ಎಸ್ಸಿ/ಎಸ್ಟಿ ದೌರ್ಜನ್ಯ ಪ್ರಕರಣಗಳ ಸಂಬಂಧಿಸಿದ ಜಿಲ್ಲಾಮಟ್ಟದ ಜಾಗೃತಿ/ಉಸ್ತುವಾರಿ ಸಮಿತಿ ಸಭೆ

0
91

ಬಳ್ಳಾರಿ,ಫೆ.25 : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದ ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಸಂಜೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿತು.
ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು 2014ರಿಂದ ಇದುವರೆಗೆ ಜರುಗಿದ ದೌರ್ಜನ್ಯ ಪ್ರಕರಣಗಳು,ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣಗಳು,ಎಷ್ಟು ಪ್ರಕರಣಗಳು ಶಿಕ್ಷೆಯಾಗಿವೆ ಎಂಬುದು ಸೇರಿದಂತೆ ವಿವಿಧ ವಿಷಯಗಳ ಮಾಹಿತಿಯನ್ನು ಪಡೆದುಕೊಂಡರು.
ಸಮಾಜಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಪ್ಪ ಅವರು 2014ರಿಂದ ಇದುವರೆಗೆ 139 ಪ್ರಕರಣಗಳು ನ್ಯಾಯಾಲಯದಲ್ಲಿ ವಿವಿಧ ಹಂತಗಳಲ್ಲಿ ನಡೆಯುತ್ತಿವೆ. 54 ಪ್ರಕರಣಗಳಲ್ಲಿ ಬಿ ರಿಪೋರ್ಟ್ ದಾಖಲಾಗಿವೆ. ಕಳೆದ ಮೂರು ತಿಂಗಳಲ್ಲಿ 6 ಬಿ ರಿಪೋರ್ಟ್ ಪ್ರಕರಣಗಳು ದಾಖಲಾಗಿವೆ. ಲೋಕ ಅದಾಲತ್‍ನಲ್ಲಿ ಒಂದು ಪ್ರಕರಣ(ಕೇಸ್ ಸಂಖ್ಯೆ:127/2019) ವಿಲೇವಾರಿ ಮಾಡಲಾಗಿದೆ ಎಂದು ಅವರು ವಿವರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್,ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಕಾವಲಿ ಶಿವಪ್ಪ ನಾಯಕ್,ಗಂಗಪ್ಪ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here