ವಿವಿಯ ಬೌದ್ಧಿಕ ಜ್ಞಾನ ಸಂಪತ್ತು ಸದುಪಯೋಗಪಡಿಸಿಕೊಂಡು ಸಾಧನೆಯ ಹಾದಿಯಲ್ಲಿ ಸಾಗಿ:ಕುಲಪತಿ ಡಾ ಸ.ಚಿ.ರಮೇಶ

0
87

ಬಳ್ಳಾರಿ,ಮಾ.19 : ಗುರು ಎಂಬುವನು ದೇವರಗಿಂತ ದೊಡ್ಡವನು. ಗುರು ಕಲಿಸಿದ ವಿದ್ಯೆ ಜೀವನದಲ್ಲಿ ಎಂದಿಗೂ ನಮ್ಮನ್ನು ಕೈ ಬಿಡುವುದಿಲ್ಲ. ಗುರುಗಳು ಸದಾ ವಿದ್ಯಾರ್ಥಿಗಳ ಬೆನ್ನ ಹಿಂದೆ ನಿಂತು ಮಾರ್ಗದರ್ಶನ ಮಾಡುತ್ತಾ ಸಾರ್ಥಕತೆ ಮೆರೆಯುತ್ತಾರೆ ಎಂದು ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ ಸ. ಚಿ. ರಮೇಶ್ ಅವರು ಹೇಳಿದರು.
ಕನ್ನಡ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಭಾಷಾ ನಿಕಾಯದ ಎಂ.ಎ. ಪಿಎಚ್.ಡಿ ಕನ್ನಡ ಸಾಹಿತ್ಯ ಸಂಯೋಜಿತ ಪದವಿಯ 2021ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲೂ ಹೊಸ ವಿಚಾರ ಮತ್ತು ಚಿಂತನೆಗಳಿರುತ್ತವೆ. ಆದರೆ ಅವು ಮುಖ್ಯ ಭೂಮಿಕೆಗೆ ಬರಬೇಕಾದರೆ ಶಿಕ್ಷಣ ಅತ್ಯವಶ್ಯಕ. ಅಂತಹ ಮೌಲ್ಯಯುತ ಶಿಕ್ಷಣವನ್ನು ಬೌದ್ಧಿಕ ಜ್ಞಾನವನ್ನ ವಿಶ್ವವಿದ್ಯಾಲಯ ಪ್ರಾರಂಭದಿಂದಲೂ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಧಾರೆ ಎರೆಯತ್ತಿದೆ. ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಬೌದ್ಧಿಕ ಜ್ಞಾನ ಸಂಪತ್ತನ್ನು ಸದುಪಯೋಗಪಡಿಸಿಕೊಂಡು ಸಾಧನೆಯ ಹಾದಿಯಲ್ಲಿ ಸಾಗಬೇಕು ಎಂದು ಹೇಳಿದರು.
ವಿವಿಯ ಕುಲಸಚಿವ ಡಾ.ಎ.ಸುಬ್ಬಣ್ಣ ರೈ ಮಾತನಾಡಿ ವಿದ್ಯಾರ್ಥಿಗಳು ಮುಕ್ತವಾಗಿ ಅಧ್ಯಯನ ಮಾಡಲು ಅನುಕೂಲವಾಗುವಂತ ವಾತಾವರಣ ನಮ್ಮ ವಿಶ್ವವಿದ್ಯಾಲಯದಲ್ಲಿದೆ. ವಿದ್ಯಾರ್ಥಿಗಳ ಬೌದ್ಧಿಕ ಜ್ಞಾನವನ್ನೂ ವೃದ್ಧಿಸಲು ಏಳು ನಿಕಾಯದ ಬೋಧಕರಿಂದ ವಸ್ತು ವಿಷಯವನ್ನು ಬೋಧಿಸಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ಸಂಶೋಧನೆ ಹಾದಿಯಲ್ಲಿ ಸಾಗಲು ಅನುಕೂಲವಾಗತ್ತವೆ ಎಂದು ಹೇಳಿದರು.
ಭಾಷಾ ನಿಕಾಯದ ಡೀನ್‍ಗಳಾದ ಡಾ. ವೀರೇಶ ಬಡಿಗೇರ ಮತ್ತು ಎಂ.ಎ. ಪಿಎಚ್.ಡಿ ಕನ್ನಡ ಸಾಹಿತ್ಯ ಸಂಯೋಜಿತ ಪದವಿಯ ಸಂಚಾಲಕ ಡಾ. ಅಮರೇಶ ನುಗಡೋಣಿ ಮಾತನಾಡಿದರು.
ವಿದ್ಯಾರ್ಥಿಗಳಾದ ಅಕ್ಷತಾ ಹಾಗೂ ಮಂಜುನಾಥ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.ಪಂಪಾಪತಿ ಸ್ವಾಗತಿಸಿದರು. ಮಂಜುಳಾ ಎಂ. ವಂದಿಸಿದರು. ಲಕ್ಷ್ಮಿ ನಿರೂಪಿಸಿದರು. ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಆಡಳಿತ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಧಿತರಿದ್ದರು

LEAVE A REPLY

Please enter your comment!
Please enter your name here