ಜಿಲ್ಲಾ ಆಸ್ಪತ್ರೆಯ ವಿವಿಧ ಘಟಕ, ವಾರ್ಡ್ ಗಳಿಗೆ ಅನಿರೀಕ್ಷಿತ ಬೇಟಿ ನೀಡಿ, ಜಿಲ್ಲಾಧಿಕಾರಿಗಳಿಂದ ಪರಿಶೀಲನೆ; ಕಾಂಟ್ರಾಕ್ಟರ್ ಹಾಗೂ ಅಧಿಕಾರಿಗಳಿಗೆ ಎಚ್ಚರಿಕೆ.

0
131

ಧಾರವಾಡ ಫೆ.21: ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ನೂರು ಹಾಸಿಗೆ ವ್ಯವಸ್ಥೆ ಇರುವ ತಾಯಿ-ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ, ಕಾಮಗಾರಿ ವಿಳಂಬವಾಗುತ್ತಿರುವುದಕ್ಕೆ ಅಧಿಕಾರಿ ಹಾಗೂ ಗುತ್ತಿಗೆದಾರನನ್ನು ತರಾಟೆಗೆ ತೆಗೆದುಕೊಂಡರು. ಒಪ್ಪಂದ ಪ್ರಕಾರ ಈಗಾಗಲೇ ಕಾಮಗಾರಿ ಪೂರ್ಣಗೊಂಡು ಆಸ್ಪತ್ರೆ ಆರಂಭಿಸಬೇಕಿತ್ತು. ಆದರೆ ಗುತ್ತಿಗೆದಾರ ಇಲ್ಲದ ನೆಪ ಹೇಳಿ ಕಾಮಗಾರಿ ವಿಳಂಬ ಮಾಡುತ್ತಿದ್ದಾನೆ. ಬರುವ ಮಾರ್ಚ 31ರೊಳಗೆ ಕಾಮಗಾರಿ ಪುರ್ಣಗೊಳಿಸಿ ಬಳಕೆ ನೀಡದಿದ್ದರೆ, ಮೆ: ಎಸ್.ಆರ್.ಕನ್ಸಟ್ರಕ್ಷನ್ ಗುತ್ತಿಗೆ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಲು ಮತ್ತು ಆರೋಗ್ಯ ಇಲಾಖೆ ಇಂಜನೀಯರ್ ಎಇಇ ಎಸ್.ಎನ್.ಸುರೇಶ ಅವರ ಮೇಲೆ ಶಿಸ್ತುಕ್ರಮಕೈಗೊಳ್ಳಲು ಶಿಪಾರಸ್ಸು ಮಾಡುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಮಾನಕರ ಅವರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಸಂಚಿರಿಸಿದ ಜಿಲ್ಲಾಧಿಕಾರಿಗಳು, ಹಳೆಯ ಕಟ್ಟಡಗಳನ್ನು ತೆರವುಗೊಳಿಸಲು ಲೊಕೋಪಯೋಗಿ ಇಲಾಖೆಗೆ ಪತ್ರ ಬರೆಯಲು ಮತ್ತು ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಸ್ವಚ್ಚತೆ, ನೈರ್ಮಲ್ಯ ಕಾಪಾಡವಂತೆ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ತಿಳಿಸಿದರು.

LEAVE A REPLY

Please enter your comment!
Please enter your name here