ಸ್ವಚ್ಛ ಬಳ್ಳಾರಿ ಸ್ವಸ್ಥ ಬಳ್ಳಾರಿ ಅಭಿಯಾನ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಿ:ಪ್ರೀತಿ ಗೆಹ್ಲೋಟ್

0
119

ಬಳ್ಳಾರಿ,ಮಾ.25 : ಬಳ್ಳಾರಿ ಮಹಾನಗರ ಪಾಲಿಕೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ನೋಪಾಸನಾ ಸಂಯುಕ್ತಾಶ್ರಯದಲ್ಲಿ ಸ್ವಚ್ಛ ಬಳ್ಳಾರಿ ಸ್ವಸ್ಥ ಬಳ್ಳಾರಿ ಅಭಿಯಾನ ನಿಮಿತ್ತ ಹಸಿ ಕಸ ಮತ್ತು ಒಣ ಕಸ ಕಾಂಪೋಸ್ಟಿಂಗ್ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವು ನಗರದ ತಾಳೂರು ರಸ್ತೆಯಲ್ಲಿರುವ ಸರ್ಕಾರಿ ವಸತಿ ಗೃಹದ ಬಡಾವಣೆಯಲ್ಲಿ ಬುಧವಾರ ನಡೆಯಿತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ಪ್ರೀತಿ ಗೆಹ್ಲೋಟ್ ಅವರು ಸರ್ಕಾರಿ ವಸತಿ ಗೃಹದ ಬಡಾವಣೆಯ ಜನರಿಗೆ ಸ್ವಚ್ಛತಾ ಬಗ್ಗೆ ಅರಿವು ಮೂಡಿಸಿದರು. ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆವಾಗಿಟ್ಟುಕೊಳ್ಳಿ ಎಂದು ಸಾರ್ವಜನಿಕರಿಗೆ ತಿಳಿಸಿದರು.
ಬಳ್ಳಾರಿಯನ್ನು ಒಂದು ಸ್ವಚ್ಛ ಮತ್ತು ಸುಂದರ ನಗರವನ್ನಾಗಿ ನಿರ್ಮಾಣ ಮಾಡುವಲ್ಲಿ ಕಸ ವಿಂಗಡನೆಯು ಮಹತ್ವ ಪಡೆದುಕೊಳ್ಳಲಿದೆ. ಹಸಿ ಕಸ ಮತ್ತು ಒಣ ಕಸ ಎಂದು ಬೇರ್ಪಡಿಸಿದರೆ ಕಾಂಪೋಸ್ಟಿಂಗ್ ಮಾಡಲು ಸುಲಭವಾಗುತ್ತದೆ ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಮಹಿಳೆಯರಿಗೆ ಹಸಿ ಕಸ ಮತ್ತು ಒಣ ಕಸ ಕಾಂಪೋಸ್ಟಿಂಗ್ ಮಾಡುವ ವಿಧಾನವನ್ನು ತೋರಿಸಲಾಯಿತು. ಈ ಕಾಂಪೋಸ್ಟಿಂಗ್‍ನಿಂದ ತಯಾರಿಸುವ ಗೊಬ್ಬರವನ್ನು ತಮ್ಮ ತೋಟಕ್ಕೆ ಯಾವ ರೀತಿಯಲ್ಲಿ ಉಪಯೋಗಿಸಬಹುದು ಎನ್ನವುದರ ಕುರಿತು ಮಾಹಿತಿ ನೀಡಲಾಯಿತು.
ಪ್ರಧಾನ ಜಿಲ್ಲಾ ಮತ್ತ ಸತ್ರ ನ್ಯಾಯಾಧೀಶರಾದ ಎಸ್.ಹೆಚ್.ಪುಷ್ಪಾಂಜಲಿದೇವಿ, ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿ ಡಾ.ಹನುಮಂತಪ್ಪ, ರೆಡ್‍ಕ್ರಾಸ್‍ನ ಜಿಲ್ಲಾ ಕಾರ್ಯದರ್ಶಿಗಳಾದ ಎಂ.ಎ.ಷಕೀಬ್ ಸಾರ್ವಜನಿಕರು ಇದ್ದರು.

LEAVE A REPLY

Please enter your comment!
Please enter your name here