ಬಳ್ಳಾರಿ,ಫೆ.22 ; ಸಂಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 60 ವರ್ಷದ ಎಸ್.ನಾಗರಾಜ ಎನ್ನುವ ವ್ಯಕ್ತಿ ಫೆ.17ರಿಂದ ಕಾಣೆಯಾಗಿರುವ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಣೆಯಾದ ವ್ಯಕ್ತಿಯ ಚಹರೆ ಗುರುತು: 5.5ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ತೇಳುವಾದ ಮೈಕಟ್ಟು, ಬಿಳಿ ಬಣ್ಣದ ತುಂಬು ತೋಳಿನ ಅಂಗಿ ಮತ್ತು ನೀಡಲಿ ಬಣ್ಣದ ಲುಂಗಿ ಧರಿಸಿರುತ್ತಾನೆ, ಕನ್ನಡ ಮತ್ತು ತೆಲುಗು ಮಾತನಾಡುತ್ತಾನೆ.
ಕಾಣೆಯಾದವರ ಬಗ್ಗೆ ಯಾವುದಾದರೂ ಮಾಹಿತಿ ದೊರೆತಲ್ಲಿ ಕೂಡಲೆ ಹತ್ತಿರದ ಪೊಲೀಸ್ ಠಾಣೆಗೆ ತಿಳಿಸುವಂತೆ ಸೂಚಿಸಲಾಗಿದೆ.