ಬೈಕ್ ಖರೀದಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನ

0
160

ಬಳ್ಳಾರಿ,ಮಾ.18. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ದಿ ನಿಗಮದಿಂದ 2020-21ನೇ ಸಾಲಿಗೆ ಇ-ವಾಣಿಜ್ಯ ಸಂಸ್ಥೆಗಳಾದ Zomato, Swiggy, Uber ets, Amazon ಮೊದಲಾದ ಸಂಸ್ಥೆಗಳಲ್ಲಿ ಉದ್ಯೋಗ ಮಾಡುತ್ತಿರುವ ಹಿಂದುಳಿದ ವರ್ಗಗಗಳಿಗೆ ಸೇರಿದ ಪ್ರವರ್ಗ-1, ಪ್ರವರ್ಗ-2ಎ, 3ಬಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಸವಿತಾ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ಹಾಗೂ ಮತೀಯ ಅಲ್ಪಸಂಖ್ಯಾತರನ್ನು ಹೊರತು ಪಡಿಸಿ) ಯುವಕರಿಗೆ ಬೈಕ್ ಖರೀದಿಸಲು ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಗಮದಿಂದ 25 ಸಾವಿರ ರೂ.ಗಳ ಸಹಾಯ ಧನ ಹಾಗೂ ಉಳಿಕೆ ಮೊತ್ತ ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಪಡೆಯಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಮಾ.25ರವರೆಗೆ ಅವಧಿ ವಿಸ್ತರಿಸಲಾಗಿದೆ. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಫಲಾಪೇಕ್ಷಿಗಳು, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಬಳ್ಳಾರಿ ಇಲ್ಲಿ ಉಚಿತ ಅರ್ಜಿಗಳನ್ನು ಪಡೆಯಬಹುದಾಗಿದೆ. ಅಲ್ಲದೆ ನಿಗಮದ ವೆಬ್‍ಸೈಟ್ www.dbcdc.karnataka.gov.in ಇಲ್ಲಿ ಪಡೆಯಬಹುದಾಗಿರುತ್ತದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ/ದಾಖಲಾತಿಗಳೊಂದಿಗೆ ಆನ್ ಲೈನ್ ಅಥವಾ ಆಫ್ ಲೈನ್ ಮೂಲಕ ಮಾ.25ರೊಳಗೆ ಸಲ್ಲಿಸಬೇಕು. ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್: www.dbcdc.karnataka.gov.in ಹಾಗೂ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಬಳ್ಳಾರಿ. 08392-267038 ದೂರವಾಣಿಯನ್ನು ಸಂಪರ್ಕಿಸುವುದು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here