ಕೊರೊನಾ ನಿಯಂತ್ರಣಕ್ಕೆ ಪ್ರತಿಯೊಬ್ಬರು ಕೈಜೋಡಿಸಿ:ಅಪರ ಜಿಲ್ಲಾಧಿಕಾರಿ ಮಂಜುನಾಥ

0
157

ಬಳ್ಳಾರಿ,ಮಾ.05 ಜಾಗತಿಕವಾಗಿ ಎಲ್ಲಾ ದೇಶಗಳನ್ನು ಕಾಡುತ್ತಿರುವ ಕೊರೊನಾ ಸಾಂಕ್ರಾಮಿಕ ಕಾಯಿಲೆಯನ್ನು ಹೊಡೆದೋಡಿಸಲು ಸರ್ಕಾರ ಉಚಿತವಾಗಿ ನೀಡುತ್ತಿರುವ ಲಸಿಕೆಯನ್ನು ಪಡೆಯುವ ಜೊತೆಗೆ ಇಂದು ಆಶಾ ಕಾರ್ಯಕರ್ತೆಯರಿಗೆ ಸುರಕ್ಷತೆಗಾಗಿ ಸಮರ್ಥನಂ ಅಂಗವಿಕಲರ ಸಂಸ್ಥೆ ನೀಡಿದ ಕಿಟ್‌ಗಳ ಸದುಪಯೋಗಪಡಿಸಿಕೊಂಡು ಕೊರೊನಾ ನಿಯಂತ್ರಿಸಲು ಪ್ರತಿಯೊಬ್ಬರು ಸಹಕರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎಸ್. ಮಂಜುನಾಥ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಮರ್ಥನಂ ಅಂಗವಿಕಲರ ಸಂಸ್ಥೆ ಆಶ್ರಯದಲ್ಲಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಶುಕ್ರವಾರ ಸ್ಯಾನಿಟೈಸರ್, ಪೇಸ್ ಮಾಸ್ಕ್, ಗ್ಲೌಸ್, ಎನ್-95 ಮಾಸ್ಕ್, ಸೇಪ್ಟಿ ನ್ಯಾಪಿಕಿನ್ಸ್ ಒಳಗೊಂಡ ಕಿಟ್‌ಗಳನ್ನು ಆಶಾ ಕಾರ್ಯಕರ್ತೆಯರಿಗೆ ವಿತರಿಸಿ ಅವರು ಮಾತನಾಡಿದರು.
ಕಳೆದ ಒಂದು ವರ್ಷದಿಂದ ಸಮರ್ಥನಂ ಅಂಗವಿಕಲರ ಸಂಸ್ಥೆಯವರು ಕೊರೊನಾ ಮಹಾಮಾರಿಯನ್ನು ದೂರ ಮಾಡಲು ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಹೇಳಿದರು.
ಸಮರ್ಥನಂ ಅಂಗವಿಕಲರ ಸಂಸ್ಥೆಯ ನಿರ್ದೇಶಕರಾದ ಡಾ. ಮಿತೇಶ್ ಕಠಾರಿಯಾ ಮಾತನಾಡಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸಂಸ್ಥೆಯಿAದ 2082 ಆರೋಗ್ಯ ಸುರಕ್ಷಾ ಕಿಟ್ ಹಾಗೂ ಕೋವಿಡ್ ಪೆಂಡಾಮಿಕ್ ಅವಧಿಯಲ್ಲಿ ರಾಜ್ಯಾದ್ಯಾಂತ ರೇಷನ್ ಕಿಟ್ ಒಳಗೊಂಡ ಹೆಲ್ತ್ಕಿಟ್‌ಗಳನ್ನು ವಿತರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಆರೋಗ್ಯ ಕಾರ್ಯಕರ್ತೆರಿಗೂ ಕಿಟ್‌ಗಳನ್ನು ಒದಗಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಹೆಚ್.ಎಲ್.ಜನಾರ್ಧನ್, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ರಾಜಶೇಖರರೆಡ್ಡಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಆರ್.ಅನಿಲ್ ಕುಮಾರ್, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ಇಂದ್ರಾಣಿ, ತಾಲ್ಲೂಕ ಆರೋಗ್ಯ ಅಧಿಕಾರಿ ಡಾ.ಮೋಹನಕುಮಾರಿ ಹಾಗೂ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರದಾಸಪ್ಪನವರ್, ಸಂಸ್ಥೆಯ ಜಿಲ್ಲಾ ಶಾಖಾಧಿಕಾರಿ ಮೌನೇಶ್ ಆರ್.ಡಿ, ಜಿಲ್ಲಾ ಆಶಾ ಮೇಲ್ವಿಚಾರಕಿ ನೇತ್ರಾ ಮತ್ತು ಸಂಸ್ಥೆ ಸಿಬ್ಬಂದಿಯವರು ಇದ್ದರು.

LEAVE A REPLY

Please enter your comment!
Please enter your name here