ಕೋವಿಡ್ ಎರಡನೇ ಡೋಸ್ ಲಸಿಕೆ ಪಡೆದ ಡಿಸಿ ಮಾಲಪಾಟಿ

0
83

ಬಳ್ಳಾರಿ,ಮಾ.08 ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಜಿಪಂ ಸಿಇಒ ಕೆ.ಆರ್.ನಂದಿನಿ ಹಾಗೂ ಇನ್ನೀತರ ಅಧಿಕಾರಿಗಳು ಸೋಮವಾರ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಕೋವಿಡ್ ಲಸಿಕಾ ಕೇಂದ್ರದಲ್ಲಿ ಎರಡನೇ ಡೋಸ್ ಪಡೆದುಕೊಂಡರು.
ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ ಅವರುಬ ಈ ಸಂದರ್ಭದಲ್ಲಿ ಲಸಿಕೆ ಪಡೆದರು.
ಫೆ.8ರಂದು ಮೊದಲ ಡೋಸ್ ಲಸಿಕೆ ಪಡೆದಿದ್ದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ತಾಯಿಯೂ ಕೋವಿಡ್ ಲಸಿಕೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ,ಡಿಎಚ್‍ಒ ಡಾ.ಜನಾರ್ಧನ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ್ ಸೇರಿದಂತೆ ಇನ್ನೀತರರು ಇದ್ದರು.

LEAVE A REPLY

Please enter your comment!
Please enter your name here