ಕಂದಾಯ ಸರ್ವೆ ನಂಬರ್ ಕುರಿತು ಸಭೆ ನಡೆಸುವಂತೆ ಮನವಿ

0
86

ಬಳ್ಳಾರಿ,ಫೆ.20 ; ನಗರಾಭಿವೃದ್ದಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ 75 ಸಾವಿರಕ್ಕೂ ಹೆಚ್ಚು ಟೌನ್ ಸರ್ವೆ ನಂ. ಗಳಿಗೆ ನಗರಾಭಿವೃದ್ದಿ ಪ್ರಾಧಿಕಾರದ ಅನುಮೋದನೆ ಪಡೆಯದೆ ಫಾರಂ-2 ಮತ್ತು ಫಾರಂ-3 ನೀಡಿದ್ದು, ಇದನ್ನು ಸರಿಪಡಿಸುವ ದೃಷ್ಟಿಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಬೇಕೆಂದು ಬುಡಾ ಅಧ್ಯಕ್ಷ ದಮ್ಮೂರು ಶೇಖರ ಅವರು ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಿದರು.
ಕಂದಾಯ ಸರ್ವೆ ನಂಬರ್ಗಳಲ್ಲಿ ಕೂಡ ಪ್ರಾಧಿಕಾರದ ವ್ಯಾಪ್ತಿಯ 18 ಗ್ರಾಮಗಳಲ್ಲಿ ಸಾವಿರ ಎಕರೆಗೂ ಹೆಚ್ಚು ಜಮೀನುಗಳಿಗೆ ಪ್ರಾಧಿಕಾರದ ಅನುಮೋದನೆ ಪಡೆಯದೆ 11ಎ ಮತ್ತು11ಬಿ ನೀಡಿದ್ದಾರೆ.
ನಗರಾಭಿವೃದ್ದಿ ಇಲಾಖೆಯ ಕಾರ್ಯದರ್ಶಿಗಳು ಕಳೆದ ಡಿ.16ರಂದು ಜಿಲ್ಲಾಧಿಕಾರಿಗಳಿಗೆ ಟೌನ್ ಸರ್ವೆ ನಂಬರ್ ಹಾಗೂ ಕಂದಾಯ ಸರ್ವೆ ನಂಬರ್ ಕುರಿತು ಮಾಹಿತಿ ನೀಡುವಂತೆ ಪತ್ರ ಬರೆದಿದ್ದು, ಇಲ್ಲಿಯವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ, ಆದ್ದರಿಂದ ನಗರಾಭಿವೃದ್ದಿ ಇಲಾಖೆಗೆ ಸ್ಪಷ್ಟವಾದ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿಗಳು ನಿರ್ದೇಶನ ನೀಡಿದ್ದು, ನಗರಾಭಿವೃದ್ಧಿ ಸಚಿವರು ಹಾಗೂ ಮುಖ್ಯಕಾರ್ಯದರ್ಶಿಗಳ ನೇತೃತ್ವದಲ್ಲಿ ಸಭೆ ನಡೆಸಿ ಎಂದು ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಿದರು..

LEAVE A REPLY

Please enter your comment!
Please enter your name here