ಮಾ.27 ರಂದು ಲೋಕ ಅದಾಲತ್

0
130

ಹಾಸನ ಮಾ. 17. ಜಿಲ್ಲಾದ್ಯಂತ ಎಲ್ಲಾ ತಾಲ್ಲೂಕುಗಳನ್ನೊಳಗೊಂಡಂತೆ ಎಲ್ಲಾ ನ್ಯಾಯಾಲಯಗಳಲ್ಲಿ ಮಾ.27 ರಂದು ಬೃಹತ್ ಲೋಕ ಅದಾಲತ್‍ನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಾಗೂ ಸದಸ್ಯ ಕಾರ್ಯದರ್ಶಿಯಾದ ಬಿ.ಕೆ ರವಿಕಾಂತ್ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾ ನ್ಯಾಯಲಯ ಆವರಣದಲ್ಲಿರುವ ಎ.ಡಿ.ಆರ್ ಕಟ್ಟಡದಲ್ಲಿ ಬೃಹತ್ ಲೋಕ ಅದಾಲತ್ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನ್ಯಾಯಾಲಯಗಳಲ್ಲಿ ಬಾಕಿ ಇರುವ ಎಲ್ಲಾ ವಿದಧ ವ್ಯಾಜ್ಯಗಳು ಬಗೆಹರಿಸಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ವಾಹನ ಪ್ರಕರಣಗಳು, ಕೌಟುಂಬಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು ಕಂದಾಯ ಪ್ರಕರಣಗಳು, ಜನನ ಮತ್ತು ಮರಣ ನೋಂದಣಿ ಪ್ರಕರಣಗಳು, ಜೀವನಾಂಶ ಪ್ರಕರಣಗಳು ಹಾಗೂ ಇನ್ನಿತರೆ ಲಘು ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಮತ್ತು ವ್ಯಾಜ್ಯಪೂರ್ವ ಬ್ಯಾಂಕ್ ಸಾಲ ಮರುಪಾವತಿಯ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದ್ದು ಸಂಬಂಧಪಟ್ಟ ಕಕ್ಷಿಗಾರರು ವಕೀಲರ ಮೂಲಕ ಅಥವಾ ಖುದ್ದಾಗಿ ರಾಜಿ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಕೊಳ್ಳಬಹುದಾಗಿದ್ದು ಇದರ ಸದುಪಯೋಗವನ್ನು ಕಕ್ಷಿದಾರರು ಪಡೆಯಬಹುದಾಗಿದೆ ಎಂದರು.

ರಾಜಿ ಪ್ರಕ್ರಿಯೆಯಿಂದ ಸಮಯ ಮತ್ತು ಹಣವನ್ನು ಉಳಿಸಬಹುದಾಗಿದ್ದು, ಉಭಯ ಪಕ್ಷಗಾರರ ನಡುವಿನ ಬಾಂಧವ್ಯವು ವೃದ್ಧಿಸುವುದು. ಆದುದರಿಂದ ಕಕ್ಷಿಗಾರರು ಲೋಕ್ ಅದಾಲತ್‍ನಲ್ಲಿ ಪಾಲ್ಗೊಳ್ಳುವ ಮೂಲಕ ಅನುಕೂಲವನ್ನು ಪಡೆದುಕೊಳ್ಳಬಹುದು ಎಂದು ಬಿ.ಕೆ. ರವಿಕಾಂತ್ ಅವರು ಹೇಳಿದರು.

ಹಾಸನದ ಎಲ್ಲಾ ನ್ಯಾಯಾಲಯಗಳಲ್ಲಿ ರಾಜಿ ಮಾಡಬಹುದಾದಂತಹ ಎಲ್ಲಾ ವಿದಧ ಒಟ್ಟು 72.881 ಪ್ರಕರಣಗಳು ಬಾಕಿ ಇದ್ದು, 16.738 ಪ್ರಕರಣಗಳು ರಾಜಿ ಪ್ರಕ್ರಿಯೆಗಾಗಿ ಲಭ್ಯವಿದ್ದು ರಾಜಿ ಸಂಧಾನಕ್ಕಾಗಿ ಎಲ್ಲಾ ರೀತಿಯ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನೊಳಗೊಂಡಂತೆ 6751 ಪ್ರಕರಣಗಳನ್ನು ಗುರುತಿಸಲಾಗಿದೆ ಎಂದರು.

ಜಿಲ್ಲಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ 4000 ಕ್ಕೂ ಹೆಚ್ಚಿನ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸುವ ಗುರಿಯನ್ನು ಹೊಂದಲಾಗಿದೆ ಹಾಗೂ ಕಕ್ಷಿದಾರರು ಬೃಹತ್ ಲೋಕ ಅದಾಲತ್‍ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೋಂಡು ಸದುಪಯೋಗವನ್ನು ಪಡೆದುಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಬಿ.ಕೆ. ರವಿಕಾಂತ್ ರವರು ತಿಳಿಸಿರುತ್ತಾರೆ.

ಸುದ್ದಿಗೋಷ್ಠಿಯಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ಜೆ.ಪಿ ಶೇಖರ್ ಹಾಜರಿದ್ದರು.

LEAVE A REPLY

Please enter your comment!
Please enter your name here