ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ ಪರಿಶೀಲನೆ:ಎಸಿ ಸಿದ್ದರಾಮೇಶ್ವರ

0
74

ಬಳ್ಳಾರಿ/ಹೊಸಪೇಟೆ,ಫೆ.19 : ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಹೊಸಪೇಟೆಯ ಸಹಾಯಕ ಆಯುಕ್ತರ ಕಚೇರಿ ಆವರಣದಲ್ಲಿ ಶುಕ್ರವಾರ ನಡೆಯಿತು.
ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಅವರು ಹೊಸಪೇಟೆ ಉಪವಿಭಾಗಕ್ಕೆ ಸಂಬಂಧಪಟ್ಟಂತೆ ಎಲ್ಲಾ ತಾಲ್ಲೂಕುಗಳು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳಿಗೆ ಸಂಬಂಧಪಟ್ಟಂತೆ ಮತ್ತು ಪೋಲಿಸ್ ಇಲಾಖೆಗಳಿಗೆ ಸಂಬಂಧಪಟ್ಟಂತೆ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣದ ಬಗ್ಗೆ ಸಭೆಯಲ್ಲಿ ಚರ್ಚಿಸಿದರು.
ಪ್ರತಿ ಮೂರು ತಿಂಗಳಿಗೊಮ್ಮೆ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಹಮ್ಮಿಕೊಳ್ಳಲಾಗುವುದು, ಸಭೆಯಲ್ಲಿ ಚರ್ಚಿಸಲಾದ ವಿಷಯ ಹಾಗೂ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ತಿಳಿಸಿಲಾಗುವುದು ಮತ್ತು ಮೂರು ತಿಂಗಳ ನಂತರ ಪುನರಾವಲೋಕನ ಮಾಡಲಾಗುವುದು ಎಂದು ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಅವರು ತಿಳಿಸಿದರು.
ಎಸ್ಸಿ/ಎಸ್ಟಿಯವರಿಗೆ ಅಸ್ಪøಶ್ಯತೆ ಆಚರಣೆ ಬಗ್ಗೆ ಏಲ್ಲಾದರೂ ದೂರು ನೀಡಿದಾಗ ಮತ್ತು ದೌರ್ಜನ್ಯ ತಡೆಯುವುದರ ಬಗ್ಗೆ ಹಾಗೂ ದೌರ್ಜನ್ಯವಾದ ಪ್ರಕರಣಗಳಲ್ಲಿ ಕಾನೂನಾತ್ಮಕ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಪಟ್ಟಣದ ಪೋಲಿಸ್ ಇನ್ಸ್‍ಪೆಕ್ಟರ್ ಎಂ.ಶ್ರೀನಿವಾಸ್ ಮಾತನಾಡಿ, ಎಸ್ಸಿ/ಎಸ್ಟಿ ಹಾಸ್ಟೆಲ್‍ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಮತ್ತು ಅಲ್ಲಿನ ಮಕ್ಕಳೊಂದಿಗೆ ಸಂವಾದ ನಡೆಸಬೇಕು. ಇದರಿಂದ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಲ್ಪಿಸುವುದರ ಜತೆಗೆ ಅವರಿಗೂ ಸ್ಪೂರ್ತಿ ನೀಡಿದಂತಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಹಂಪಿಯ ಡಿ.ವೈ.ಎಸ್.ಪಿ ಕಾಶಿಗೌಡ, ಹೊಸಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿದೇರ್ಶಕ (ಗ್ರೇಡ್-1) ವಸಂತಕುಮಾರ, ಪ.ಜಾ, ಮತ್ತು ಪ.ಪಂ, ದ ಅಧಿಕಾರೇತರ ಸದಸ್ಯ ನಿಂಬಗಲ್ ರಾಮಕೃಷ್ಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here