ಜೆಡಿಎಸ್ ಪಕ್ಷದ ತಾಲೂಕ ಅಧ್ಯಕ್ಷರಾಗಿ ಕುರೆಕುಪ್ಪ ಸೋಮಪ್ಪ.

0
297

ಸಂಡೂರು;23.ಸಂಡೂರು ತಾಲೂಕಿನ ಜಾತ್ಯತೀತ ಜನತಾದಳದ ನೂತನ ಅಧ್ಯಕ್ಷರನ್ನಾಗಿ ಕುರೆಕುಪ್ಪ ಎನ್.ಸೋಮಪ್ಪ ಅವರನ್ನು ಜಿಲ್ಲಾಧ್ಯಕ್ಷರು ಆಯ್ಕೆ ಮಾಡಿ ಆದೇಶ ಪತ್ರ ನೀಡಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಹಿಂದೆ ಸೇವೆ ಸಲ್ಲಿಸಿದ್ದರು.ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಪರವಾಗಿ ಪ್ರಚಾರ ಮಾಡಿದ್ದರು.

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರಿದ್ದರು.ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಎನ್ಟಿ ಬೊಮ್ಮಣ್ಣ ಅವರು, ನೂತನ ಅಧ್ಯಕ್ಷರು ಪಕ್ಷ ಸಂಘಟನೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ ತೊಡಗಿಸಿಕೊಂಡು ಪಕ್ಷದ ಅಭಿವೃದ್ಧಿಗೆ ಶ್ರಮಿಸುವಂತೆ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ. ಸಂಘಟನಾಕಾರ , ಸ್ನೇಹಜೀವಿ ಸೋಮಪ್ಪನವರ ಆಯ್ಕೆಯನ್ನು ಜಾತ್ಯತೀತ ಜನತಾದಳದ ಕಾರ್ಯಕರ್ತರು ಸ್ವಾಗತ ಕೋರಿದ್ದಾರೆ.

LEAVE A REPLY

Please enter your comment!
Please enter your name here