ಬಳ್ಳಾರಿ ಅಂಚೆ ವಿಭಾಗದಲ್ಲಿ ನೇರ ಪ್ರತಿನಿಧಿಗಳ ಆಯ್ಕೆಗಾಗಿ ಸಂದರ್ಶನ ಮಾ.25ರಂದು

0
186

ಬಳ್ಳಾರಿ,ಮಾ.8 ; ಬಳ್ಳಾರಿ ಅಂಚೆ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ಆಯ್ಕೆಗಾಗಿ ಮಾ.25ರಂದು ಬೆಳಗ್ಗೆ 11ಕ್ಕೆ ನೇರ ಸಂದರ್ಶನವು ಕೋಟೆ ಪ್ರದೇಶದಲ್ಲಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು ಎಂದು ಅಂಚೆ ಅಧೀಕ್ಷಕರಾದ ಕೆ.ಮಹಾದೇವಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹತಾ ನಿಯಮಗಳು: ಅಭ್ಯರ್ಥಿಗಳು ಕಡ್ಡಾಯವಾಗಿ 10 ನೇ ತರಗತಿ ಉತ್ತೀರ್ಣರಾಗಿಬೇಕು. 18 ರಿಂದ 50 ವರ್ಷಗಳ ಒಳಗಿರಬೇಕು. ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಜೆಂಟರು ಹಾಗೂ ಮಾಜಿ ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯತಿಯ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಂಜಸವೆಂದು ಕಂಡುಬಂದ ಅಭ್ಯರ್ಥಿಗಳಿಗೆ ಆಯ್ಕೆಯಾದ ಪಕ್ಷದಲ್ಲಿ ಅವಕಾಶ ನೀಡಲಾಗುವುದು.
ನುರಿತ, ಸಂವಹನ ಕಲೆ ಹಾಗೂ ವಿಮಾ ಮಾರಾಟ ಕ್ಷೇತ್ರದಲ್ಲಿ ಪೂರ್ವಾನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು 5ಸಾವಿರ ರೂ. ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕಾಗುತ್ತದೆ. ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮಿಶನ್ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂ:08392-266037/266768 ಅಥವಾ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here