ಮನೆಯಿಂದಲೇ ಮಕ್ಕಳಲ್ಲಿ ಸಮಾನತೆಯ ಪಾಠ ಕಲಿಸಬೇಕು : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

0
140

ಮೈಸೂರು:- ಮಹಿಳೆಯರು ಸವಾಲು ಸ್ವೀಕರಿಸಬೇಕು ಎಂಬುದು ಸರಿಯಲ್ಲ. ಹೆಣ್ಣಾಗಿ ಹುಟ್ಟಿ ಬದುಕುವುದೇ ಸವಾಲು ಎನ್ನುವಂತಿದೆ. ಹೆಣ್ಣು ಭ್ರೂಣ ಹತ್ಯೆ ತಪ್ಪು. ಈ ಕುರಿತು ಮಹಿಳೆಯರು ಎಚ್ಚರಿಕೆವಹಿಸಬೇಕು. ಮನೆಯಿಂದಲೇ ಮಕ್ಕಳಲ್ಲಿ ಸಮಾನತೆಯ ಪಾಠ ಕಲಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಹೇಳಿದರು.
ಮಾನಸಗಂಗೋತ್ರಿಯ ವಿಜ್ಞಾನಭವನದಲ್ಲಿ ಮಂಗಳವಾರ ಮೈಸೂರು ವಿವಿ ಮಹಿಳಾ ಉದ್ಯೋಗಿಗಳ ಸಮುದಾಯ, ಮಹಿಳಾ ಅಧ್ಯಯನ ಕೇಂದ್ರ, ಮಹಿಳಾ ಸಮಸ್ಯೆಗಳನ್ನು ನಿಭಾಯಿಸುವ ವೇದಿಕೆ ಮತ್ತು ಮೈತ್ರಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 110ನೇ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇತಿಹಾಸವನ್ನು ನೋಡಿದರೆ ಹಿಂದೆ ದೈಹಿಕ ಸಾಮಾಥ್ರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿತ್ತು. ಆದರೆ, ಪ್ರಸ್ತುತದಲ್ಲಿ ಬೌದ್ಧಿಕ ಸಾಮಾಥ್ರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಹೀಗಾಗಿ, ಮಹಿಳೆಯರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಮಹಿಳೆಯರ ಅಭಿವೃದ್ಧಿಗೆ ಪೆÇೀಷಕರ ಸಹಕಾರ ಬಹಳ ಪ್ರಮುಖವಾಗಿದೆ. ಹಿಂದೆ ಹೆಣ್ಣು ಮಕ್ಕಳಿಗೆ ಚಿಕ್ಕವಯಸ್ಸಿಗೆ ಮದುವೆ ಮಾಡಲಾಗುತ್ತಿತ್ತು. ಅಡುಗೆ ಮನೆ, ಕುಟುಂಬ ನಿರ್ವಹಣೆಯμÉ್ಟೀ ಅವರ ಬದುಕು ಎನ್ನುವಂತಾಗಿತ್ತು. ಆದರೆ, ಕಾಲಾನಂತರದಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿದ್ದರಿಂದ ಬದಲಾವಣೆ ಸಾಧ್ಯವಾಗಿದೆ ಎಂದು ಹೇಳಿದರು.
ಮಹಿಳೆಯರು ತಮ್ಮ ಮನೆ ಸೇರಿದಂತೆ ಸುತ್ತಮುತ್ತಲಿನಲ್ಲಿರುವವರಿಗೆ ಬೆಂಬಲ, ಪೆÇ್ರೀತ್ಸಾಹ ನೀಡುವ ಕಾರ್ಯ ಮಾಡಬೇಕು. ಪ್ರಸ್ತುತ ಒತ್ತಡದ ಬದುಕಿನಲ್ಲಿ ವೃತ್ತಿ ಹಾಗೂ ಕುಟುಂಬದ ನಿರ್ವಹಣೆಯ ಜೊತೆಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಮಹಿಳೆಯರು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಮೈಸೂರು ವಿವಿ ಕುಲಪತಿ ಪೆÇ್ರ.ಜಿ.ಹೇಮಂತ್ ಕುಮಾರ್, ಜಯದೇವ ಆಸ್ಪತ್ರೆ ಮಕ್ಕಳ ಹೃದ್ರೋಗ ಮುಖ್ಯಸ್ಥರಾದ ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ, ಕುಲಸಚಿವ ಪೆÇ್ರ.ಆರ್.ಶಿವಪ್ಪ ಹಾಗೂ ಮೈಸೂರು ವಿ.ವಿ.ಯ ಉದ್ಯೋಗಿಗಳ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here