ಗೋನಾಳ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ರಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಿ:ಪಾಲಿಕೆ ಆರೋಗ್ಯಾಧಿಕಾರಿ ಹನುಮಂತಪ್ಪ

0
92

ಬಳ್ಳಾರಿ,ಮಾ.12;ಮಹಾನಗರ ಪಾಲಿಕೆ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ, ವಲ್ರ್ಡ್ ವಿಶನ್,ಲಿಯಾ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮವು ಗೋನಾಳು ಗ್ರಾಮದಲ್ಲಿ ಶುಕ್ರವಾರ ನಡೆಯಿತು.
ಮಹಾನಗರ ಪಾಲಿಕೆಯ ವೈದ್ಯಾಧಿಕಾರಿ ಡಾ.ಹನುಮಂತಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗ್ರಾಮದ ಪರಿಸರವನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ. ನಿಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ನೋಡಿಕೊಳ್ಳಿ. ನೆಹರು ಯುವ ಕೇಂದ್ರವು ಎಲ್ಲ ಯುವಕರನ್ನು ಒಂದು ಕಡೆ ಸೇರಿಸುವ ಮೂಲಕ ಯುವ ಶಕ್ತಿಯನ್ನು ಸಾರುವ ಕೆಲಸ ಮಾಡುತ್ತಿರುವುದು ತುಂಬಾ ಖುಷಿಯ ವಿಚಾರ ಎಂದು ಹೇಳಿದರು.
ವಲ್ರ್ಡ್ ವಿಶನ್‍ನ ಪ್ರೇಮಲತಾ ಅವರು ಮಾತನಾಡಿ ಭಾರತ ದೇಶದಲ್ಲಿ ಅತಿದೊಡ್ಡ ಸಂಖ್ಯೆಯಲ್ಲಿ ಯುವಕರಿದ್ದಾರೆ. ನಮ್ಮ ರಾಷ್ಟ್ರ ಯುವಕರನ್ನು ಹೊಂದಿದ ರಾಷ್ಟ್ರ. ನಿಮ್ಮ ಗ್ರಾಮಗಳನ್ನು ಸ್ವಚ್ಛವಾಗಿ ನೋಡಿಕೊಳ್ಳಲು ಯುವಕರು ಹೆಚ್ಚಾಗಿ ಗಮನಹರಿಸಬೇಕಿದೆ. ಸ್ವಚ್ಛ ಗ್ರಾಮದ ಕಾರ್ಯದಲ್ಲಿ ಯುವ ಜನತೆ ಮುಂದೆ ಬಂದು ಇತರರಿಗೆ ಮಾದರಿಯಾಗುವ ಕೆಲಸ ಮಾಡಬೇಕು ಎಂದರು.
ಲಿಯಾ ಸಂಸ್ಥೆಯ ಅಧ್ಯಕ್ಷರಾದ ಅಬ್ರಾಹಂ ಅವರು ಮಾತನಾಡಿ, ಸ್ವಚ್ಛ ಗ್ರಾಮ – ಸುಂದರ ಗ್ರಾಮ- ಹಸಿರುಮಯ ಗ್ರಾಮವನ್ನು ನಿರ್ಮಾಣ ಮಾಡಲು ಎಲ್ಲರೂ ಕೈಜೋಡಿಸಿ. ನಿಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಿ ಎಂದರು.
ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ಮುಕ್ತಗೊಳಿಸುವ ಸಲುವಾಗಿ ನೆಹರು ಯುವ ಕೇಂದ್ರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ವತಿಯಿಂದ ಗ್ರಾಮದ ಸಾರ್ವಜನಿಕರಿಗೆ ಬಟ್ಟೆ ಬ್ಯಾಗ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ನೆಹರು ಯುವ ಕೇಂದ್ರದ ಸಿಬ್ಬಂದಿ, ಗ್ರಾಮದ ಮುಖಂಡರು ಸೇರಿದಂತೆ ಇತರರು ಇದ್ದರು.

LEAVE A REPLY

Please enter your comment!
Please enter your name here