ರಸ್ತೆ ಸುರಕ್ಷತಾ ಸಮಿತಿ ಸಭೆ, ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಅಧಿಸೂಚನೆಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಿ: ಡಿಸಿ ಮಾಲಪಾಟಿ

0
78

ಬಳ್ಳಾರಿ,ಫೆ.19 : ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ಹೊರಡಿಸಲಾದ ಅಧಿಸೂಚನೆಗಳನ್ನು ಅನುಷ್ಠಾನ ಮಾಡುವುದಕ್ಕೆ ಸಂಬಂಧಿಸಿದಂತೆ ಉಪಸಮಿತಿ ಸಭೆ ನಡೆಸಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಳ್ಳಾರಿ ಮತ್ತು ಹೊಸಪೇಟೆ ನಗರಗಳಲ್ಲಿ ನಗರ ಸಾರಿಗೆ ವಾಹನಗಳ ಬಸ್ ನಿಲ್ದಾಣ ಹಾಗೂ ಬಸ್ ಶೆಲ್ಟರ್‍ಗಳ ನಿಲುಗಡೆ/ನಿಲುಗಡೇತರ ಸ್ಥಳ,ನಿರ್ಧಿಷ್ಠ ಸ್ಥಳಗಳಲ್ಲಿ ಆಟೋ ರಿಕ್ಷಾ ನಿಲುಗಡೆಗೆ ಸಂಬಂಧಿಸಿದ ಅಧಿಸೂಚನೆಗಳನ್ನು ಕೂಡಲೇ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು,ಮಹಾನಗರ ಪಾಲಿಕೆ/ನಗರಸಭೆ ಹಾಗೂ ಪೊಲೀಸ್ ಇಲಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದ ಅವರು ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಹೊಸ ಪ್ರಸ್ತಾವನೆಗಳಿಗೆ ಸಂಬಂಧಿಸಿದಂತೆ ವಿವರವಾಗಿ ಚರ್ಚಿಸಿ ಸಲ್ಲಿಸವಂತೆ ಸೂಚಿಸಿದರು.
ಸಂಡೂರು ಭಾಗದಲ್ಲಿ ಓವರ್ ಸ್ಪೀಡ್‍ನಿಂದಾಗಿ ಅನೇಕ ಅಪಘಾತಗಳಾಗುತ್ತಿರುವುದು ಗಮನಕ್ಕೆ ಬಂದಿದ್ದು,ಪೊಲೀಸ್ ಮತ್ತು ಆರ್‍ಟಿಒ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಕ್ರಮಕೈಗೊಳ್ಳಿ ಎಂದು ಸೂಚಿಸಿದ ಡಿಸಿ ಮಾಲಪಾಟಿ ಅವರು ಹೆಲ್ಮೆಟ್ ರಹಿತ ಬೈಕ್ ಚಾಲನೆ ತುಂಬಾ ಅಪಾಯಕಾರಿ ಹಾಗೂ ಇದರಿಂದ ಅನೇಕ ಅಪಘಾತಗಳಾಗುತ್ತಿದೆ; ಕಟ್ಟುನಿಟ್ಟಾಗಿ ಹೆಲ್ಮೆಟ್ ಕಡ್ಡಾಯಗೊಳಿಸಿ ಮತ್ತು ಉಲ್ಲಂಘಿಸಿದವರಿಗೆ ನಿಯಮಾನುಸಾರ ಕ್ರಮಕೈಗೊಳ್ಳಿ ಎಂದರು.
ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ 8.33ಲಕ್ಷ ರೂ.ಅನುದಾನ ಲಭ್ಯವಿದ್ದು,ಸುರಕ್ಷತೆಗೆ ಸಂಬಂಧಿಸಿದಂತೆ ಅನುದಾನ ಅಗತ್ಯವಿದ್ದಲ್ಲಿ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ ಡಿಸಿ ಮಾಲಪಾಟಿ ಅವರು ಸರಕು ಸಾಗಾಣೆ ವಾಹನಗಳಲ್ಲಿ ಪ್ರಯಾಣಿಕರನ್ನು ಅನಧಿಕೃತವಾಗಿ ಸಾಗಿಸುವುದನ್ನು ನಿಯಂತ್ರಿಸಲು ಹಾಗೂ ಸಾರಿಗೇತರ ವಾಹನಗಳಲ್ಲಿ ಬಾಡಿಗೆ ಪಡೆದು ಪ್ರಯಾಣಿಕರನ್ನು ಕೊಂಡೊಯ್ಯುತ್ತಿರುವ ಪ್ರಕರಣಗಳ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿನ ರಾಷ್ಟ್ರೀಯ/ರಾಜ್ಯ ಹೆದ್ದಾರಿಗಳಲ್ಲಿ ಮತ್ತು ಮುಖ್ಯ ರಸ್ತೆಗಳಲ್ಲಿ ಸೇರುವ ಕೂಡು ರಸ್ತೆಗಳ ಬಳಿ, ರೈಲ್ವೆ ಕ್ರಾಸಿಂಗ್ ಅತ್ತರ, ಜನಸಂದಣಿ ಇರುವ ಸ್ಥಳಗಳಾದ ಶಾಲಾ ಕಾಲೇಜು/ಧಾರ್ಮಿಕ/ಮಾರುಕಟ್ಟೆಗಳು ಸೇರಿದಂತೆ ಇನ್ನೀತರ ಸ್ಥಳಗಳಲ್ಲಿ ರಸ್ತೆ ಉಬ್ಬುಗಳ ಬದಲಾಗಿ ಇತರೆ ವೇಗ ನಿಯಂತ್ರಣ ಕ್ರಮಗಳನ್ನು ವೈಜ್ಞಾನಿಕವಾಗಿ ಅನುಷ್ಠಾನಗೊಳಿಸಬೇಕು ಮತ್ತು ಅವೈಜ್ಞಾನಿಕವಾಗಿ ನಿರ್ಮಿಸಲಾದ ರಸ್ತೆ ಉಬ್ಬುಗಳನ್ನು ತೆರವುಗೊಳಿಸಬೇಕು ಎಂದು ಅವರು ಸೂಚಿಸಿದರು.
2019ರ ಜನೆವರಿಯಿಂದ ಡಿಸೆಂಬರ್‍ವರೆಗೆ 932 ಅಪಘತಾಗಳಾಗಿವೆ. ಅದೇ ರೀತಿ 2020ರ ಜನೆವರಿಯಿಂದ ಡಿಸೆಂಬರ್‍ವರೆಗೆ 811 ಅಪಘಾತಗಳಾಗಿವೆ.ಜಿಲ್ಲೆಯಲ್ಲಿ 20 ಬ್ಲಾಕ್‍ಸ್ಪಾಟ್‍ಗಳೆಂದು ಗುರುತಿಸಲಾಗಿದ್ದು,ಅವುಗಳಲ್ಲಿ 17 ಸರಿಪಡಿಸಲಾಗಿದ್ದು,ಇನ್ನೂ 3 ಬ್ಲಾಕ್ ಸ್ಪಾಟ್ ಸರಿಪಡಿಸಬೇಕಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಶೇಖರ್ ಸಭೆಗೆ ವಿವರಿಸಿದರು.
ರಸ್ತೆ ನಿಯಮಗಳನ್ನು ಉಲ್ಲಂಘಿಸಿದ ಆಧಾರದ ಮೇರೆಗೆ 2019 ಜನೆವರಿಯಿಂದ ಡಿಸೆಂಬರ್‍ವರೆಗೆ 162 ಚಾಲಕರ ಲೈಸೆನ್ಸ್ ರದ್ದುಪಡಿಸಲಾಗಿದೆ;ಅದೇ ರೀತಿ 2020 ಜನೆವರಿಯಿಂದ ಡಿಸೆಂಬರ್‍ವರೆಗೆ 112 ಚಾಲಕರ ಲೈಸೆನ್ಸ್ ರದ್ದುಪಡಿಸಲಾಗಿದೆ.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್, ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ಲಾವಣ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.

LEAVE A REPLY

Please enter your comment!
Please enter your name here