ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

0
222

ಬಳ್ಳಾರಿ,ಮಾ.10 ;ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಟಾನಕ್ಕಾಗಿ ಮತ್ತು ಕಾಮಗಾರಿಗಳ ಗುಣಮಟ್ಟವನ್ನು ಕಾಯ್ದುಕೊಳ್ಳಲು ಬಳ್ಳಾರಿ/ವಿಜಯನಗರ ಜಿಲ್ಲೆಗಳಲ್ಲಿ ಖಾಲಿಯಿರುವ 18 ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
21ರಿಂದ 40 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಕೃಷಿ ಇಲಾಖೆಯಲ್ಲಿ ಕಾಲಿ ಇರುವ 08 ತಾಂತ್ರಿಕ ಸಹಾಯಕರ ಹುದ್ದೆಗಳಿಗೆ Bcs agri,Bsc hoirticulture, Msc agri/Msc horticulture ವಿದ್ಯಾರ್ಹತೆ ಹೊಂದಿರಬೇಕು. ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವವುಳ್ಳವರಾಗಿರಬೇಕು. ತೋಟಗಾರಿಕೆ ಇಲಾಖೆಯಲ್ಲಿ ಖಾಲಿಯಿರುವ 07 ತಾಂತ್ರಿಕ ಸಹಾಯಕರ ಹುದ್ದೆಗಳಿಗೆ Bcs agri,Bsc hoirticulture, Msc agri/Msc horticulture ವಿದ್ಯಾರ್ಹತೆ ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವವುಳ್ಳವರಾಗಿರಬೇಕು. ಅರಣ್ಯ ಇಲಾಖೆಯ 03 ತಾಂತ್ರಿಕ ಸಹಾಯಕರ ಹುದ್ದೆಗಳಿಗೆBcs Forestry/Msc Forestry ವಿದ್ಯಾರ್ಹತೆ ಹೊಂದಿರಬೇಕು.
ಜಿಪಂ ಆವರಣದಲ್ಲಿರುವ ಮಹಾತ್ಮಗಾಂಧಿ ನರೇಗಾ ಕೋಶ ವಿಭಾಗದಿಂದ ಅರ್ಜಿಗಳನ್ನು ಪಡೆದು ಮಾ.10ರಿಂದ 25ರವರೊಳಗಾಗಿ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರಿಗೆ ಮಾಸಿಕ ಸಂಭಾವನೆ 24 ಸಾವಿರ ರೂ.ನೀಡಲಾಗುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಯೆ ನಂತರ ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಮಾ.30ರಂದು ಹೊರಡಿಸಲಾಗುವುದು. ಮೆರಿಟ್ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಏ.6ರವರಗೆ ಕಾಲವಕಾಶ ನೀಡಲಾಗುತ್ತದೆ. ಏ7ರಂದು ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗುವುದು.
ಕನಿಷ್ಠ ವಿದ್ಯಾರ್ಹತೆಯಾದ ಪದವಿ ವಿದ್ಯಾರ್ಹತೆಗೆ 60 ಅಂಕಗಳು,ಸ್ನಾತಕೋತ್ತರ ಪದವಿ ಅರ್ಹತೆಗೆ 20 ಅಂಕಗಳು,ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ 36 ತಿಂಗಳು ಅಥವಾ ಅದಕ್ಕಿಂತ ಹೆಚ್ಚಿನ ಕಾರ್ಯಾನುಭವಕ್ಕೆ 20 ಅಂಕಗಳು ನೀಡಲಾಗುತ್ತದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ, ಕನ್ನಡ ಮತ್ತು ಇಂಗ್ಲೀಷ್ ಭಾಷೆ ತಿಳಿದಿರಬೇಕು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here