ಯಯುತವನ್ನಾಗಿ ಮಾಡಬಹುದು. ಇದರ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮತ್ತು ಮಾಹಿತಿ ನೀಡುವ ಕೆಲಸವಾಗಬೇಕು ಎಂದು ಪುರಸಭೆ ಅಧ್ಯಕ್ಷೆ ಕವಿತಾ ವಿಜಯಕುಮಾರ ಹಾಲ್ದಾಳ ಅವರು ಹೇಳಿದರು.
ಜಿಲ್ಲಾಡಳಿತ, ಜಿಪಂ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಗರಿಬೊಮ್ಮನಹಳ್ಳಿಯ ವೇಂಕಟೇಶ್ವರ ಸ್ವಾಮಿ ಜಾತ್ರಾಮಹೋತ್ಸವದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಈ ಸಂಜೀವಿನಿ ಯೋಜನೆಯನ್ನು ಸದುಪಯೋಗಪಡಿಸಿಕೊಂಡು ಪ್ರತಿ ಗ್ರಾಮವನ್ನು ಆರೋಗ್ಯಯುತವನ್ನಾಗಿ ಮಾಡಬಹುದು. ವೈದ್ಯರ ಬಳಿ ತೆರಳುವ ಅಡಚಣೆಯಿಲ್ಲದೆ ಇ ಸಂಜೀವಿನಿ ಆ್ಯಪ್ ಮೂಲಕ ತಮ್ಮ ಆರೋಗ್ಯದ ಸಮಸ್ಯೆಗಳಿಗೆ ತಜ್ಞ ವೈದ್ಯರಿಂದ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಈ ರೀತಿಯ ಮಾಹಿತಿಯುಕ್ತ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ತಿಂಗಳಿಗೆ ಒಂದು ಬಾರಿ ಆದರೂ ಸಹ ಪ್ರತಿ ತಾಲೂಕಿನಲ್ಲಿ ನಡೆಯಲಿ ಎಂದು ಹೇಳಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಶಿವರಾಜ ಅವರು ಮಾತನಾಡಿ, ಕೋವಿಡ್ ನಿಯಂತ್ರಣಕ್ಕಾಗಿ ಆರಂಭಿಸಿರುವ ಲಸಿಕೆಯನ್ನು ಈಗಾಗಲೇ ತಾಲೂಕಿನಲ್ಲಿ ಆರೋಗ್ಯ ಇಲಾಖೆ ಹಾಗೂ ಕಂದಾಯ, ಪೆÇಲೀಸ್, ಜಿಲ್ಲಾ ಪಂಚಾಯತ್, ಸ್ಥಳೀಯ ಸಂಸ್ಥೆಗಳ ಸಿಬ್ಬಂದಿ ವರ್ಗದವರಿಗೆ ನೀಡಲಾಗಿದೆ. ಈಗಾಗಲೆ 2ನೇ ಡೋಸ್ ಲಸಿಕೆಯನ್ನು ಆರೋಗ್ಯ ಇಲಾಖೆ ಸಿಬ್ಬಂದಿಯವರಿಗೆ ನೀಡಲು ಆರಂಭಿಸಲಾಗಿದೆ. ಆದರೆ ಯಾರೂ ಕೊವಿಡ್ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಇದನ್ನು ತಡೆಯುವ ನಿಟ್ಟಿನಲ್ಲಿ ಎಲ್ಲರು ತಪ್ಪದೇ ಎಸ್‍ಎಂಎಸ್ ನಿಯಮಗಳನ್ನು ಪಾಲಿಸಬೇಕು ಎಂದರು.
ವಸ್ತು ಪ್ರದರ್ಶನದಲ್ಲಿ ಆಯುμÁ್ಮನ್ ಭಾರತ ಆರೋಗ್ಯ ಕರ್ನಾಟಕ, ಸ್ತನ ಹಾಗೂ ಗರ್ಭಕಂಠದ ಕ್ಯಾನ್ಸರ್, ಬಾಯಿ ಕ್ಯಾನ್ಸರ್, ತಾಯಿ ಮಗುವಿನ ಹಾರೈಕೆ, ಲಸಿಕೆಗಳು, ಆಸ್ಪತ್ರೆ ಹೆರಿಗೆ, ತಾಯಿ ಎದೆ ಹಾಲಿನ ಮಹತ್ವ, ಹೆಣ್ಣು ಮಗು ಉಳಿಸಿ, ಪ್ರಧಾನ ಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ, ಮಾನಸಿಕ ಆರೋಗ್ಯ, ಕ್ಷಯರೋಗ, ಕುಷ್ಟರೋಗ, ಅನೀಮಿಯ ಮುಕ್ತ ಭಾರತ, ರಕ್ತದಾನ, ಕುಟುಂಬ ಕಲ್ಯಾಣದ ತಾತ್ಕಾಲಿಕ ಮತ್ತು ಶಾಶ್ವತ ವಿಧಾನಗಳು, ಪೆÇ್ಲೀರೊಸಿಸ್ ನಿಯಂತ್ರಣ, ಐಯೋಡಿನ್ ಉಪ್ಪು ಬಳಕೆ ಮಹತ್ವ, ಅಪೌಷ್ವಿಕ ಮಕ್ಕಳ ಪುನಶ್ಚೇತನ ಕೇಂದ್ರ, ತಂಬಾಕು ಸೇವನೆಯ ಹಾನಿಗಳು, ಡೆಂಗ್ಯೂ, ಚಿಕುನ್‍ಗುನ್ಯಾ, ಮಲೇರಿಯ, ಮತ್ತು ಇತರ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ವೀಡಿಯೊ, ಭಿತ್ತಿಪಲಕಗಳು, ಸ್ಟ್ಯಾಂಡಿಂಗ್‍ಗಳ ಮೂಲಕ ಪ್ರದರ್ಶನವನ್ನು ಕೈಗೊಳ್ಳಲಾಯಿತು. ಈ ಸಮಯದಲ್ಲಿ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಕರಪತ್ರಗಳನ್ನು ವಿತರಿಸಿ ಮಾಹಿತಿ ನೀಡಲಾಯಿತು.
ಇದೇ ವೇಳೆ ಸ್ಥಳದಲ್ಲಿಯೇ ರಕ್ತಪರೀಕ್ಷೆ, ರಕ್ತದೊತ್ತಡ ಪರೀಕ್ಷೆ ಮಾಡುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಬಸವರಾಜ, ಅಲ್ಲಾಭಕ್ಷಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ವೈದ್ಯಾಧಿಕಾರಿ ಮೋಹನಕುಮಾರ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೌರಮ್ಮ ಜೆ.ಆರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಯಮುನಾ, ಸಿಬ್ಬಂದಿಯವರಾದ ಶಿವಲಿಂಗಪ್ಪ, ಮಲ್ಲಿಕಾರ್ಜುನ, ಶಿವಪ್ಪ ಪ್ರಮೋದಿನಿ, ಮಂಜುಳಾ, ವಿಜಯಕುಮಾರ, ಲಿಂಗರಾಜ ಪಾಟೀಲ, ಶಶಿಕಲಾ, ಶೀಲಾ, ಪೂಜಾ, ರೇಖಾ, ಸೇರಿದಂತೆ ಇತರರು ಇದ್ದರು.

LEAVE A REPLY

Please enter your comment!
Please enter your name here