ಜಿಲ್ಲಾ ಆಸ್ಪತ್ರೆಯ ವಿವಿಧ ಘಟಕ, ವಾರ್ಡ್ ಗಳಿಗೆ ಅನಿರೀಕ್ಷಿತ ಬೇಟಿ ನೀಡಿ, ಜಿಲ್ಲಾಧಿಕಾರಿಗಳಿಂದ ಪರಿಶೀಲನೆ; ಕಾಂಟ್ರಾಕ್ಟರ್ ಹಾಗೂ ಅಧಿಕಾರಿಗಳಿಗೆ ಎಚ್ಚರಿಕೆ.

0
91

ಧಾರವಾಡ ಫೆ.21: ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಕೋವಿಶೀಲ್ಡ್ ಲಸಿಕೆ ಲಸಿಕೆ ಪಡೆದ ನಂತರ ಜಿಲ್ಲಾ ಆಸ್ಪತ್ರೆಯ ವಿವಿಧ ಘಟಕ ಹಾಗೂ ವಾರ್ಡ್ ಗಳಿಗೆ ಭೇಟಿ ನೀಡಿ, ಚಿಕಿತ್ಸೆ ಹಾಗೂ ಸೌಲಭ್ಯಗಳ ಕುರಿತು ರೋಗಿಗಳ ಹಾಗೂ ಪಾಲಕರ ಅಭಿಪ್ರಾಯ ಪಡೆದರು.
ಪೌಷ್ಟಿಕಾಹಾರ ಕೊರತೆಯಿಂದ ಬಳಲುವ ಮಕ್ಕಳಿಗೆ ಚಿಕಿತ್ಸೆ, ಪೌಷ್ಟಿಕಾಂಶ ನೀಡಲು ಆರಂಭಸಿರುವ ಮಕ್ಕಳ ಆರೋಗ್ಯ ಪುನಶ್ಚೇತನ ಕೇಂದ್ರಕ್ಕೆ ಭೇಟಿ ನೀಡಿದರು. ಅಲ್ಲಿ ಮಕ್ಕಳಿಗೆ ಪೌಷ್ಟಿಕಾಹಾರ ಮತ್ತು ಪಾಲಕರಿಗೆ ನೀಡುವ ಆಹಾರ, ಔಷಧಗಳ ಬಗ್ಗೆ ಮಾಹಿತಿ ಪಡೆದರು. ಜಿಲ್ಲೆಯಲ್ಲಿ ಪೌಷ್ಟಿಕಾಂಶದ ಕೊರತೆಯಿಂದಾಗ ಇರುವ ಮಕ್ಕಳನ್ನು ಗುರುತಿಸಿ, ಅಂಗನವಾಡಿ ಕೇಂದ್ರಗಳಿಂದ ಶಿಪಾರಸ್ಸು ಮಾಡಬೇಕು. ಈ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ತೃಪ್ತಿಕರವಾಗಿ ಕೇಲಸ ಮಾಡುತ್ತಿಲ್ಲ. ಎಕಕಾಲಕ್ಕೆ ಹತ್ತು ಮಕ್ಕಳಿಗೆ ಆರೈಕೆ ಮಾಡಲು ಜಿಲ್ಲಾಸ್ಪತ್ರೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಬಡವರಿಗೆ, ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ಈ ಸೌಲಭ್ಯ ತಲುಪಿಸುವಲ್ಲಿ ಇಲಾಖೆ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಅವರು ಹೇಳಿದರು.

LEAVE A REPLY

Please enter your comment!
Please enter your name here