ರೆಡ್‍ಕ್ರಾಸ್ ಸಂಸ್ಥೆ ವತಿಯಿಂದ ವಾಸವಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನ ಆಚರಣೆ

0
103

ಬಳ್ಳಾರಿ,ಮಾ.8 ; ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಮತ್ತು ಶ್ರೀ ವಾಸವಿ ಪ್ರೌಢ ಶಾಲೆಯ ಸಂಯುಕ್ತಾಶ್ರಯದಲ್ಲಿ ವಾಸವಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ರೆಡ್‍ಕ್ರಾಸ್ ಸಂಸ್ಥೆಯ ಕಾರ್ಯದರ್ಶಿಗಳಾದ ಎಂ.ಎ.ಷಕೀಬ್ ಅವರು ಮಾತನಾಡಿ, ವಿಶ್ವದಲ್ಲಿ ಮಹಿಳೆಯರಿಗೆ ಉನ್ನತ ಸ್ಥಾನಮಾನ ಮತ್ತು ವಿಶೇಷ ದರ್ಜೆ ನೀಡಲಾಗಿದೆ. ಮಹಿಳೆಯರು ಯಾವ ವಿಷಯದಲ್ಲೂ ಕಡಿಮೆಯಿಲ್ಲ ಎನ್ನುವಂತೆ ಪ್ರತಿಯೊಂದು ವಿಷಯದಲ್ಲೂ ಹೆಣ್ಣು ಮಕ್ಕಳು ತಮ್ಮದೇ ಆದ ಪ್ರಭಾವವನ್ನು ಬೀರಿದ್ದಾರೆ. ಮಹಿಳೆಯರು ಸಮಾಜದ ಮುನ್ನಲೆಗೆ ಬರುವ ಮೂಲಕ ತಮ್ಮ ಜೀವನ ಸುಧಾರಣೆಯತ್ತ ಗಮನಹರಿಸಬೇಕಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ರೆಡ್‍ಕ್ರಾಸ್ ಸಂಸ್ಥೆಯ ಸದಸ್ಯರಾದ ಶಾಂತಬಾಯಿ ಕಟ್ಟಿಮನಿ ಮತ್ತು ರಿಜ್ವಾನ್ ಮೈನುದ್ದೀನ್ ಅವರು ಮಹಿಳೆಯರ ಸುರಕ್ಷತೆಯ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ವಾಸವಿ ಪ್ರೌಢ ಶಾಲೆಯ ಪ್ರಾಂಶುಪಾಲರಾದ ಆರ್.ನಲಿನಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ರೆಡ್‍ಕ್ರಾಸ್ ಸಂಸ್ಥೆಯ ಸದಸ್ಯರಾದ ಖಾಜಾ ಮೈನುದ್ದೀನ್, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮತ್ತು ಇತರರು ಇದ್ದರು.

LEAVE A REPLY

Please enter your comment!
Please enter your name here