ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹೆಬ್ಬಳ್ಳಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಾನೂನು ಅರಿವು-ನೆರವು ಕಾರ್ಯಕ್ರಮ

0
592

ಧಾರವಾಡ.ಮಾ.06: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಧಾರವಾಡ ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಹಾಗೂ ನೆಹರು ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ಸಂಯುಕ್ತಾಶ್ರಯದಲ್ಲಿ ಇಂದು (ಮಾ.6) ಮಹಾವಿದ್ಯಾಲಯದ ಪ್ರೌಢಶಾಲಾ ವಿಭಾಗದ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು-ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಪ್ಯಾನಲ್ ವಕೀಲರಾದ ಸೋಮಶೇಖರ ಜಾಡರ ಮತ್ತು ಬಸಮ್ಮ ಹೊಸಮನಿ, ನೂರಜಾನ್ ಕಿಲ್ಲೆದಾರ ಭಾಗವಹಿಸಿದ್ದರು.

ಮಕ್ಕಳಿಗೆ ಸಂವಿಧಾನದಲ್ಲಿರುವ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳು, ಬಾಲ್ಯ ವಿವಾಹ ತಡೆ ಕಾಯ್ದೆ, ಪೋಕ್ಸೋ ಕಾಯ್ದೆ, ಮಹಿಳೆಯರು ಮತ್ತು ಮಕ್ಕಳು ಮೇಲೆ ನಡೆಯುವ ದೌರ್ಜನ್ಯ ತಡೆ ಕಾಯ್ದೆ, ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದ ಕಾಯ್ದೆಗಳು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಧ್ಯೇಯೋದ್ದೇಶಗಳು ಬಗ್ಗೆ ಉಪನ್ಯಾಸ ನೀಡಿ ವಿವರಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯೋಪಾಧ್ಯಾಯ ಎಸ್.ಎಫ್. ಹಾವೇರಿ ಕಾರ್ಯಕ್ರಮ ಆಯೋಜಿಸಿದ ಎಲ್ಲ ಇಲಾಖೆಗಳಿಗೂ ಶ್ಲಾಘನೆ ವ್ಯಕ್ತಪಡಿಸಿದರು ಹಾಗೂ ಉಪನ್ಯಾಸಕರು ನೀಡಿದ ಉಪನ್ಯಾಸ ಮಕ್ಕಳಿಗೆ ಅತೀ ಉಪಯುಕ್ತ ವಿಷಯವಾಗಿದ್ದು ಕಾರ್ಯಕ್ರಮಗಳು ಮೇಲಿಂದ ಮೇಲೆ ಆಯೋಜಿಸಿರುವುದರಿಂದ ಅವರ ವ್ಯಕ್ತಿತ್ವ ವಿಕಸನಕ್ಕೆ ಅತೀ ಉಪಯುಕ್ತವಾದದ್ದು ಎಂದು ತಿಳಿಸಿದರು ಮತ್ತು ಮಕ್ಕಳಿಗೆ ಸದರಿ ವಿಷಯವನ್ನು ಜೀವಿತಾವಧಿಯಲ್ಲಿ ಅಳವಡಿಸಿಕೊಳ್ಳಲು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿ ಮಂಜುನಾಥ ಅಂಜುಟಗಿ ಹಾಗೂ ಮಹಾವಿದ್ಯಾಲಯದ ಶಿಕ್ಷಕರಾದ ಸಂಜೀವ ಕುಂದಗೋಳ ಭಾಗವಹಿಸಿದ್ದರು. ಶಿಕ್ಷಕ ಬಿ. ಎಸ್. ತೋಟಗಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here