ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಪದ್ಧತಿ ನಿರ್ಮೂಲನಾ ಜಾಗೃತಿ ಜಾಥಾಗೆ ಚಾಲನೆ,ಬಾಲಕಾರ್ಮಿಕರನ್ನಾಗಿ ದುಡಿಸಿಕೊಂಡ ಮಾಲೀಕರ ವಿರುದ್ಧ ಕ್ರಮಕೈಗೊಳ್ಳಿ:ಡಿಸಿ ಮಾಲಪಾಟಿ

0
96

ಬಳ್ಳಾರಿ,ಫೆ.26 ; ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕಾರ್ಮಿಕ ಇಲಾಖೆ ಮತ್ತು ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆ ಸಂಯುಕ್ತ ಆಶ್ರಯದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಪದ್ಧತಿ ನಿರ್ಮೂಲನೆಗೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ಆಟೋ ಪ್ರಚಾರ ಮೂಲಕ ಜನಜಾಗೃತಿ ಮೂಡಿಸುವ ಜಾಥಾಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.
ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಜಾಥಾಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಬಾಲಕಾರ್ಮಿಕ ಮಕ್ಕಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿ; ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡ ಮಾಲೀಕರ ಮೇಲೆ ಸೂಕ್ತ ಕಾನೂನುಕ್ರಮ ಕೈಗೊಳ್ಳಿ ಎಂದು ಖಡಕ್ ಸೂಚನೆ ನೀಡಿದರು.
ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಎ.ಮೌನೇಶ್ ಮಾತನಾಡಿ, ಬಾಲಕಾರ್ಮಿಕ ಮತ್ತು ಕಿಶೋರಕಾರ್ಮಿಕ ಪದ್ದತಿ ನಿರ್ಮೂಲನೆಗೆ ಸಂಬಂಧಿಸಿದಂತೆ ಈ ಜಾಗೃತಿ ಜಾಥಾವು ಸಂಚರಿಸಲಿದ್ದು, ಫೆ.26 ರಿಂದ ಮಾ.13ರ ವರೆಗೆ ಜಿಲ್ಲೆಯಾದ್ಯಂತ ಆಟೋ ಮೂಲಕ ಪ್ರಚಾರ ಮಾಡುತ್ತಾ ಕರಪತ್ರ, ಭಿತ್ತಿಪತ್ರ ಹಂಚುವುದು ಹಾಗೂ ಸ್ಟೀಕರ್ಸ್ ಅಂಟಿಸುವುದರ ಮೂಲಕ ಸಾರ್ವಜನಿಕರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ ಸದಸ್ಯ ಹೆಚ್.ಸಿ.ರಾಘವೇಂದ್ರ, ಜಿಲ್ಲಾ ಮಕ್ಕಳರಕ್ಷಣಾಧಿಕಾರಿ ಚಾಂದ್‍ಪಾಶಾ, ಕ್ಷೇತ್ರಾಧಿಕಾರಿ ಪಿ.ಎಂ ಈಶ್ವರಯ್ಯ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಭೋಜರಾಜ ಮತ್ತು ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆಯ ಸಿಬ್ಬಂದಿ ವರ್ಗದವರು ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here