ನನ್ನದೊಂದು ಭಿನ್ನಹ

0
283

ರಾಜ್ಯದಲ್ಲಾಗಲೀ ಅಥವಾ ಜಿಲ್ಲೆಗಳಲ್ಲಾಗಲೀ ಸಾಹಿತ್ಯ ಪರಿಷತ್ತಿನ ಚುನಾವಣೆಗಳಲ್ಲಿ ಮಹಿಳೆಯರು ಸ್ಪರ್ಧಿಸುವುದು ತೀರಾ ಅಪರೂಪದಲ್ಲಿ ಅಪರೂಪ.. ಜೊತೆಗೆ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಲ್ಲೂ ಮಹಿಳೆಯರು ತುಂಬಾ ಕಡಿಮೆ ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಇಂಥಾ ವಾತಾವರಣದಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ವಿನೋದಾ ಕರಣಂ ಎಂಬ ಮಹಿಳೆ ಜಿಲ್ಲಾ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದು, ಕಸಾಪದ ಚುನಾವಣಾ ಕಣಕ್ಕೆ ಇಳಿಯಲು ನಿರ್ಧರಿಸಿರುವುದು ಹೆಮ್ಮೆಯ ವಿಷಯ.

ವಿನೋದ ಕೆ. ಅವರು ೨೫ ವರ್ಷಗಳ ಕಾಲ ಹೈಸ್ಕೂಲಿನ ಮತ್ತು ಕಾಲೇಜಿನ ವಿದ್ಯಾರ್ಥಿಗಳಿಗೆ ಇತಿಹಾಸ ಮತ್ತು ಕನ್ನಡ ವಿಷಯವನ್ನು ಬೋಧಿಸಿದ್ದಾರೆ. ಅವರೇ ಬರೆದಿರುವಂಥಾ ೧೩ ಪುಸ್ತಕಗಳನ್ನು ಅವರದೇ ಆದ ತೇಜು ಪ್ರಕಾಶನದಲ್ಲಿ ಪ್ರಕಟಿಸಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಸಾಮರ್ಥ್ಯವೂ ಅವರಲ್ಲಿದೆ. ಜೊತೆಗೆ ಅವರು ವಕೀಲರೂ ಆಗಿದ್ದಾರೆ.

ವಿಜಯನಗರ ಜಿಲ್ಲೆಯಲ್ಲಿ ಹುಟ್ಟಿ ಬೆಳೆದು ಬಳ್ಳಾರಿ ಜಿಲ್ಲೆಯಲ್ಲಿ ವಾಸವಿರುವ ಅವರು ಅಖಂಡ ಬಳ್ಳಾರಿಯ ಕೊಂಡಿಯಂತೆ ಕೆಲಸ ಮಾಡುತ್ತಾರೆಂಬುದರ ಬಗ್ಗೆ ಯಾವ ಅನುಮಾನವೂ ಇಲ್ಲ. ಈಗಾಗಲೇ ಜಿಲ್ಲೆಯಾದ್ಯಂತ ಎಲ್ಲಾ ತಾಲೂಕುಗಳಲ್ಲಿ ಕಸಾಪ ಸದಸ್ಯರನ್ನು ಭೇಟಿ ಮಾಡಿ ಬೆಂಬಲಿಸುವಂತೆ ಕೋರಿದ್ದಾರೆ. ಹಾಗೇ ಎಲ್ಲೆಡೆಯಿಂದಲೂ ಉತ್ತಮ ಪ್ರತಿಕ್ರಿಯೆ ದೊರೆತಿದೆ.

ಇವರು ಬಳ್ಳಾರಿಗೆ ಅಖಿಲಭಾರತ ಸಾಹಿತ್ಯ ಸಮ್ಮೇಳನ ತರುವ ಯೋಚನೆ ಹೊಂದಿದ್ದಾರೆ ಮತ್ತು ಸಾಹಿತ್ಯ ಪರಿಷತ್ತಿನಲ್ಲಿ ಹಲವು ಬದಲಾವಣೆಗಳನ್ನು ತರುವುದರ ಜೊತೆಗೆ ಉತ್ತಮ ಕೆಲಸಗಳನ್ನು ಕಾರ್ಯ ರೂಪಕ್ಕೆ ತರುವಲ್ಲಿ ಶ್ರಮಿಸುತ್ತಾರೆಂಬ ಭರವಸೆಯನ್ನು ಮೂಡಿಸಿದ್ದಾರೆ.
ಆದ್ದರಿಂದ.. ಎಲ್ಲಾ ಗೌರವಾನ್ವಿತ ಸದಸ್ಯರು ಅರ್ಹ ಮಹಿಳೆಯನ್ನು ಬೆಂಬಲಿಸುವುದರ ಮೂಲಕ ಸಾಹಿತ್ಯ ಲೋಕದಲ್ಲಿ ಲಿಂಗ ತಾರತಮ್ಯ ನಿವಾರಿಸಿ ಬಳ್ಳಾರಿ ಕಸಾಪದಲ್ಲಿ ಹೊಸ ಅಧ್ಯಾಯ ಬರೆಯಬೇಕೆಂದು ವಿನೋದ ಕೆ. ಅವರ ಪರವಾಗಿ ವಿನಂತಿಸಿಕೊಳ್ಳುತ್ತಿದ್ದೇನೆ.

ಸಿ.ಎಂ. ಗಂಗಾಧರಯ್ಯ
ಉತ್ತಮ ಶಿಕ್ಷಕ ರಾಷ್ಟ್ರ ಪ್ರಶಸ್ತಿ ಪುರಸ್ಕೃತರು
ಬಳ್ಳಾರಿ.

LEAVE A REPLY

Please enter your comment!
Please enter your name here