ಬಳ್ಳಾರಿ ರೈಲ್ವೆ ಕಾಮಗಾರಿಗಳು ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಕುರಿತು ಚರ್ಚೆ ತಿಂಗಳೊಳಗೆ ಕಾಮಗಾರಿಗಳ ಡಿಪಿಆರ್ ಸಿದ್ದಪಡಿಸಲು ಸೂಚನೆ

0
81

ಬಳ್ಳಾರಿ,ಮಾ.18 : ನಗರದ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಅವರ ಅಧ್ಯಕ್ಷತೆಯಲ್ಲಿ ನಗರದ ರೈಲ್ವೇ ಕಾಮಗಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ನೈರುತ್ಯ ರೈಲ್ವೆಯ ವಿಭಾಗೀಯ ಹಿರಿಯ ಎಂಜಿನಿಯರ್ ಕೃತ್ಯನಂದ ಜಾ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಯಿತು.
ಸಭೆಯಲ್ಲಿ ಮೋತಿ ರೈಲ್ವೇ ಬ್ರಿಡ್ಜ್ ಅಗಲೀಕರಣ, ಸುಧಾ ಕ್ರಾಸ್‍ನಲ್ಲಿ ಬರುವ ರೈಲ್ವೇ ಫ್ಲೈಓವರ್ ನಿರ್ಮಿಸುವುದು, ರಂಗಮಂದಿರ ಹತ್ತಿರವಿರುವ ಹಾಲಿ ರೈಲ್ವೇವೆಂಟ್ ಎತ್ತರಿಸುವುದು, ಅನಂತಪುರ ರಸ್ತೆಯಿಂದ ಸಂಗನಕಲ್ಲು ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯ ಮಧ್ಯಬಾಗದಲ್ಲಿನ ರೈಲ್ವೇ ಹಳಿಗೆ ಅಂಡರ್ ಬ್ರಿಡ್ಜ್‍ನ್ನು ನಿರ್ಮಿಸುವುದು, ಬಳ್ಳಾರಿ ನಗರದ ಔಟರ್ ರಿಂಗ್ ರೋಡ್ ಕಾಮಗಾರಿಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಈ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗಾಗಿ ಕಾಮಗಾರಿಗಳ ಅಂದಾಜು ವೆಚ್ಚದ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸಭೆಯಲ್ಲಿದ್ದ ಅಧಿಕಾರಿಗಳಿಗೆ ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಸೂಚಿಸಿದರು.
ಈ ಸಂದರ್ಭದಲ್ಲಿ ರಾಬಕೊ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ವೀರಶೇಖರ್‍ರೆಡ್ಡಿ, ಬಳ್ಳಾರಿ ನೈರುತ್ಯ ರೈಲ್ವೆಯ ಜಿಲ್ಲೆಯ ವಿಭಾಗದ ಹಿರಿಯ ಅಭಿಯಂತರ ಉಮಾಮಹೇಶ್ವರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಮಹಾನಗರ ಪಾಲಿಕೆ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ವೀರೇಂದ್ರ ಕುಂದಗೋಳ, ನಗರಾಭಿವೃದ್ಧಿ ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಅಭಿಯಂತರ ರವಿಶಂಕರ್ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here