ಓದುಗರು ಡಿಜಿಟಲ್ ಗ್ರಂಥಾಲಯದ ಸದುಪಯೋಗ ಪಡಿಸಿಕೊಳ್ಳಬೇಕು – ಡಾ.ಸತೀಶ್ ಕುಮಾರ್ ಎಸ್ ಹೊಸಮನಿ

0
84

ಶಿವಮೊಗ್ಗ, ಫೆಬ್ರವರಿ 17 : ಸಾರ್ವಜನಿಕ ಗ್ರಂಥಾಲಯ ಇಲಾಖೆಯು ಓದುಗರಿಗಾಗಿ ಸಾಕಷ್ಟು ನೂತನ ಯೋಜನೆಗಳನ್ನು ರೂಪಿಸಿದೆ. ಓದುಗರಿಗೆ ತಾವಿದ್ದಲ್ಲಿಯೇ ಪುಸ್ತಕಗಳನ್ನು ಒದಗಿಸುವ ಸಲುವಾಗಿ ಇಲಾಖೆಯು ಇ – ಗ್ರಂಥಾಲಯದ ಸೌಲಭ್ಯವನ್ನು ಒದಗಿಸುವಲ್ಲಿ ಮುಂದಡಿ ಇಟ್ಟಿದೆ. ಈ ಎಲ್ಲಾ ಸೌಲಭ್ಯವನ್ನು ಓದುಗರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ. ಸತೀಶ್ ಕುಮಾರ್ ಎಸ್ ಹೊಸಮನಿ ಹೇಳಿದರು.
ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯ ಶಿವಮೊಗ್ಗ ಹಾಗೂ ಕೋಲ್ಕತ್ತ ರಾಜಾ ರಾಮ್ ಮೋಹನ್ ರಾಯ್ ಗ್ರಂಥಾಲಯ ಪ್ರತಿμÁ್ಠನ ಇವರ ಸಹಯೋಗದಲ್ಲಿ ಬುಧವಾರ ಶಿವಮೊಗ್ಗ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಆಯೋಜನೆ ಮಾಡಲಾಗಿದ್ದ ಸಿಬ್ಬಂದಿ ಹಾಗೂ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರುಗಳಿಗೆ ಕೌಶಲ್ಯ ಅಭಿವೃದ್ದಿ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಗ್ರಂಥಾಲಯವನ್ನು ಡಿಜಿಟಲೀಕರಣ ಮಾಡಲಾಗಿದ್ದು, ಈಗಾಗಲೇ ಸುಮಾರು 20 ಲಕ್ಷ ಮಂದಿ ಡಿಜಿಟಲ್ ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಓಡುವ ಜಗತ್ತಿಗೆ ಹೊಂದಿಕೊಳ್ಳುವಂತೆ ಗ್ರಂಥಾಲಯವನ್ನು ಜನರ ಕೈಗೆಟಕುವಂತೆ ಅಭಿವೃದ್ದಿ ಮಾಡಿಸಲಾಗುತ್ತಿದೆ. ಆನ್‍ಲೈನ್ ಮೂಲಕ ಓದುಗರು ಸರಳವಾಗಿ ಮತ್ತು ಉಚಿತವಾಗಿ ಸಾರ್ವಜನಿಕ ಗ್ರಂಥಾಲಯಕ್ಕೆ ನೋಂದಣಿ ಮಾಡಿಕೊಳ್ಳಬಹುದು. ಪ್ರತಿಯೊಬ್ಬ ಓದುಗರು ಇದರ ಸದುಪಯೋಗ ಪಡೆದುಕೊಂಡು ಹೆಚ್ಚು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿವಮೊಗ್ಗ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಹೊಳೆಹೊನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಹೆಚ್. ಎಸ್.ವಿರೂಪಾಕ್ಷಪ್ಪ ಅವರು ಮಾತನಾಡಿ, ಗ್ರಂಥಾಲಯಗಳು ವಿದ್ಯಾರ್ಥಿಗಳನ್ನು ಓದಿನತ್ತ ಸೆಳೆಯುವ ಕಾರ್ಯ ಮಾಡಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುತ್ತಿರುವ ಯುವ ಜನತೆಗೆ ಗ್ರಂಥಾಲಯಗಳು ಉತ್ತಮ ಪುಸ್ತಕಗಳನ್ನು ಒದಗಿಸುವ ಮೂಲಕ ಪೆÇ್ರೀತ್ಸಾಹ ನೀಡಬೇಕು. ಈ ಕಾರ್ಯವನ್ನು ಸಫಲಗೊಳಿಸುವಲ್ಲಿ ಪ್ರತಿಯೊಬ್ಬ ಗ್ರಂಥಪಾಲಕರೂ ಗಮನಹರಿಸಬೇಕು ಎಂದರು.
ಜಿಲ್ಲೆಯ ಗ್ರಂಥಪಾಲಕರ ಸಮಸ್ಯೆಗಳ ಕುರಿತು ಇಲಾಖೆಯ ಜೊತೆ ಹಾಗೂ ಜಿಲ್ಲಾಧಿಕಾರಿಗಳ ಜೊತೆ ಈಗಾಗಲೇ ಚರ್ಚಿಸಲಾಗಿದೆ. ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಸಮಸ್ಯೆಗಳಿಂದಾಚೆಗೆ ಪ್ರತಿಯೊಬ್ಬರೂ ಜ್ಞಾನ ಹಂಚುವ ಈ ಮಹಾತ್ಕಾರ್ಯದಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಿಪ್ಪೇಸ್ವಾಮಿ ಮುಖ್ಯ ಗ್ರಂಥಾಧಿಕಾರಿ ಚಿತ್ರದುರ್ಗ, ಡಾ. ಹೆಚ್.ಬಿ. ಮಡಿವಾಳರ್ ನಿವೃತ್ತ ಮುಖ್ಯ ಗ್ರಂಥ ಪಾಲಕರು ಶಿವಮೊಗ್ಗ, ವೆಂಕಟೇಶ್ ಸಿ.ಜೆ ಉಪ ನಿರ್ದೇಶಕರು ಜಿಲ್ಲಾ ಕೇಂದ್ರ ಗ್ರಂಥಾಲಯ ಶಿವಮೊಗ್ಗ, ಹರೀಶ್ ಮುಖ್ಯಾ ಗ್ರಂಥಾಲಯಧಿಕಾರಿ ನಗರ ಕೇಂದ್ರ ಗ್ರಂಥಾಲಯ ಶಿವಮೊಗ್ಗ, ಜಿಲ್ಲೆಯ ವಿವಿಧ ತಾಲೂಕು ಮತ್ತು ಗ್ರಾಮ ಪಂಚಾಯತ್ ಗ್ರಂಥಪಾಲಕರು ಹಾಗೂ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು
ಮೂರು ದಿನಗಳ ತರಬೇತಿ ಶಿಬಿರದ ಎರಡನೇ ದಿನವಾದ ಬುಧವಾರ ಡಾ.ಹೆಚ್. ಬಿ. ಮಡಿವಾಳರ್ ಸಿಬ್ಬಂದಿ ಹಾಗೂ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರುಗಳಿಗೆ ಕೌಶಲ್ಯ ಅಭಿವೃದ್ಧಿ ಕುರಿತು ತರಬೇತಿ ನೀಡಿದರು.

LEAVE A REPLY

Please enter your comment!
Please enter your name here