ಸರ್ಕಾರಿ ನೌಕರರ ಹಿತರಕ್ಷಣೆಗೆ ರಾಜ್ಯಸರ್ಕಾರ ಬದ್ಧವಾಗಿದೆ;ಜಿಲ್ಲಾಉಸ್ತುವಾರಿ ಸಚಿವ ಜಗದೀಶ ಶೆಟ್ಟರ್

0
83

ಧಾರವಾಡ. ಫೆ.22: ಸರ್ಕಾರಿ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಶ್ರಮಿಸುತ್ತಿರುವ ಮತ್ತು ಸುವ್ಯವಸ್ಥಿತ ಆಡಳಿತ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿರುವ ಎಲ್ಲ ಸರ್ಕಾರಿ ನೌಕರರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಅವರಿಗೆ ಅಗತ್ಯವಿರುವ ಎಲ್ಲ ರೀತಿಯ ಸೇವಾ ಭದ್ರತೆ ಹಾಗೂ ಮೂಲಸೌಕರ್ಯಗಳನ್ನು ಪೂರೈಸಲು ಕ್ರಮ ವಹಿಸಲಾಗುವುದೆಂದು ಬರಹತ್, ಮಧ್ಯಮ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಹೇಳಿದರು.

ಅವರು ಇಂದು ಬೆಳಿಗ್ಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಆಶ್ರಯದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ನೌಕರರು ಸದಾಕಾಲ ಮಾನಸಿಕ ಒತ್ತಡ ಹಾಗೂ ವಿಶ್ರಾಂತಿ ಇಲ್ಲದೇ ಶ್ರಮಿಸುತ್ತಾರೆ. ಅವರಿಗೆ ದೈಹಿಕ ಹಾಗೂ ಮಾನಸಿಕ ನೆಮ್ಮದಿ ನೀಡುವ ಹಾಗೂ ಅವರಲ್ಲಿ ಕ್ರೀಡಾ ಮನೋಭಾವನೆಯನ್ನು ಬೆಳೆಸುವ ದೃಷ್ಟಿಯಿಂದ ಪ್ರತಿವರ್ಷ ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಇದಕ್ಕೆ ಸರ್ಕಾರವು ಆರ್ಥಿಕ ನೆರವನ್ನು ನೀಡುತ್ತಿದೆ ಎಂದು ಹೇಳಿದರು.

ಸರ್ಕಾರಿ ನೌಕರರ ಬೇಡಿಕೆಯಂತೆ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸರ್ಕಾರ ಆಧ್ಯತೆ ನೀಡಿದೆ. ಸರ್ಕಾರಿ ಕಚೇರಿಗಳಲ್ಲಿ ಉತ್ತಮ ಸೌಕರ್ಯ ಕಲ್ಪಿಸುವುದರಿಂದ ನೌಕರರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಾರೆ. ಜಿಲ್ಲೆಯಲ್ಲಿ ಸರ್ಕಾರಿ ನೌಕರರಿಗೆ ಪೂರೈಸಲಾಗಿರುವ ವಸತಿ ಗೃಹಗಳು ಹಳೆಯದಾಗಿದ್ದು, ದುರಸ್ತಿಯ ಅಗತ್ಯವಿದೆ. ಹೊಸ ವಸತಿ ಗೃಹ ಸಮುಚ್ಛಯಗಳನ್ನು ಜಿಲ್ಲಾ ಹಾಗೂ ಎಲ್ಲಾ ತಾಲೂಕಾ ಕೇಂದ್ರಗಳಲ್ಲಿ ನಿರ್ಮಿಸುವಂತೆ ನೌಕರರ ಸಂಘದ ಅಧ್ಯಕ್ಷರು ಬೇಡಿಕೆ ಸಲ್ಲಿಸಿದ್ದಾರೆ. ಮತ್ತು ಸರ್ಕಾರಿ ನೌಕರರಿಗೆ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ರೂಪಿಸುವ ವಸತಿ ಬಡಾವಣೆಗಳ ಮೀಸಲಾತಿಯಲ್ಲಿ ಈಗಿರುವ ಶೇ.4 ರಷ್ಟರ ಬದಲಿಗೆ ಶೇ.10 ಕ್ಕೆ ಹೆಚ್ಚಳ ಮಾಡಿ ನೌಕರರಿಗೆ ಹೆಚ್ಚು ವಸತಿ ಸೌಕರ್ಯ ಸಿಗುವಂತೆ ಮಾಡಲು ಕೋರಿದ್ದಾರೆ. ಈ ಕುರಿತು ಸರ್ಕಾರಕ್ಕೆ ಖುದ್ದು ಪ್ರಸ್ತಾವನೆ ಸಲ್ಲಿಸಿ, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹರಿಸುವುದಾಗಿ ಸಚಿವರು ತಿಳಿಸಿದರು.

