ನೆಹರು ಯುವ ಕೇಂದ್ರ; ನೆರೆಹೊರೆ ಯುವ ಸಂಸತ್ ಕಾರ್ಯಕ್ರಮ

0
130

ಬಳ್ಳಾರಿ.ಮಾ.17. ನೆಹರು ಯುವ ಕೇಂದ್ರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಯಶ್ವಸಿನಿ ಮಹಿಳಾ ಸಂಘದ ಸಂಯುಕ್ತಾಶ್ರಯದಲ್ಲ್ಲಿ ನೆರೆಹೊರೆ ಯುವ ಸಂಸತ್ ಕಾರ್ಯಕ್ರಮವು ನಗರದ ಶ್ರೀಮತಿ ಗಾಲಿರುಕ್ಮಿಣಿಮ್ಮ ಚೆಂಗಾರೆಡ್ಡಿ ಸ್ಮಾರಕ ಸರ್ಕಾರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಬುಧವಾರ ನಡೆಯಿತು.
ಸರ್ಕಾರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ Iಕಿಂಅ/ಓಂಂಅ sಸಂಚಾಲಕರಾದ ಡಾ. ಸುಧಾಕರ ಡಿ.ಅವರು ಕಾರ್ಯಕ್ರಮ ಉದ್ಘಾಟಿಸಿದರು. ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳಾದ ಮಾಂಟುಪಾತರ್ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ನೆರೆಹೊರೆ ಯುವ ಸಂಸತ್ ಮತ್ತು ಈಗಿನ ಆಡಳಿತದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎಸ್.ನಾರಾಯಣಪ್ಪ ಅವರು ಕಾಂiÀರ್iಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಸಾಂಸ್ಕøತಿಕ ಸಮಿತಿಯ ಸಂಚಾಲಕರಾದ ಡಾ.ಸೋಮಶೇಖರ್ ಎಂ., ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಎನ್. ಮಧುಸೂದನ, ಯಶಸ್ವಿನಿ ಮಹಿಳಾ ಸಂಘದ ಅಧ್ಯಕ್ಷರಾದ ವಿ.ಅಂಜಲಿ, ನೆಹರು ಯುವ ಕೇಂದ್ರದ ಅಮರೇಶರವರು, ರಾಷ್ರ್ಟೀಯ ಸ್ವಯಂ ಸೇವಕನಾದ ಬೆಟ್ಟಪ್ಪ ಮತ್ತು ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಸೇರಿದಂತೆ ಇತರರು ಇದ್ದರು.

LEAVE A REPLY

Please enter your comment!
Please enter your name here