ಜನರ ಬಾಗಿಲಿಗೆ ಜಿಲ್ಲಾಡಳಿತ ಸದುಪಯೋಗ ಪಡೆಯಲು ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಕರೆ

0
100

ಧಾರವಾಡ ಫೆ.20: ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಸೇವೆ ಹಾಗೂ ಸೌಲಭ್ಯಗಳನ್ನು ಗ್ರಾಮೀಣ ಜನರಿಗೆ ಅವರ ಸ್ಥಳದಲ್ಲಿಯೇ ಕಲ್ಪಿಸುವ ಮಹತ್ವಾಕಾಂಕ್ಷೆಯೊಂದಿಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ರೂಪಿಸಲಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಳ್ಳಿಗೆ ಆಗಮಿಸುವ ಮೂಲಕ ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಕೈಗೊಳ್ಳುತ್ತಿದ್ದಾರೆ ಜಿಲ್ಲೆಯ ಜನತೆ ಈ ಕಾರ್ಯಕ್ರಮದ ಸದುಪಯೋಗ ಪಡೆಯಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಹೇಳಿದರು.

ಕೋಗಿಲಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಇಂದು ಗ್ರಾಮವಾಸ್ತವ್ಯ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕ ಅಹವಾಲುಗಳ ಸ್ವೀಕಾರ ಕಾರ್ಯ ಉದ್ಘಾಟಿಸಿ, ಸರ್ವಜ್ಞ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಗೌರವ ಸಲ್ಲಿಸಿ ಅವರು ಮಾತನಾಡಿದರು,

ಕಂದಾಯ ಸಚಿವರು ಸೇರಿದಂತೆ ರಾಜ್ಯದ ಎಲ್ಲಾ 30 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಎಲ್ಲಾ ತಹಸೀಲ್ದಾರರು ಇಂದು ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ. ಇಂದು ಬೆಳಿಗ್ಗೆ ಕೋಗಿಲಗೇರಿ ಗ್ರಾಮಕ್ಕೆ ಆಗಮಿಸಿದ ಕೂಡಲೇ ಮೊದಲ ಸುತ್ತಿನಲ್ಲಿ ಸ್ವೀಕರಿಸಿದ ಸುಮಾರು 27 ಮನವಿಗಳನ್ನು ಈಗಾಗಲೇ ಸಂಬಂಧಿಸಿದ ಇಲಾಖೆಗಳಿಗೆ ಅಗತ್ಯ ಕ್ರಮಕ್ಕೆ ಕಳುಹಿಸಲಾಗಿದೆ. ಪರಿಶಿಷ್ಟ ಜಾತಿಯ ಕಾಲನಿಯಲ್ಲಿ 2 ಗುಂಟೆ ಗ್ರಾಮಠಾಣ ಜಾಗೆಯಲ್ಲಿ 20 ಲಕ್ಷ ರೂ.ಅನುದಾನ ಒದಗಿಸಲು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಲಾಗಿದೆ. ಪ್ರಗತಿ ಕಾಲನಿ ಯೋಜನೆಯಡಿ ರಸ್ತೆ, ಚರಂಡಿ ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಪರಿಹರಿಸಲು ಸಾಧ್ಯ ಇರುವ ಪ್ರಕರಣಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗುವುದು. ಪೆÇೀತಿ ಖಾತೆ, ಸಾಮಾಜಿಕ ಭದ್ರತೆ ಯೋಜನೆಯಡಿ ಪಿಂಚಣಿ ಮಂಜೂರಾತಿ ಕಾರ್ಯಗಳನ್ನು ಅರ್ಹರಿಗೆ ಸ್ಥಳದಲ್ಲಿಯೇ ಕಲ್ಪಿಸಲಾಗುವುದು ಎಂದರು.

ಕಂದಾಯ ಸೇರಿದಂತೆ ಎಲ್ಲಾ ಇಲಾಖೆಗಳ ಕಾರ್ಯಕ್ರಮ, ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.

ಅರವಟಗಿ ಗ್ರಾ.ಪಂ.ಅಧ್ಯಕ್ಷೆ ಅಮೀನಾಬಾಯಿ ಕಾಶಿನಗುಂಟಿ, ಉಪವಿಭಾಗಾಧಿಕಾರಿ ಡಾ.ಬಿ.ಗೋಪಾಲಕೃಷ್ಣ, ಲೋಕೋಪಯೋಗಿ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್.ಬಿ. ಚೌಡಣ್ಣವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ್, ಜಿಪಂ ಯೋಜನಾ ನಿರ್ದೆಶಕ ಬಿ.ಎಸ್ ಮೂಗನೂರಮಠ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಎನ್.ಆರ್. ಪುರುμÉೂೀತ್ತಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಶೆಟ್ಟರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಜಪ್ಪ ಸೊಗಲದ, ಪಂಚಾಯತ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಮನೋಹರ ಮಂದೋಲಿ ಮತ್ತಿತರರು ವೇದಿಕೆಯಲ್ಲಿ ಇದ್ದರು.

ಅಳ್ನಾವರ ತಹಶೀಲ್ದಾರ ಅಮರೇಶ ಪಮ್ಮಾರ ಸ್ವಾಗತಿಸಿದರು. ಗ್ರಾ.ಪಂ. ಪಿಡಿಓ ಅಪ್ಪಣ್ಣ ಬೀಡಿಮಠ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕಿ ಕೀರ್ತಿ ಬಡಿಗೇರ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here