ಸರ್ಕಾರಿ ನೌಕರರ ಸಂಘದ ಕಟ್ಟಡವಿರುವ ಭೂಮಿಯ ಲೀಜ್ ಅವಧಿ ಮುಗಿದಿರುವ ಕುರಿತು ಮನವಿ ಸಲ್ಲಿಸಿ, ಲೀಜ್ ಅವಧಿಯನ್ನು ಮುಂದುವರಿಸಲು ನೌಕರರ ಸಂಘ ಬೇಡಿಕೆ ಸಲ್ಲಿಸಿದ್ದು ಜಿಲ್ಲಾಧಿಕಾರಿಗಳೊಂದಿಗೆ ಹಾಗೂ ಕಂದಾಯ ಸಚಿವರೊಂದಿಗೆ ಚರ್ಚಿಸಿ ಲೀಜ್ ಮುಂದುವರೆಸಲು ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದರು.

ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್. ಸಿದ್ಧನಗೌಡರ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರಿ ನೌಕರರ ವಿವಿಧ ಬೇಡಿಕೆಗಳ ಕುರಿತು ಮನವಿ ಮಾಡಿದರು. ಮತ್ತು ಸರ್ಕಾರ ನೌಕರರ ಹಿತರಕ್ಷಣೆಗೆ ಆಧ್ಯತೆ ನೀಡುವಂತೆ ಕೋರಿದರು. ಪ್ರಧಾನ ಕಾರ್ಯದರ್ಶಿ ಎಸ್.ಜಿ. ಸುಬ್ಬಾಪೂರಮಠ ಸ್ವಾಗತಿಸಿದರು.

ರಾಷ್ಟ್ರಮಟ್ಟದ ಕ್ರೀಡಾಪಟು ಆಗಿರುವ ಸರ್ಕಾರಿ ನೌಕರ ಎ.ಎ. ಪೊಲೀಸ್ ಪಾಟೀಲ ಕ್ರೀಡಾಜ್ಯೋತಿಯೊಂದಿಗೆ ಕ್ರೀಡಾಂಗಣಕ್ಕೆ ಆಗಮಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹಾಗೂ ಅತಿಥಿಗಳು ಕ್ರೀಡಾ ಧ್ವಜಾರೋಹಣ ನೆರವೇರಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ವೇದಿಕೆಯಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಈರಣ್ಣ ಜಡಿ, ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಂಡಳಿಯ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಉಪವಿಭಾಗಾಧಿಕಾರಿ ಡಾ: ಗೋಪಾಲಕೃಷ್ಣ. ಬಿ., ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರಕಾಶ ಸರಶೆಟ್ಟಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ, ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಬಸವರಾಜ ಗುರಿಕಾರ, ನಿಕಟಪೂರ್ವ ಜಿಲ್ಲಾಧ್ಯಕ್ಷ ಎಸ್.ಕೆ. ರಾಮದುರ್ಗ, ಜಿಲ್ಲಾ ಪದಾಧಿಕಾರಿಗಳ ಆರ್. ಲಿಂಗದಾಳ, ದೇವಿದಾಸ ಶಾಂತಿಕರ, ರಾಜಶೇಖರ್ ಬಾಣದ, ಗಿರೀಶ್ ಚೌಡಕಿ, ಕ್ರೀಡಾ ಕಾರ್ಯದರ್ಶಿ ಮಲ್ಲಿಕಾರ್ಜುನ ಸೊಲಗಿ, ಸಾಂಸ್ಕøತಿಕ ಕಾರ್ಯದರ್ಶಿಗಳಾದ ಪಿ.ಬಿ. ಕುರುಬೆಟ್ಟ, ಬಿ.ಹೆಚ್. ಕುರಿಯವರ, ಜಂಟಿ ಕಾರ್ಯದರ್ಶಿ ಡಾ: ಸುರೇಶ್ ಹಿರೇಮಠ, ತಾಲೂಕಾ ಅಧ್ಯಕ್ಷರುಗಳಾದ ಡಾ: ಪ್ರಲ್ಹಾದ ಗೆಜ್ಜಿ, ವ್ಹಿ.ಎಫ್. ಚುಳಕಿ, ಎ.ಬಿ. ಕೊಪ್ಪದ, ಆರ್.ಎಂ. ಹೊಲ್ತಿಕೋಟಿ, ಎಸ್.ಎನ್. ಅರಳಿಕಟ್ಟಿ ಸೇರಿದಂತೆ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸ್ನೇಹರಂಗ ಕಲಾತಂಡದ ಎಫ್.ಬಿ. ಕಣವಿ ನೇತೃತ್ವದ ಸದಸ್ಯರು ಸ್ವಾಗತ ಗೀತೆ ಪ್ರಸ್ತುತಪಡಿಸಿದರು. ವಿ.ಎಫ್. ಮಂಜಣ್ಣವರ ವಂದಿಸಿದರು. ಮಂಜುನಾಥ ಯಡಳ್ಳಿ ಮತ್ತು ಶಾಂತಾ ಶೀಲವಂತರ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here