ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಅಪ್ಪಚ್ಚು ರಂಜನ್ ಚಾಲನೆ

0
98

ಮಡಿಕೇರಿ ಫೆ.19 :-ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾ ಕೂಟ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಶುಕ್ರವಾರ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರು ಹಾಕುವ ಮೂಲಕ ಶಾಸಕರು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಶಾಸಕರಾದ ಅಪ್ಪಚ್ಚು ರಂಜನ್ ಅವರು ಸರ್ಕಾರಿ ನೌಕರರು ಪ್ರತಿನಿತ್ಯ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ. ಆದ್ದರಿಂದ ಮಾನಸಿಕ ನೆಮ್ಮದಿಗೆ ಕ್ರೀಡೆ ಮತ್ತು ಸಾಂಸ್ಕøತಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ ಎಂದು ಶಾಸಕರು ಅಭಿಪ್ರಾಯಪಟ್ಟರು.
ಕ್ರೀಡೆ ಮತ್ತು ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಆರೋಗ್ಯಕ್ಕೆ ಹೆಚ್ಚಿನ ಗಮನ ನೀಡಿದಂತಾಗುತ್ತದೆ. 40 ವರ್ಷವಾದ ನಂತರ ಸರಿಯಾದ ಆಹಾರ ಪದ್ಧತಿ ರೂಢಿಸಿಕೊಳ್ಳಬೇಕು ಎಂದರು.
ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಎಂತಹ ಒತ್ತಡ ಬದುಕಿನಲ್ಲಿಯೂ ನಿಭಾಯಿಸಬೇಕು. ಪ್ರತೀ ನಿತ್ಯ ಅರ್ಧ ಗಂಟೆಯಾದರೂ ನಡಿಗೆ, ವ್ಯಾಯಾಮ ಮಾಡಬೇಕು ಎಂದು ಶಾಸಕರು ಸಲಹೆ ಮಾಡಿದರು.
ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್ ಅವರು ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸರ್ಕಾರಿ ನೌಕರರು ಸಮಾಜದ ಕಣ್ಣುಗಳಿದ್ದಂತೆ. ಪ್ರತಿನಿತ್ಯ ಜನರ ಕುಂದುಕೊರತೆಗಳನ್ನು ನಿಭಾಯಿಸುವಲ್ಲಿ ಶ್ರಮಿಸುತ್ತಾರೆ ಎಂದರು.
ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಎರಡು ದಿನದಿಂದ ನಾಲ್ಕು ದಿನಕ್ಕೆ ಹೆಚ್ಚಿಸಬೇಕು. ಆ ನಿಟ್ಟಿನಲ್ಲಿ ಜಿ.ಪಂ.ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ಅವರು ಹೇಳಿದರು.
ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್ ಅವರು ಮಾತನಾಡಿ ಕ್ರೀಡೆಯು ಪ್ರತಿಯೊಬ್ಬರ ಆರೋಗ್ಯದ ದೃಷ್ಟಿಯಲ್ಲಿ ಅವಿಭಾಜ್ಯ ಅಂಗವಾಗಿದೆ ಎಂದು ಅವರು ತಿಳಿಸಿದರು.
ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ದಿನನಿತ್ಯ ನಡಿಗೆಯಲ್ಲಿ ತೊಡಗಿಸಿಕೊಳ್ಳುತ್ತಾರೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅಪ್ಪಂಡೇರಂಡ ಭವ್ಯ ಅವರು ಮಾತನಾಡಿ ಸರ್ಕಾರಿ ನೌಕರರು ಪ್ರತೀ ನಿತ್ಯದ ಜಂಜಾಟದಿಂದ ದೂರವಿರಲು ಕ್ರೀಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ. ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಜಿ.ಪಂ.ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ಅವರು ಹೇಳಿದರು.
ತಾ.ಪಂ.ಅಧ್ಯಕ್ಷರಾದ ತೆಕ್ಕಡೆ ಶೋಭ ಮೋಹನ್ ಅವರು ಮಾತನಾಡಿ ಕಳೆದ ಒಂದು ವರ್ಷದಿಂದ ಕೋವಿಡ್‍ನಿಂದಾಗಿ ಸರ್ಕಾರಿ ನೌಕರರು ಒಂದೆಡೆ ಸೇರಲು ಕಷ್ಟಸಾಧ್ಯವಾಗಿತ್ತು. ಸದ್ಯ ಕೋವಿಡ್-19 ಕಡಿಮೆಯಾಗುತ್ತಿರುವುದರಿಂದ ಸ್ವಲ್ಪಮಟ್ಟಿಗೆ ಚೇತರಿಕೆ ಕಂಡುಬರುತ್ತದೆ. ಆದರೂ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಅವರು ಹೇಳಿದರು.
ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಸ್ಪರ್ಧಿಸುವುದು ಅತೀ ಮುಖ್ಯ. ಸೋಲು-ಗೆಲುವು ನಂತರ ಎಂದು ಅವರು ಹೇಳಿದರು.
ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಸಹ ಕಾರ್ಯದರ್ಶಿ ಎಚ್.ಎಸ್.ಚೇತನ್ ಅವರು ಮಾತನಾಡಿ ರಾಜ್ಯ ಸರ್ಕಾರಿ ನೌಕರರು ಪ್ರಕೃತಿ ವಿಕೋಪ ಹಾಗೂ ಕೋವಿಡ್-19 ಲಾಕ್‍ಡೌನ್ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾರ್ವಜನಿಕರ ಕುಂದುಕೊರತೆಯನ್ನು ಪರಿಹರಿಸುವಲ್ಲಿ ಹೆಚ್ಚಿನ ಶ್ರಮವಹಿಸಿದ್ದಾರೆ. ಸರ್ಕಾರಿ ನೌಕರರ ಕರ್ತವ್ಯ ಪ್ರಜ್ಞೆಯನ್ನು ಮೆಚ್ಚಬೇಕಿದೆ ಎಂದರು.
ತಹಶೀಲ್ದಾರ್ ಮಹೇಶ್, ಪೌರಾಯುಕ್ತರಾದ ರಾಮದಾಸ್, ಅಬಕಾರಿ ಇಲಾಖೆಯ ಉಪ ಆಯುಕ್ತರಾದ ಬಿಂದುಶ್ರೀ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ, ರಾಜ್ಯ ಸರ್ಕಾರಿ ನೌಕರರ ತಾಲ್ಲೂಕು ಅಧ್ಯಕ್ಷರಾದ ಬಿ.ಎಸ್.ಗುರುರಾಜ್(ವಿರಾಜಪೇಟೆ), ಪ್ರದೀಪ್(ಸೋಮವಾರಪೇಟೆ), ಕಾರ್ಯದರ್ಶಿ ಎಂ.ಸಿ.ಅರುಣ್ ಕುಮಾರ್, ಖಜಾಂಜಿ ರಾಜೇಶ್ ಪಿ.ಡಿ., ರಾಜ್ಯ ಪರಿಷತ್ ಸದಸ್ಯರಾದ ಜನಾರ್ಧನ, ಶ್ರೀನಿವಾಸ್, ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶ್ ಇತರರು ಇದ್ದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಕೆ.ಬಿ.ರವಿ ಅವರು ಸ್ವಾಗತಿಸಿದರು. ಸಂಘದ ಸಾಂಸ್ಕøತಿಕ ಕಾರ್ಯದರ್ಶಿ ರೇವತಿ ರಮೇಶ್, ಜಯಮ್ಮ, ವರದರಾಜು ನಿರೂಪಿಸಿದರು. ಚಿತ್ರಾವತಿ ಪ್ರಾರ್ಥಿಸಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಗೌರವ ಅಧ್ಯಕ್ಷರಾದ ಎಸ್.ಟಿ.ಶಮ್ಮಿ ವಂದಿಸಿದರು.

LEAVE A REPLY

Please enter your comment!
Please enter your name here